ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಚಿಕ್ಕ ಹೊಸಹಳ್ಳಿಯಲ್ಲಿ ನಡೆಯುತ್ತಿರುವ ಮಹದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಜಾತ್ರೆಯ ಸಂದರ್ಭದಲ್ಲಿ ಅಗ್ನಿಕೊಂಡ ಹಾಯುವಾಗ ಅರ್ಚಕರೊಬ್ಬರು ಕಾಲು ಜಾರಿ ಬೆಂಕಿ ಕೊಂಡದಲ್ಲಿ ಬಿದ್ದ ಘಟನೆ ನಡೆದಿದೆ. ಇದರಿಂದ ಕೆಲಕಾಲ ಭಕ್ತರು ಆತಂಕಕ್ಕೊಳಗಾದರು.
ಆನೇಕಲ್(ಏ.22): ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಚಿಕ್ಕ ಹೊಸಹಳ್ಳಿಯಲ್ಲಿ ನಡೆಯುತ್ತಿರುವ ಮಹದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಜಾತ್ರೆಯ ಸಂದರ್ಭದಲ್ಲಿ ಅಗ್ನಿಕೊಂಡ ಹಾಯುವಾಗ ಅರ್ಚಕರೊಬ್ಬರು ಕಾಲು ಜಾರಿ ಬೆಂಕಿ ಕೊಂಡದಲ್ಲಿ ಬಿದ್ದ ಘಟನೆ ನಡೆದಿದೆ. ಇದರಿಂದ ಕೆಲಕಾಲ ಭಕ್ತರು ಆತಂಕಕ್ಕೊಳಗಾದರು.
ಘಟನೆ ವಿವರ:
ಕಳೆದ ಎರಡು ದಿನಗಳಿಂದ ಚಿಕ್ಕ ಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ನಡೆಯುತ್ತಿರುವ ಜಾತ್ರಾ ಮಹೋತ್ಸವದಲ್ಲಿ, ಪೂಜಾರಿಯೊಬ್ಬರು ಕೊಂಡ ಹಾಯುವ ಸಂದರ್ಭದಲ್ಲಿ ಆಯಾತಪ್ಪಿ ಬೆಂಕಿಯ ಕೊಂಡದಲ್ಲಿ ಬಿದ್ದಿದ್ದಾರೆ. ಕ್ಷಣಮಾತ್ರದಲ್ಲಿ ಸ್ಥಳೀಯರು ಧಾವಿಸಿ, ಅರ್ಚಕರನ್ನು ಸುರಕ್ಷಿತವಾಗಿ ರಕ್ಷಿಸಿದ್ದಾರೆ. ತಕ್ಷಣವೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಪೂಜಾರಿಯ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಚಿಕಿತ್ಸೆಗೆ ಒಳಗಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಇದನ್ನೂ ಓದಿ: Pahalgam terror attack: : ಹಿಂದೂಗಳ ಗುರಿಯಾಗಿಸಿ ದಾಳಿ, ಪಾಕಿಸ್ತಾನದ ಕೈವಾಡ, ಪೊಲೀಸ್ ಸಮವಸ್ತ್ರದಲ್ಲಿದ್ದ ಟೆರರಿಸ್ಟ್!
ಘಟನೆಯ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಭಕ್ತರು ಮತ್ತು ಸ್ಥಳೀಯರು ತಕ್ಷಣ ಕಾರ್ಯಪ್ರವೃತ್ತರಾಗಿ, ಅರ್ಚಕರನ್ನು ಕೊಂಡದಿಂದ ರಕ್ಷಿಸಿದ್ದಾರೆ. ಈ ಘಟನೆಯ ವಿಡಿಯೋ ಕೆಲವು ಸ್ಥಳೀಯರ ಮೊಬೈಲ್‌ನಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ಪೊಲೀಸರು ಭೇಟಿ ಪರಿಶೀಲನೆ:
ಆನೇಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜಾತ್ರೆಯ ಸುರಕ್ಷತಾ ಕ್ರಮಗಳ ಬಗ್ಗೆ ತನಿಖೆ ಆರಂಭಿಸಲಾಗಿದೆ ಎಂದು ಆನೇಕಲ್ ಪೊಲೀಸ್ ಠಾಣೆಯ ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ: Pahalgam Terrorist Attack: ನಾಲ್ವರು ಪ್ರವಾಸಿಗರ ಮೇಲೆ ಭಯೋತ್ಪಾದಕರ ದಾಳಿ!
ಜಾತ್ರೆ ಮುಂದುವರಿಕೆ:
ಈ ಘಟನೆಯ ಹೊರತಾಗಿಯೂ, ಚಿಕ್ಕ ಹೊಸಹಳ್ಳಿಯ ಮಹದೇಶ್ವರ ಸ್ವಾಮಿ ಜಾತ್ರೆಯು ಯಾವುದೇ ಅಡಚಣೆಯಿಲ್ಲದೆ ಮುಂದುವರಿದಿದೆ. ಸ್ಥಳೀಯ ಆಡಳಿತ ಮತ್ತು ಜಾತ್ರಾ ಸಮಿತಿಯು ಭಕ್ತರ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಿದ್ದು, ಮುಂದಿನ ಕಾರ್ಯಕ್ರಮಗಳು ನಿಗದಿತ ಸಮಯಕ್ಕೆ ಸಾಗಲಿವೆ.
