ಬೇಸಿಗೆ ಹಿನ್ನೆಲೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಅಂಗನವಾಡಿ ಕೇಂದ್ರಗಳ ಕಾರ್ಯ ನಿರ್ವಹಣಾ ಸಮಯವನ್ನು ಈ ಮೊದಲು ಬೆಳಗ್ಗೆ 8 ರಿಂದ ಮಧ್ಯಾಹ್ನ 12 ರವರೆಗೂ ನಿಗದಿಪಡಿಸಲಾಗಿತ್ತು. ಬಿಸಿಲು ಹೆಚ್ಚಾಗಿರುವುದರಿಂದ ಉಳಿದ ಜಿಲ್ಲೆಗಳಿಗೂ ವಿಸ್ತರಿಸಬೇಕು ಎಂಬ ಮನವಿ ಹಿನ್ನೆಲೆಯಲ್ಲಿ ಏ.15 ರಿಂದ ಮೇ 10 ರವರೆಗೂ ರಾಜ್ಯಾದ್ಯಂತ ವಿಸ್ತರಿಸಲಾಗಿದೆ. 

ಬೆಂಗಳೂರು(ಏ.11): ರಾಜ್ಯದಲ್ಲಿ ಬಿಸಿಲು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕಲ್ಯಾಣ ಕರ್ನಾಟಕ ಭಾಗಕ್ಕೆ ಮಾತ್ರ ಅನ್ವಯವಾಗಿದ್ದ ಅಂಗನವಾಡಿ ಕೇಂದ್ರಗಳ ಕಾರ್ಯನಿರ್ವಹಣಾ ಸಮಯ ಬದಲಾವಣೆಯನ್ನು ಎಲ್ಲ ಜಿಲ್ಲೆಗಳಿಗೂ ವಿಸ್ತರಿಸಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸುತ್ತೋಲೆ ಹೊರಡಿಸಿದೆ. 

Add Asianetnews Kannada as a Preferred SourcegooglePreferred

ಬೇಸಿಗೆ ಹಿನ್ನೆಲೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಅಂಗನವಾಡಿ ಕೇಂದ್ರಗಳ ಕಾರ್ಯ ನಿರ್ವಹಣಾ ಸಮಯವನ್ನು ಈ ಮೊದಲು ಬೆಳಗ್ಗೆ 8 ರಿಂದ ಮಧ್ಯಾಹ್ನ 12 ರವರೆಗೂ ನಿಗದಿಪಡಿಸಲಾಗಿತ್ತು. ಬಿಸಿಲು ಹೆಚ್ಚಾಗಿರುವುದರಿಂದ ಉಳಿದ ಜಿಲ್ಲೆಗಳಿಗೂ ವಿಸ್ತರಿಸಬೇಕು ಎಂಬ ಮನವಿ ಹಿನ್ನೆಲೆಯಲ್ಲಿ ಏ.15 ರಿಂದ ಮೇ 10 ರವರೆಗೂ ರಾಜ್ಯಾದ್ಯಂತ ವಿಸ್ತರಿಸಲಾಗಿದೆ. 

ಕಲಬುರಗಿಯಲ್ಲಿ ಮತ್ತೆ ಉಷ್ಣ ಅಲೆ ಕಟ್ಟೆಚ್ಚರ: ಕಂಗಾಲಾದ ಜನ- ಜಾನುವಾರು..!

ಅಂಗನವಾಡಿ ಸಿಬ್ಬಂದಿಗೆ ಮೇ 11 ರಿಂದ 26 ವರೆಗೂ ಬೇಸಿಗೆ ರಜೆ ನೀಡಲಾಗಿದೆ. ಮೇ 27 ರಿಂದ ಅಂಗನವಾಡಿಗಳು ಎಂದಿನಂತೆ ಬೆಳಗ್ಗೆ 9.30 ರಿಂದ ಸಂಜೆ 4 ಗಂಟೆಯವರೆಗೂ ಕಾರ್ಯ ನಿರ್ವಹಿಸಬೇಕು ಎಂದು ಸೂಚಿಸಲಾಗಿದೆ.