ಕಲಬುರಗಿ ಸೇರಿದಂತೆ ರಾಜ್ಯದ ನಾಲ್ಕು ಪ್ರಮುಖ ನಗರಗಳನ್ನು ಸ್ಮಾರ್ಟ್‌ಸಿಟಿ ಯೋಜನೆಯಡಿ ಪರಿಗಣಿಸುವಂತೆ ಕೇಂದ್ರಕ್ಕೆ ಮನವಿ ಸ್ಮಾರ್ಟ್‌ಸಿಟಿ ಯೋಜನೆ ಬಗ್ಗೆ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ಹೇಳಿಕೆ

ಕಲಬುರಗಿ (ಆ.30): ಕಲಬುರಗಿ ಸೇರಿದಂತೆ ರಾಜ್ಯದ ನಾಲ್ಕು ಪ್ರಮುಖ ನಗರಗಳನ್ನು ಸ್ಮಾರ್ಟ್‌ಸಿಟಿ ಯೋಜನೆಯಡಿ ಪರಿಗಣಿಸುವಂತೆ ಕೇಂದ್ರಕ್ಕೆ ಕೋರಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ತಿಳಿಸಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಈಗಾಗಲೇ ರಾಜ್ಯದ 7 ನಗರಗಳನ್ನು ಸ್ಮಾರ್ಟ್‌ ಸಿಟಿ ಯೋಜನೆಯಲ್ಲಿ ಕೇಂದ್ರ ಪರಿಗಣಿಸಿದೆ. ಇದೀಗ ಮತ್ತೆ ಕಲಬುರಗಿ, ವಿಜಯಪುರ, ಬಳ್ಳಾರಿ ಹಾಗೂ ಮೈಸೂರು ನಗರಗಳನ್ನೂ ಯೋಜನೆಯಲ್ಲಿ ಪರಿಗಣಿಸುವಂತೆ ಕೋರಿದ್ದೇವೆ ಎಂದು ಹೇಳಿದರು. ಇತ್ತೀಚೆಗೆ ಕೇಂದ್ರ ನಗರಾಭಿವೃದ್ಧಿ ಸಚಿವರನ್ನು ತಾವೇ ಭೇಟಿ ಮಾಡಿ ಈ ಪ್ರಸ್ತಾವನೆ ಸಲ್ಲಿಸಿದ್ದಾಗಿ ಹೇಳಿದ ಸಚಿವರು, ಇದನ್ನು ಪರಿಗಣಿಸುವ ಭರವಸೆಯನ್ನು ಕೇಂದ್ರ ನೀಡಿದೆ ಎಂದರು.

ಮೈಸೂರು : ಪಾರಂಪರಿಕ ಶೈಲಿಯಲ್ಲೇ ಹೊಸದಾಗಿ ಈ ಕಟ್ಟಡಗಳ ಪುನರ್ ನಿರ್ಮಾಣ

ಕಲಬುರಗಿಯನ್ನು ಯಾವ ಕಾರಣಕ್ಕೂ ನಿರ್ಲಕ್ಷ್ಯ ಮಾಡುವುದಿಲ್ಲ ಎಂದ ಸಚಿವರು, ಇಷ್ಟುದಿನ ಪಾಲಿಕೆಯಲ್ಲಿ ಕೇವಲ ಕಾಂಗ್ರೆಸ್ಸಿಗೆ ಅಧಿಕಾರ ನೀಡಿರುವ ಕಲಬುರಗಿ ಮಂದಿ ಈ ಬಾರಿ ಬದಲಾವಣೆ ಬಯಸಿ ಬಿಜೆಪಿಗೆ ಮತ ನೀಡಿ ಬಹುಮತದಿಂದ ಆರಿಸಿ ತರಲಿ, ಆಗ ಕಲಬುರಗಿಯ ದಿಕ್ಕು ದೆಸೆಯನ್ನೇ ಬಿಜೆಪಿ ಬದಲಿಸುತ್ತದೆ ಎಂದರು.