Asianet Suvarna News Asianet Suvarna News

ಮುಡಾ ಬೆನ್ನಲ್ಲೇ ಸಿಎಂ ವಿರುದ್ಧ ಗೌರ್ನರ್‌ಗೆ ಮತ್ತೊಂದು ದೂರು ಸಲ್ಲಿಕೆ..!

ಸಾಮಾಜಿಕ ಕಾರ್ಯಕರ್ತ ಸ್ನೇಹಮಯ ಕೃಷ್ಣ ಎಂಬುವವರು ರಾಜ್ಯಪಾಲರಿಗೆ ದೂರು ನೀಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಅಧಿಕಾರಿಗಳ ವಿರುದ್ಧ ದೂರು ನೀಡಿದ್ದಾರೆ. ಆರೋಪಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲಾಡಳಿತದಿಂದ ಸೂಕ್ತ ಮಾಹಿತಿಯನ್ನು ತರಿಸಿಕೊಂಡು ದಾಖಲೆಗಳನ್ನು ಪರಿಶೀಲಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಮನವಿ ಮಾಡಲಾಗಿದೆ.

Another complaint to Governor against CM Siddaramaiah grg
Author
First Published Aug 7, 2024, 5:00 AM IST | Last Updated Aug 7, 2024, 9:11 AM IST

ಬೆಂಗಳೂರು(ಆ.07):  ರಾಜ್ಯದಲ್ಲಿ ಮುಡಾ ಹಗರಣ ತೀವ್ರ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು ಸಲ್ಲಿಕೆಯಾಗಿದ್ದು, ಮೈಸೂರಿನ ಉತ್ತನಹಳ್ಳಿ ಗ್ರಾಮದಲ್ಲಿ 1.39 ಎಕರೆ ಜಮೀನನ್ನು ಅಕ್ರಮವಾಗಿ ಭೂ ಸ್ವಾಧೀನದಿಂದ ಕೈಬಿಡಲಾಗಿದೆ ಎಂದು ಆರೋಪಿಸಿ ದೂರು ಸಲ್ಲಿಸಲಾಗಿದೆ.

ಸಾಮಾಜಿಕ ಕಾರ್ಯಕರ್ತ ಸ್ನೇಹಮಯ ಕೃಷ್ಣ ಎಂಬುವವರು ರಾಜ್ಯಪಾಲರಿಗೆ ದೂರು ನೀಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಅಧಿಕಾರಿಗಳ ವಿರುದ್ಧ ದೂರು ನೀಡಿದ್ದಾರೆ. ಆರೋಪಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲಾಡಳಿತದಿಂದ ಸೂಕ್ತ ಮಾಹಿತಿಯನ್ನು ತರಿಸಿಕೊಂಡು ದಾಖಲೆಗಳನ್ನು ಪರಿಶೀಲಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಮನವಿ ಮಾಡಲಾಗಿದೆ.

ಪೊಲೀಸ್ ಎಸ್ಕಾರ್ಟ್ ಇಲ್ಲದೇ ಮೈಸೂರು ನಗರ ಸುತ್ತಾಡಿದ ಸಿಎಂ ಸಿದ್ದರಾಮಯ್ಯ; ಹೆಚ್ಚಾಯ್ತಾ ಮುಡಾ ಟೆನ್ಷನ್!

ಮೈಸೂರಿನ ವರುಣ ಹೋಬಳಿಯ ಉತ್ತನಹಳ್ಳಿ ಗ್ರಾಮದಲ್ಲಿ 7.01 ಎಕರೆ ಜಮೀನಿನಲ್ಲಿ ಆಶ್ರಯ ನಿವೇಶನಗಳನ್ನಾಗಿ ಹಂಚಿಕೆ ಮಾಡಲಾಗಿದೆ. ಆದರೆ, ಮೂಲಸೌಕರ್ಯ ಕಲ್ಪಿಸದ ಕಾರಣ ಹಲವು ಫಲಾನುಭವಿಗಳು ಮನೆಗಳನ್ನು ನಿರ್ಮಿಸಿಲ್ಲ. ಇದನ್ನೇ ದುರುಪಯೋಗಪಡಿಸಿಕೊಂಡು ಮರಪ್ಪ ಎಂಬಾತ ಮುಖ್ಯಮಂತ್ರಿಗಳ ಮೂಲಕ ಅಕ್ರಮ ಎಸಗಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಉತ್ತನಹಳ್ಳಿ ಗ್ರಾಮದ ಸರ್ವೆ ನಂ.205/2ರಲ್ಲಿನ 1.39 ಎಕರೆ ಜಮೀನು ಕುಂದ ಬೈರಪ್ಪ ಮತ್ತು ಕಾಳಯ್ಯ ಎಂಬುವರಿಗೆ ಸೇರಿದೆ. ಇದನ್ನು ಸಿದ್ದರಾಮಯ್ಯ ತಮ್ಮ ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡು ಅಧಿಕಾರಿಗಳ ಮೇಲೆ ತಮ್ಮ ಪ್ರಭಾವ ಬೀರಿ, ಮರಪ್ಪ ಮತ್ತು ಕೆಲವು ಅಧಿಕಾರಿಗಳು ಸುಳ್ಳು ದಾಖಲೆ ಸೃಷ್ಟಿಸಿ ಭೂಸ್ವಾಧೀನದಿಂದ ಕೈಬಿಡಲಾಗಿದೆ ಎಂಬಂತೆ ಕಾನೂನು ಬಾಹಿರ ಆದೇಶ ಮಾಡಲಾಗಿದೆ. ಈ ಮೂಲಕ 30 ವರ್ಷಗಳ ಕಾಲ ಸರ್ಕಾರ ಮತ್ತು ಫಲಾನುಭವಿಗಳ ಸ್ವತ್ತಾದ ಭೂಮಿಯನ್ನು ಅಕ್ರಮವಾಗಿ ಪಡೆದುಕೊಳ್ಳಲಾಗಿದೆ. ಹೀಗಾಗಿ ಈ ಬಗ್ಗೆ ವಿಚಾರಣೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕೋರಲಾಗಿದೆ.

Latest Videos
Follow Us:
Download App:
  • android
  • ios