ಪೊಲೀಸರಿಗೆ ಬೆದರಿಕೆ ಹಾಕಿದ ಆರೋಪ; ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಮತ್ತೊಂದು ಎಫ್‌ಐಆರ್!

ಅನುಮತಿ ಪಡೆಯದೇ ಪ್ರತಿಭಟನೆ ನಡೆಸಿ ಪೊಲೀಸರಿಗೆ ಬೆದರಿಕೆ ಹಾಕಿದ್ದಾರೆಂದು ಆರೋಪಿಸಿ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲು ಮಾಡಲಾಗಿದೆ.

Another FIR against Beltangadi BJP MLA Harish Poonja rav

ಬೆಳ್ತಂಗಡಿ (ಮೇ.21): ಅನುಮತಿ ಪಡೆಯದೇ ಪ್ರತಿಭಟನೆ ನಡೆಸಿ ಪೊಲೀಸರಿಗೆ ಬೆದರಿಕೆ ಹಾಕಿದ್ದಾರೆಂದು ಆರೋಪಿಸಿ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲು ಮಾಡಲಾಗಿದೆ. ಪೊಲೀಸರಿಗೆ ಜೀವ ಬೆದರಿಕೆ ಒಡ್ಡಿದ ಹಾಗೂ ತಾಲೂಕು ಕಚೇರಿಗೆ ಬರುವ ಸಾರ್ವಜನಿಕರಿಗೂ ತಡೆ ಆರೋಪ ಹಿನ್ನೆಲೆ ಐಪಿಸಿ 143, 147, 341, 504, 506 ಜೊತೆಗೆ 149 ಐ.ಪಿ.ಸಿಯಂತೆ ಪ್ರಕರಣ ದಾಖಲು ಮಾಡಲಾಗಿದೆ.

ಮೇ.20ರಂದು ಬೆಳ್ತಂಗಡಿ ತಾಲೂಕು ಕಚೇರಿ ಎದುರು ನಡೆದಿದ್ದ ಪ್ರತಿಭಟನೆ ವೇಳೆ, ಅರೆಸ್ಟ್ ಆಗಿರುವ ಕಾರ್ಯಕರ್ತರಿಗಾಗಿ ಪೊಲೀಸರ ಕಾಲರ್ ಹಿಡಿಯಲು ಸಿದ್ಧ. ಬೆಂಗಳೂರಿನ ಡಿ.ಜೆ ಹಳ್ಳಿ, ಕೆ.ಜೆ ಹಳ್ಳಿಯ ಪೊಲೀಸ್ ಠಾಣೆಗೆ ಆದ ಗತಿಯನ್ನು ಬೆಳ್ತಂಗಡಿ ಠಾಣೆಗೂ ಕಾಣಿಸುತ್ತೇನೆ ಎಂದು ಬೆಳ್ತಂಗಡಿ ಠಾಣಾ ಪೊಲೀಸ್ ನಿರೀಕ್ಷಕರಿಗೆ ಮತ್ತು ಇತರೆ ಪೊಲೀಸ್ ಅಧಿಕಾರಿಗಳಿಗೆ ಹಾಗೂ ಪೊಲೀಸ್ ಇಲಾಖೆಗೆ ಅವ್ಯಾಚ ಶಬ್ದಗಳಿಂದ ನಿಂದಿಸಿದ ಆರೋಪ ಹಿನ್ನೆಲೆ ಎಫ್‌ಐಆರ್ ದಾಖಲಿಸಲಾಗಿದೆ.

ಚುನಾವಣೆಗೂ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್: ಹರೀಶ್‌ ಪೂಂಜ 

ಕೆಲದಿನಗಳ ಹಿಂದೆಯಷ್ಟೇ ಶಾಸಕ ಹರೀಶ್ ಪೂಂಜಾ ವಿರುದ್ಧ ಪೊಲೀಸರಿಗೆ ಬೆದರಿಸಿದ್ದ ಆರೋಪದ ಮೇಲೆ ಕೇಸ್ ದಾಖಲಿಸಲಾಗಿತ್ತು. ಬೆಳ್ತಂಗಡಿ ಪೊಲೀಸ್ ಠಾಣೆಗೆ ನುಗ್ಗಿ ದರ್ಪ ಪ್ರದರ್ಶಿಸಿದ್ದಾರೆಂಬ ಆರೋಪದಡಿ ಎಫ್‌ಐಆರ್ ದಾಖಲಿಸಿದ್ದ ಪೊಲೀಸರು. ಆದರೆ ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಮೇಲಂತಬೆಟ್ಟು ಎಂಬಲ್ಲಿ ನಡೆಯುತ್ತಿದ್ದ ಅಕ್ರಮ ಕಲ್ಲುಗಣಿಗಾರಿಕೆ ಮೇಲೆ ದಾಳಿ ನಡೆಸಿ ಸ್ಫೋಟಕಗಳು ಪತ್ತೆ ಪ್ರಕರಣ ಸಂಬಂಧ ಪ್ರಕರಣ ದಾಖಲಿಸಿದ್ದರು.

ಬಿಜೆಪಿ ಟಿಕೆಟ್ ಹಂಚಿಕೆಗೆ ಗಾಡ್ ಫಾದರ್ ಸಂಸ್ಕೃತಿ ಬಂದಿದೆ; ಮಾಜಿ ಶಾಸಕ ರಘುಪತಿ ಭಟ್

ಆರೋಪಿ ಬಿಜೆಪಿ ಮುಖಂಡ ಶಶಿರಾಜ್ ಶೆಟ್ಟಿ (35) ಬಂಧಿಸಿದ್ದ ಪೊಲೀಸರು. ಬಂಧಿತ ಆರೋಪಿ ಶಶಿರಾಜ್  ರೌಡಿಶೀಟರ್. ಆದರೆ ರೌಡಿಶೀಟರ್ ಪರವಾಗಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಕಾಲತ್ತು ಮಾಡಿದ್ದರು. ಬಂಧನ ಖಂಡಿಸಿ ಮೇ.18ರಂದು ಬೆಳ್ತಂಗಡಿ ಠಾಣೆಗೆ ಭೇಟಿ ನೀಡಿ ಪೊಲೀಸರ ವಿರುದ್ಧ ದರ್ಪ ಪ್ರದರ್ಶನ ಮಾಡಿದ್ದಾರೆ. ಠಾಣಾಧಿಕಾರಿಗಳಿಗೆ ಒತ್ತಡ ಹಾಕಿ, ಅವಾಚ್ಯವಾಗಿ ನಿಂದಿಸಿದ್ದಾರೆಂದು ಎಫ್‌ಐಆರ್ ದಾಖಲು ಮಾಡಿದ್ದರು. ಇದೀಗ ಶಾಸಕ ಹರೀಶ್ ಪೂಂಜಾ ವಿರುದ್ದ ಮತ್ತೊಂದು ಎಫ್ಐಆರ್ ದಾಖಲಿಸಿರುವ ಪೊಲೀಸರು.

Latest Videos
Follow Us:
Download App:
  • android
  • ios