Asianet Suvarna News Asianet Suvarna News

ದೇಶದಲ್ಲಿ ಮತ್ತೊಂದು ಸ್ವಾತಂತ್ರ್ಯ ಸಂಗ್ರಾಮ ಅಗತ್ಯ: ಡಿಕೆಶಿ

ಅಂದಿನ ಸ್ವಾತಂತ್ರ್ಯ ಸಂಗ್ರಾಮ ಬ್ರಿಟಿಷರ ವಿರುದ್ಧ ನಡೆದಿತ್ತು, ಇಂದಿನ ಸಂಗ್ರಾಮ ಕೋಮುವಾದಿ ಶಕ್ತಿಗಳ ವಿರುದ್ಧ ನಡೆಯಬೇಕು. ಅಂದು ಕಾಂಗ್ರೆಸ್‌ ನೇತೃತ್ವದಲ್ಲಿ ದೇಶವೇ ಒಂದಾಗಿತ್ತು. ಇಂದು ಕಾಂಗ್ರೆಸ್‌ ನೇತೃತ್ವದಲ್ಲಿ ‘ಇಂಡಿಯಾ’ ಒಂದಾಗಿದೆ ಎಂದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ 

Another Freedom Struggle is Needed in the Country Says DK Shivakumar grg
Author
First Published Aug 16, 2023, 3:00 AM IST

ಬೆಂಗಳೂರು(ಆ.16): ಅಹಿಂಸೆ, ಶಾಂತಿ, ಸೌಹಾರ್ದತೆ, ಭ್ರಾತೃತ್ವದ ಭದ್ರ ಬುನಾದಿಯ ಮೇಲೆ ನಿರ್ಮಾಣವಾಗಿರುವ ಈ ದೇಶದಲ್ಲಿ ಧರ್ಮ, ಜಾತಿ, ವರ್ಣದ ವಿಷ ಬೀಜ ಬಿತ್ತಲಾಗುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ದೇಶದಲ್ಲಿ ಮತ್ತೊಂದು ಸ್ವಾತಂತ್ರ್ಯ ಸಂಗ್ರಾಮದ ಅಗತ್ಯವಿದೆ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದರು.

ಕೆಪಿಸಿಸಿ ಕಚೇರಿಯಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಅಂದಿನ ಸ್ವಾತಂತ್ರ್ಯ ಸಂಗ್ರಾಮ ಬ್ರಿಟಿಷರ ವಿರುದ್ಧ ನಡೆದಿತ್ತು, ಇಂದಿನ ಸಂಗ್ರಾಮ ಕೋಮುವಾದಿ ಶಕ್ತಿಗಳ ವಿರುದ್ಧ ನಡೆಯಬೇಕು. ಅಂದು ಕಾಂಗ್ರೆಸ್‌ ನೇತೃತ್ವದಲ್ಲಿ ದೇಶವೇ ಒಂದಾಗಿತ್ತು. ಇಂದು ಕಾಂಗ್ರೆಸ್‌ ನೇತೃತ್ವದಲ್ಲಿ ‘ಇಂಡಿಯಾ’ ಒಂದಾಗಿದೆ ಎಂದರು.

ನಾನು ಸಂಘದ ಸ್ವಯಂ ಸೇವಕ, ಡಿಕೆಶಿ ಕೊತ್ವಾಲ್ ರಾಮಚಂದ್ರನ ಶಿಷ್ಯ: ಸಿ.ಟಿ ರವಿ

ಕೋಮುವಾದಿ ಹಾಗೂ ಸರ್ವಾಧಿಕಾರಿ ಮನಸ್ಥಿತಿ ದೇಶದ ಅಧಿಕಾರದ ಗದ್ದುಗೆಯಲ್ಲಿದ್ದು, ಈ ದುಷ್ಟಶಕ್ತಿಗಳು ಕೇವಲ ಸಂವಿಧಾನ ಬದಲಿಸಲು ಪ್ರಯತ್ನಿಸುತ್ತಿಲ್ಲ. ಅವರು ಇತಿಹಾಸವನ್ನೇ ತಿರುಚಲು ಪ್ರಯತ್ನಿಸುತ್ತಿದ್ದಾರೆ ಎಂದು ಬಿಜೆಪಿ ವಿರುದ್ಧ ಹರಿಹಾಯ್ದರು.

ಸ್ವಾತಂತ್ರ್ಯೋತ್ಸವದಂದು ಕೇವಲ ಧ್ವಜ ಹಾರಿಸಿ, ರಾಷ್ಟ್ರಗೀತೆ ಹಾಡಿದರೆ ಸಾಲದು. ದೇಶದ ಸ್ವಾತಂತ್ರ್ಯ ಏನಾಗಿದೆ ಎಂಬುದನ್ನು ಅರಿತು ಜಾಗೃತರಾಗಬೇಕಿದೆ. ಮಣಿಪುರದಲ್ಲಿ ಮಾರಣ ಹೋಮ, ಹರ್ಯಾಣದ ಗಲಭೆ, ಉತ್ತರ ಪ್ರದೇಶದ ಘಟನೆಗಳನ್ನು ನೋಡಿದರೆ ದೇಶದ ಸ್ವಾತಂತ್ರ್ಯ ಏನಾಗಿದೆ. ಅದು ಯಾರ ಕೈಯಲ್ಲಿ ನಲುಗುತ್ತಿದೆ ಎಂದು ತಿಳಿಯುತ್ತದೆ ಎಂದರು.

ಸ್ವಾತಂತ್ರ್ಯದ ಮೂಲ ಗುರಿಯಾದ ಐಕ್ಯತೆ, ಸಮಗ್ರತೆ, ಸಹಬಾಳ್ವೆ, ಕೋಮು ಸೌಹಾರ್ದತೆ ಪ್ರಸ್ತುತವಾಗಿ ದಿಕ್ಕಾಪಾಲಾಗಿದೆ. ಬಿಜೆಪಿಗೆ ಸ್ವಾತಂತ್ರ್ಯದ ಮಹತ್ವ ಗೊತ್ತಿಲ್ಲ. ಏಕೆಂದರೆ ಆ ಪಕ್ಷಕ್ಕೆ ಹೋರಾಟದ ಇತಿಹಾಸವಿಲ್ಲ ಎಂದರು.
ಸ್ವಾತಂತ್ರ್ಯ ದಿನ ಎಂದರೆ ನಮ್ಮ ಸಾಧನೆಯ ಇತಿಹಾಸ ನೆನಪಿಸಿಕೊಳ್ಳುವ ದಿನವಾಗಿದೆ. ವರ್ತಮಾನದಲ್ಲಿ ನಾವು ಹೇಗಿದ್ದೇವೆ ಎಂದು ಅವಲೋಕನ ಮಾಡಿಕೊಳ್ಳಬೇಕು. ಜತೆಗೆ ಯುವ ಜನತೆಗೆ ಸ್ವಾತಂತ್ರ್ಯ ದಿನದ ಮಹತ್ವದ ಬಗ್ಗೆ ಅರಿವು ಮೂಡಿಸಬೇಕು. ಈ ವಿಚಾರದಲ್ಲಿ ನಾವು ಎಡವಿದ ಪರಿಣಾಮ, ಬ್ರಿಟಿಷರಿಗೆ ಕ್ಷಮಾಪಣೆ ಪತ್ರ ಬರೆದು ಗುಲಾಮರಾದವರನ್ನು ದೇಶಭಕ್ತ ಎಂದು ಪೂಜಿಸಲಾಗುತ್ತಿದೆ. ಸ್ವಾತಂತ್ರ್ಯಕ್ಕಾಗಿ ತಮ್ಮ ಜೀವನ ಮುಡಿಪಿಟ್ಟಗಾಂಧೀಜಿ ಅವರನ್ನು ಪ್ರಶ್ನಿಸಲಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

Follow Us:
Download App:
  • android
  • ios