ಬೆಂಗಳೂರು(ಡಿ.26): ಎಪಿಎಂಸಿ ಕಾಯ್ದೆ ತಿದ್ದುಪಡಿ ಕುರಿತು ಅನಗತ್ಯವಾಗಿ ಅಪಪ್ರಚಾರ ಮಾಡಲಾಗುತ್ತಿದೆ. ಯಾವುದೇ ಕಾರಣಕ್ಕೂ ಎಪಿಎಂಸಿಯನ್ನು ಮುಚ್ಚುವುದಿಲ್ಲ. ಎಪಿಎಂಸಿಯಲ್ಲಿ ಮೂಲಸೌಕರ್ಯ ಅಭಿವೃದ್ಧಿಗಾಗಿ 5 ಕೋಟಿ ರು. ಬಿಡುಗಡೆ ಮಾಡಲಾಗಿದೆ ಎಂದು ಸಹಕಾರ ಸಚಿವ ಎಸ್‌.ಟಿ.ಸೋಮಶೇಖರ್‌ ಹೇಳಿದ್ದಾರೆ.

ಮಾಜಿ ಪ್ರಧಾನಿ ದಿವಂಗತ ಅಟಲ್‌ ಬಿಹಾರಿ ವಾಜಪೇಯಿ ಜನ್ಮದಿನದ ಪ್ರಯುಕ್ತ ಯಶವಂತಪುರದ ಎಪಿಎಂಸಿ ಆವರಣದಲ್ಲಿ ಶುಕ್ರವಾರ ನಡೆದ ಕಿಸಾನ್‌ ಸಮ್ಮಾನ್‌ ಯೋಜನೆ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಸೋಮಶೇಖರ್‌, ರಾಜ್ಯದಲ್ಲಿ 8500 ಎಕರೆ ಪ್ರದೇಶದಲ್ಲಿ ಎಪಿಎಂಸಿ ಇದ್ದು, ಕೋಟ್ಯಂತರ ರೈತರು ವ್ಯಾಪಾರ ಮಾಡುತ್ತಿದ್ದಾರೆ.

ಸಚಿವ ಸುಧಾಕರ್‌ ಮಧ್ಯ ಪ್ರವೇಶ: ಮೃತದೇಹ ಹಸ್ತಾಂತರ

ರೈತರಿಗೆ ಅನಾನೂಕೂಲವಾಗುವಂತಹ ತೀರ್ಮಾನವನ್ನು ಯಾವುದೇ ಕಾರಣಕ್ಕೂ ಕೈಗೊಳ್ಳುವುದಿಲ್ಲ. ಕಾಯ್ದೆಯ ವಾಸ್ತವಾಂಶದ ಕುರಿತು ರಾಜ್ಯದ ಮೂಲೆ ಮೂಲೆಗೆ ತೆರಳಿ ಅರಿವು ಮೂಡಿಸಲಾಗುವುದು. ಕೇಂದ್ರ ಮತ್ತು ರಾಜ್ಯ ಸರ್ಕಾರವು ರೈತರ ಪರ ಕೈಗೊಂಡಿರುವ ಕ್ರಮಗಳ ಕುರಿತು ಜಾಗೃತಿ ಮೂಡಿಸಲಾಗುವುದು ಎಂದರು.