ಮದ್ಯ ಮಾರಾಟ ಲಾಭ 20% ಹೆಚ್ಚಳಕ್ಕೆ ಸಿಎಂ ಸಿದ್ದರಾಮಯ್ಯಗೆ ಮನವಿ

ಅಬಕಾರಿ ತೆರಿಗೆ ಹಾಗೂ ಪರವಾನಗಿ ನವೀಕರಣ ಶುಲ್ಕವನ್ನು ಬಜೆಟ್‌ನಲ್ಲಿ ಹೆಚ್ಚಳ ಮಾಡಬಾರದು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಮದ್ಯ ಮಾರಾಟಗಾರರ ಸಂಘ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದೆ.

Appeal to CM Siddaramaiah for 20 percent increase in liquor sales profit gvd

ಬೆಂಗಳೂರು (ಜೂ.24): ಮದ್ಯ ಮಾರಾಟಗಾರ ಮಳಿಗೆಗಳಿಗೆ ನೀಡುತ್ತಿರುವ ಶೇ.10 ರಷ್ಟು ಲಾಭಾಂಶವನ್ನು ಶೇ.20ಕ್ಕೆ ಹೆಚ್ಚಳ ಮಾಡಬೇಕು. ಅಬಕಾರಿ ತೆರಿಗೆ ಹಾಗೂ ಪರವಾನಗಿ ನವೀಕರಣ ಶುಲ್ಕವನ್ನು ಬಜೆಟ್‌ನಲ್ಲಿ ಹೆಚ್ಚಳ ಮಾಡಬಾರದು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಮದ್ಯ ಮಾರಾಟಗಾರರ ಸಂಘ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದೆ. ಶುಕ್ರವಾರ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಮದ್ಯ ಮಾರಾಟಗಾರರ ಸಂಘಗಳ ಒಕ್ಕೂಟದ ನಿಯೋಗದ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ‘ಸಂಘದ ಬೇಡಿಕೆಗಳ ಪರಿಶೀಲನೆ ಹಾಗೂ ಅಗತ್ಯ ಕ್ರಮಕ್ಕೆ ಬಜೆಟ್‌ ಅಧಿವೇಶನದ ಬಳಿಕ ಸಭೆ ಕರೆದು ಚರ್ಚಿಸಲಾಗುವುದು’ ಎಂದು ಹೇಳಿದ್ದಾರೆ.

ಶುಕ್ರವಾರ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಮದ್ಯ ಮಾರಾಟಗಾರರ ಸಂಘಗಳ ಒಕ್ಕೂಟದ ನಿಯೋಗವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಹಲವು ಬೇಡಿಕೆಗಳನ್ನು ಸಲ್ಲಿಸಿತು. ಈ ವೇಳೆ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಗೋವಿಂದರಾಜ ಹೆಗ್ಗಡೆ ಅವರು, 2012-23ರವರೆಗೆ ವಿವಿಧ ವರ್ಗಗಳಲ್ಲಿ 2,863 ಹೊಸ ಮದ್ಯ ಮಾರಾಟ ಮಳಿಗೆ ಆರಂಭವಾಗಿದೆ. ಪರಿಣಾಮ ಮಾರಾಟ ಕಡಿಮೆಯಾಗಿ ಮಳಿಗೆಗಳಿಗೆ ಆರ್ಥಿಕವಾಗಿ ನಷ್ಟವಾಗುತ್ತಿದೆ. ಹೀಗಾಗಿ ಲಾಭಾಂಶವನ್ನು ಶೇ.10 ರಿಂದ ಶೇ.20ಕ್ಕೆ ಹೆಚ್ಚಳ ಮಾಡಬೇಕು.

ಮಿಲ್ಲಿಂಗ್‌ ದರ ಏರಿಕೆಗೆ ಗಿರಣಿಗಳು ಸಜ್ಜು: ಅಕ್ಕಿ ದರ ಶೀಘ್ರ ದುಬಾರಿ?

ಜತೆಗೆ ಕೊರೋನಾ ಅವಧಿಯಲ್ಲಿ ಅಬಕಾರಿ ತೆರಿಗೆಯನ್ನು ಹೆಚ್ಚಳ ಮಾಡಿದ್ದು ಈ ಬಾರಿ ಹೆಚ್ಚಳ ಮಾಡಬಾರದು. ಜತೆಗೆ ಪರವಾನಗಿ ನವೀಕರಣ ಶುಲ್ಕವನ್ನೂ ಹೆಚ್ಚಳ ಮಾಡಬಾರದು. ಇನ್ನು ಡಿಸ್ಟಿಲರಿ, ಅಬಕಾರಿ ಇಲಾಖೆ , ಚಿಲ್ಲರೆ ವ್ಯಾಪಾರಿಗಳ ನಡುವೆ ಸಮನ್ವಯದಲ್ಲೂ ಸಮಸ್ಯೆ ಉಂಟಾಗುತ್ತಿವೆ. ಹೀಗಾಗಿ ಸಮನ್ವಯ ಸಮಿತಿ ರಚನೆ ಮಾಡಬೇಕು ಎಂದು ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಈ ಕುರಿತು ಬಜೆಟ್‌ ಅಧಿವೇಶನದ ನಂತರ ಸಭೆ ಕರೆದು ಸೂಕ್ತ ನಿರ್ಧಾರವನ್ನು ತೆಗೆದುಕೊಳ್ಳುವ ಭರವಸೆ ನೀಡಿದರು. ಜತೆಗೆ ಸೋರಿಕೆ ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

2ಎ ಕುರಿತು ಅಧಿವೇಶನ ಬಳಿಕ ತಜ್ಞರ ಜತೆ ಸಭೆ: ‘ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವ ಕುರಿತು ಬಜೆಟ್‌ ಅಧಿವೇಶನದ ಬಳಿಕ ಕಾನೂನು ಮತ್ತು ಸಂವಿಧಾನ ತಜ್ಞರೊಂದಿಗೆ ಸಭೆ ನಡೆಸಲಾಗುವುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಶುಕ್ರವಾರ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಒದಗಿಸುವಂತೆ ಕೋರಿ ಕೂಡಲಸಂಗಮ ಪಂಚಮಸಾಲಿ ಮಠದ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದ ಕಾಂಗ್ರೆಸ್‌ ಶಾಸಕರ ನಿಯೋಗವು ಮನವಿ ಸಲ್ಲಿಸಿತು. ಈ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ, ಹಿಂದಿನ ಸರ್ಕಾರ ಮೀಸಲಾತಿ ವಿಚಾರದಲ್ಲಿ ತರಾತುರಿಯಲ್ಲಿ ನಿರ್ಧಾರ ಕೈಗೊಂಡು ಗೊಂದಲ ಸೃಷ್ಟಿಸಿದೆ. 

ಬಿಜೆಪಿ-ಜೆಡಿ​ಎಸ್‌ ಮೈತ್ರಿ ಆಗಬಹುದು ಎಂದು ಅನಿಸುತ್ತಿದೆ: ಯೋಗೇಶ್ವರ್‌

ಮೀಸಲಾತಿ ಸಾಂವಿಧಾನಿಕವಾಗಿ ಊರ್ಜಿತ ಆಗುವುದಿಲ್ಲ ಎಂದು ಬಿಜೆಪಿಗೆ ಮೊದಲೇ ಗೊತ್ತಿತ್ತು. ಆದರೂ, ಪಂಚಮಸಾಲಿ ಸಮುದಾಯಕ್ಕೆ ಮೂಗಿಗೆ ತುಪ್ಪ ಸವರುವ ಬದಲು ಹಣೆಗೆ ತುಪ್ಪ ಸವರಿದೆ ಎಂದು ಕಿಡಿ ಕಾರಿದರು. ಮುಖ್ಯಮಂತ್ರಿಗಳ ಮಾತಿಗೆ ಪ್ರತಿಕ್ರಿಯಿಸಿದ ಶಾಸಕ ವಿನಯ ಕುಲಕರ್ಣಿ, ಮುಸ್ಲಿಂ ಸಮುದಾಯದ ಪಾಲಿನ ಮೀಸಲಾತಿಯನ್ನು ಕಿತ್ತು ಕೊಟ್ಟಿದ್ದನ್ನು ನಾವುಗಳು ಅವತ್ತೇ ವಿರೋಧಿಸಿದ್ದೆವು ಎಂದರು. ಸಭೆಯಲ್ಲಿ ಸಚಿವರಾದ ಲಕ್ಷ್ಮೇ ಹೆಬ್ಬಾಳ್ಕರ್‌, ಶಾಸಕ ವಿನಯ್‌ ಕುಲಕರ್ಣಿ ಸೇರಿದಂತೆ ಸಮುದಾಯದ 15 ಮಂದಿ ಶಾಸಕರು ಹಾಗೂ ಪಂಚಮಸಾಲಿ ಸಮುದಾಯದ ಪ್ರಮುಖರು ಉಪಸ್ಥಿತರಿದ್ದರು.

Latest Videos
Follow Us:
Download App:
  • android
  • ios