ವರಮಹಾಲಕ್ಷ್ಮೀ ಹಬ್ಬಕ್ಕೆ ಸ್ತ್ರೀಯರಿಗೆ ದೇಗುಲಗಳಲ್ಲಿ ಹಳದಿ-ಕುಂಕುಮ: ಧಾರ್ಮಿಕ ದತ್ತಿ ಇಲಾಖೆ ಸೂಚನೆ

ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೊಳಪಡುವ ದೇಗುಲಗಳಲ್ಲಿ ವರಮಹಾಲಕ್ಷ್ಮೇ ಹಬ್ಬದ ಪ್ರಯುಕ್ತ ದೇವಾಲಯಕ್ಕೆ ಬರುವ ಮಹಿಳೆಯರಿಗೆ ಅರಿಶಿಣ-ಕುಂಕುಮ, ಹಸಿರು ಬಳೆಗಳನ್ನು ಗೌರವಸೂಚಕವಾಗಿ ನೀಡಬೇಕು ಎಂದು ಸರ್ಕಾರ ಸುತ್ತೋಲೆ ಹೊರಡಿಸಿದೆ.

Arisina kumkum in temples for Women on varamahalakshmi festival endowments department instruction rav

ಬೆಂಗಳೂರು (ಆ.22) :  ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೊಳಪಡುವ ದೇಗುಲಗಳಲ್ಲಿ ವರಮಹಾಲಕ್ಷ್ಮೇ ಹಬ್ಬದ ಪ್ರಯುಕ್ತ ದೇವಾಲಯಕ್ಕೆ ಬರುವ ಮಹಿಳೆಯರಿಗೆ ಅರಿಶಿಣ-ಕುಂಕುಮ, ಹಸಿರು ಬಳೆಗಳನ್ನು ಗೌರವಸೂಚಕವಾಗಿ ನೀಡಬೇಕು ಎಂದು ಸರ್ಕಾರ ಸುತ್ತೋಲೆ ಹೊರಡಿಸಿದೆ.

ಧಾರ್ಮಿಕ ದತ್ತಿ ಇಲಾಖೆಯು ಸುತ್ತೋಲೆ ಹೊರಡಿಸಿದ್ದು, ಕಳೆದ ವರ್ಷದಂತೆ ಈ ಬಾರಿಯೂ ಆಚರಣೆಗೆ ಸೂಚಿಸಿದೆ.

ಇದೇ ತಿಂಗಳ 25ರಂದು ಶುಕ್ರವಾರ ವರಮಹಾಲಕ್ಷ್ಮೇ ಹಬ್ಬ ಇದ್ದು, ಅಂದು ದೇವಾಲಯಕ್ಕೆ ವಿಶೇಷ ಪೂಜೆ ಸಲ್ಲಿಸಲು ಮಹಿಳೆಯರು ಆಗಮಿಸುತ್ತಾರೆ. ಈ ವೇಳೆ ದೇವಾಲಯಗಳು ತಮ್ಮ ನಿಧಿಯಿಂದ ಉತ್ತಮ ಗುಣಮಟ್ಟದ ಕಸ್ತೂರಿ, ಅರಿಶಿಣ-ಕುಂಕುಮ, ಹಸಿರು ಬಳೆಗಳನ್ನು ತಂದು ದೇವರ ಮುಂದೆ ಇಟ್ಟು ಪೂಜಿಸಿ ಗೌರವ ಪೂರ್ವಕವಾಗಿ ಮಹಿಳೆಯರಿಗೆ ನೀಡಬೇಕು. ಪ್ರಸಾದ ರೂಪವಾದ ಅರಿಶಿಣ-ಕುಂಕುಮವನ್ನು ಕಾಗದದ ಲಕೋಟೆಗಳಲ್ಲಿ ಸರ್ಕಾರದ ಲಾಂಛನದೊಂದಿಗೆ ದೇವಾಲಯದ ಹೆಸರನ್ನು ಮುದ್ರಿಸಿ, ದೇವಾಲಯಕ್ಕೆ ಆಗಮಿಸುವ ಮಹಿಳೆಯರಿಗೆ ವಿತರಿಸಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಈ ದರಿದ್ರ ಕೆಲಸದಿಂದ ‘ಲಕ್ಷ್ಮಿ ದೇವಿ’ ಕೋಪಗೊಳ್ಳುವಳು; ಇವುಗಳನ್ನು ಇಂದೇ ನಿಲ್ಲಿಸಿ.!

Latest Videos
Follow Us:
Download App:
  • android
  • ios