Asianet Suvarna News Asianet Suvarna News

ಆಷಾಢ ಶುಕ್ರವಾರ: ಚಾಮುಂಡಿ ಬೆಟ್ಟಕ್ಕೆ ಸಾವಿರಾರು ಮಂದಿ ಭಕ್ತರು ಭೇಟಿ

2ನೇ ಆಷಾಢ ಶುಕ್ರವಾರದಂದು ಚಾಮುಂಡಿಬೆಟ್ಟಕ್ಕೆ ಸಾವಿರಾರು ಭಕ್ತರು ಭೇಟಿ ನೀಡಿ, ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದರು. ಶಾಸಕರಾದ ಜಿ.ಟಿ.ದೇವೇಗೌಡ, ಸೂರಜ್‌ ರೇವಣ್ಣ, ಮಾಜಿ ಸಚಿವ ಎಂಟಿಬಿ ನಾಗರಾಜ್‌, ನಟರಾದ ಡಾಲಿ ಧನಂಜಯ್‌, ಧನ್ವೀರ್‌ ಸೇರಿ ಹಲವು ಗಣ್ಯರು ಕೂಡ ಬೆಟ್ಟಕ್ಕೆ ಭೇಟಿ, ದೇವಿಯ ದರ್ಶನ ಪಡೆದರು. 

ashadha celebration in mysuru chamundeshwari temple gvd
Author
First Published Jul 1, 2023, 2:20 AM IST | Last Updated Jul 1, 2023, 2:20 AM IST

ಮೈಸೂರು (ಜು.01): 2ನೇ ಆಷಾಢ ಶುಕ್ರವಾರದಂದು ಚಾಮುಂಡಿಬೆಟ್ಟಕ್ಕೆ ಸಾವಿರಾರು ಭಕ್ತರು ಭೇಟಿ ನೀಡಿ, ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದರು. ಶಾಸಕರಾದ ಜಿ.ಟಿ.ದೇವೇಗೌಡ, ಸೂರಜ್‌ ರೇವಣ್ಣ, ಮಾಜಿ ಸಚಿವ ಎಂಟಿಬಿ ನಾಗರಾಜ್‌, ನಟರಾದ ಡಾಲಿ ಧನಂಜಯ್‌, ಧನ್ವೀರ್‌ ಸೇರಿ ಹಲವು ಗಣ್ಯರು ಕೂಡ ಬೆಟ್ಟಕ್ಕೆ ಭೇಟಿ, ದೇವಿಯ ದರ್ಶನ ಪಡೆದರು. ಮುಂಜಾನೆ 3 ಗಂಟೆಯಿಂದಲೇ ಸರತಿ ಸಾಲಿನಲ್ಲಿ ಭಕ್ತರು ಸಾಲುಗಟ್ಟಿನಿಂತಿದ್ದು, ಜಯಘೋಷ ಕೂಗುತ್ತ ಚಾಮುಂಡೇಶ್ವರಿಯ ದರ್ಶನ ಪಡೆದರು. 

ಮೊದಲಿಗೆ ದೇವಿಗೆ ಅಭಿಷೇಕ, ರುದ್ರಾಭಿಷೇಕ, ಪಂಚಾಮೃತ ಅಭಿಷೇಕ ಸಲ್ಲಿಸಿದ ಬಳಿಕ ಸಾರ್ವಜನಿಕರ ದರ್ಶನಕ್ಕೆ ಅವಕಾಶ ನೀಡಲಾಯಿತು. ನಂತರ ಬೆಳಗ್ಗೆ 11ಕ್ಕೆ ಪೂಜೆ ಸಲ್ಲಿಸಿ, ಮಹಾಮಂಗಳಾರತಿ ನೆರವೇರಿಸಲಾಯಿತು. ದೇವಸ್ಥಾನದ ಪ್ರಧಾನ ಅರ್ಚಕ ಶಶಿಶೇಖರ್‌ ದೀಕ್ಷಿತರ ಸಮ್ಮುಖದಲ್ಲಿ ಪೂಜೆ ನೆರವೇರಿಸಲಾಯಿತು. ಚಾಮುಂಡೇಶ್ವರಿಗೆ ಸಿಂಹವಾಹಿನಿ ಅಲಂಕಾರ ಮಾಡಲಾಗಿತ್ತು. ಗುಲಾಬಿ ಬಣ್ಣದ ಸೀರೆಯನ್ನುಟ್ಟು ಸಿಂಹವಾಹಿನಿಯಾಗಿ, ವಿವಿಧ ಹೂವುಗಳಿಂದ ಸಿಂಗಾರಗೊಂಡು ಕಂಗೊಳಿಸುತ್ತಿದ್ದ ಚಾಮುಂಡೇಶ್ವರಿಯನ್ನು ಕಂಡು ಭಕ್ತರು ಪುನೀತರಾದರು. 

ಪ್ರಧಾನಿ ಮೋದಿ ಪರಿಶ್ರಮದಿಂದ ಭಾರತಕ್ಕೆ ಜಾಗತಿಕ ಅಗ್ರ ಸ್ಥಾನ: ಸಂಸದ ಅಣ್ಣಾಸಾಹೇಬ ಜೊಲ್ಲೆ

ಅಮ್ಮನ ಉತ್ಸವ ಮೂರ್ತಿಗೆ ನೀಲಿ ಬಣ್ಣದ ಸೀರೆಯನ್ನು ಉಡಿಸಲಾಗಿತ್ತು. ದೇವಸ್ಥಾನವನ್ನು ವಿವಿಧ ಬಗೆಯ ಹೂಗಳಿಂದ ಶೃಂಗರಿಸಲಾಗಿತ್ತು. ಬೆಟ್ಟಕ್ಕೆ ತೆರಳುವ ವಾಹನಗಳಿಗೆ ನಿರ್ಬಂಧ ವಿಧಿಸಿದ್ದರಿಂದ ಲಲಿತಮಹಲ್‌ ಹೆಲಿಪ್ಯಾಡ್‌ ಬಳಿಯಿಂದ ಉಚಿತ ಸಾರಿಗೆ ಸೌಲಭ್ಯ ಕಲ್ಪಿಸಲಾಗಿತ್ತು. ಬಸ್‌ ಮಾರ್ಗವಲ್ಲದೆ ಮೆಟ್ಟಿಲುಗಳ ಮೂಲಕವು ಅಪಾರ ಸಂಖ್ಯೆಯ ಭಕ್ತರು ಬೆಟ್ಟಕ್ಕೆ ಆಗಮಿಸಿದರು. ಮೊದಲ ವಾರಕ್ಕಿಂತ 2ನೇ ವಾರ ಭಕ್ತರ ಸಂಖ್ಯೆ ಹೆಚ್ಚಾಗಿತ್ತು. ಭಕ್ತರಿಗೆ ಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು. ಬೆಳಗ್ಗೆ 6.30ರಿಂದ ಆರಂಭವಾದ ಪ್ರಸಾದ ವಿತರಣೆ ಸಂಜೆ 7.30ರವರೆಗೂ ನಡೆಯಿತು.

ಕೇಂದ್ರದಿಂದ ಅಕ್ಕಿ ಕೊಡದಿದ್ದರೂ 5 ಕೆಜಿ ಅಕ್ಕಿ, ರೂ.170 ಕೊಡುತ್ತೇವೆ: ಶಾಸಕ ಲಕ್ಷ್ಮಣ ಸವದಿ

ದೇವಿ ದರ್ಶನಕ್ಕೆ ರಾಯಚೂರಿನಿಂದ ಬಂದ ಮಹಿಳೆಯರು: ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಇರುವುದನ್ನು ಬಳಸಿಕೊಂಡು ದೂರದ ರಾಯಚೂರಿನಿಂದ ಸುಮಾರು 25 ಮಹಿಳೆಯರು ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ, ದೇವಿಯ ದರ್ಶನ ಪಡೆದರು. ಈ ವೇಳೆ ಮಾತನಾಡಿ, ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಬೇಕು ಎಂಬ ಆಸೆ ಅನೇಕ ವರ್ಷಗಳಿಂದ ಇತ್ತು. ಆದರೆ, ಸಾಧ್ಯವಾಗಿರಲಿಲ್ಲ. ಈಗ ಬಸ್‌ ಪ್ರಯಾಣ ಉಚಿತ ಇರುವುದರಿಂದ ನಾವು ಇಲ್ಲಿಗೆ ಬಂದಿದ್ದೇವೆ. ನಾಲ್ಕು ದಿನ ಆಯಿತು. ಅಕ್ಕಪಕ್ಕದ ಊರಿನ ದೇವಸ್ಥಾನಗಳನ್ನೆಲ್ಲಾ ನೋಡಿ ಆಯಿತು. ಅರಮನೆ, ಮೃಗಾಲಯ ನೋಡಿ ವಾಪಸ್‌ ಊರಿಗೆ ಹೋಗುತ್ತೇವೆ ಎಂದರು.

Latest Videos
Follow Us:
Download App:
  • android
  • ios