Asianet Suvarna News

ರಾಜ್ಯದಲ್ಲಿ ಮದ್ಯ ನಿಷೇಧ : ಡಿಸಿಎಂ ಭರವಸೆ

ರಾಜ್ಯದಲ್ಲಿ ಮದ್ಯ ನಿಷೇಧಕ್ಕೆ ಆಗ್ರಹಿಸಿ ಮಹಿಳೆಯರು ಪ್ರತಿಭಟನೆ ನಡೆಸಿದ್ದು, ಉಪ ಮುಖ್ಯಮಂತ್ರಿ ಭರವಸೆ ಬಳಿಕ ಪ್ರತಿಭಟನೆ ಕೈ ಬಿಡಲಾಯಿತು. 

Ashwath Narayan Assure To Ban Liquor In Karnataka
Author
Bengaluru, First Published Nov 8, 2019, 8:15 AM IST
  • Facebook
  • Twitter
  • Whatsapp

ಬೆಂಗಳೂರು [ನ.08]: ಆಗ್ರಹಿಸಿ ‘ಮದ್ಯ ನಿಷೇಧ ಆಂದೋಲನ’ ಸಂಘಟನೆಯ ಕಾರ್ಯಕರ್ತರು ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ  ರೈಲು ನಿಲ್ದಾಣದಲ್ಲೇ ಬೆಳಗ್ಗೆಯಿಂದ ರಾತ್ರಿವರೆಗೆ ಪ್ರತಿಭಟನೆ ನಡೆಸಿದರು. 

ರಾತ್ರಿ 8.30ರ ಸುಮಾರಿಗೆ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು 10 ದಿನದೊಳಗೆ ಮುಖ್ಯಮಂತ್ರಿ ಬಿ.ಎಸ್ .ಯಡಿಯೂರಪ್ಪ ಅವರನ್ನು ಭೇಟಿ ಮಾಡಿಸುವ ಭರವಸೆ ನೀಡಿದ ಹಿನ್ನೆಲೆಯಲ್ಲಿ ಪ್ರತಿಭಟನೆ ಕೈಬಿಡಲಾಯಿತು. 

ಪೊಲೀಸರು ಪ್ರತಿಭಟನೆಗೆ ಅವಕಾಶ ನೀಡದ ಹಿನ್ನೆಲೆಯಲ್ಲಿ ಬೆಳಗ್ಗೆಯಿಂದಲೂ ರೈಲು ನಿಲ್ದಾಣದ ಆವರಣದಲ್ಲೇ ಧರಣಿ ಆರಂಭಿಸಿದ್ದ ಇನ್ನೂರಕ್ಕೂ ಹೆಚ್ಚಿನ ಮಹಿಳೆಯರು, ಮುಖ್ಯಮಂತಿ ್ರಗಳನ್ನು ಭೇಟಿ ಮಾಡಿಸುವವರೆಗೂ ಸ್ಥಳದಿಂದ ತೆರಳುವುದಿಲ್ಲ ಎಂದು ಪಟ್ಟು ಹಿಡಿದಿದ್ದರು. ಪೊಲೀಸರು ಹಾಗೂ ರೈಲ್ವೆ ಪೊಲೀಸರು ಧರಣಿ ಕೈಬಿಡುವಂತೆ ಹಲವು ಬಾರಿ ಮನವಿ ಮಾಡಿದರೂ ಮಹಿಳೆಯರು ತಮ್ಮ ಬಿಗಿಪಟ್ಟು ಸಡಿಲಿಸಲಿಲ್ಲ. 

ಈ ಹಿನ್ನೆಲೆಯಲ್ಲಿ ರಾತ್ರಿ 8.30ರ ಸುಮಾರಿಗೆ ಧರಣಿ ಸ್ಥಳಕ್ಕೆ ಆಗಮಿಸಿದ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಮನವಿ ಸ್ವೀಕರಿಸಿ, ಏಕಾಏಕಿ ಮದ್ಯ ನಿಷೇಧ ಸಾಧ್ಯವಿಲ್ಲ. ಹಂತ ಹಂತವಾಗಿ ಮದ್ಯ ನಿಷೇಧವಾಗಬೇಕು. ಈ ಹೋರಾಟವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. 10 ದಿನದೊಳಗೆ ಮುಖ್ಯಮಂತ್ರಿ ಬಿ.ಎಸ್ .ಯಡಿಯೂರಪ್ಪ ಅವರನ್ನು ಭೇಟಿ ಮಾಡಿಸುವುದಾಗಿ ಭರವಸೆ ನೀಡಿ ಧರಣಿ ಕೈಬಿಡುವಂತೆ ಮನವಿ ಮಾಡಿದರು. ಈ ಹಿನ್ನೆಲೆಯಲ್ಲಿ ಧರಣಿ ಹಿಂಪಡೆಲಾಯಿತು. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಬೆಳಗ್ಗೆ ಧರಣಿಯಲ್ಲಿ ಪಾಲ್ಗೊಂಡು ಮಾತನಾಡಿದ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ, ‘ಮದ್ಯ ಮುಕ್ತ ಕರ್ನಾಟಕ’ಕ್ಕಾಗಿ ಹೆಣ್ಣು ಮಕ್ಕಳು ಕಳೆದ ಬಾರಿ ಚಿತ್ರದುರ್ಗದಿಂದ ಬೆಂಗಳೂರಿಗೆ ಪಾದಯಾತ್ರೆ ಮಾಡಿದ್ದರು. ಅಂದಿನ ಮುಖ್ಯಮಂತ್ರಿ ಎಚ್ .ಡಿ.ಕುಮಾರಸ್ವಾಮಿ ಅವರಿಂದ ಹೋರಾಟಕ್ಕೆ ಸೂಕ್ತ ಸ್ಪಂದನೆ ಸಿಗಲಿಲ್ಲ. ಈಗ ಮತ್ತೊಮ್ಮೆ ಹೆಣ್ಣ ಮಕ್ಕಳು ಪ್ರತಿಭಟನೆ ಮಾಡುತ್ತಿದ್ದಾರೆ. ಹಾಗಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಪ್ರತಿಭಟನಾಕಾರರ ನಿಯೋಗ ದೊಂದಿಗೆ ಚರ್ಚಿಸಬೇಕು. ಮದ್ಯ ನಿಷೇಧದಿಂದ ಸರ್ಕಾರಕ್ಕೆ ಆಗುವ ನಷ್ಟವನ್ನು ಕೇಂದ್ರ ಸರ್ಕಾರ ಭರಿಸಿಕೊಡಬೇಕು ಎಂದು ಒತ್ತಾಯಿಸಿದರು. ಸಂಘಟನೆಯ ಸಂಚಾಲಕಿ ಸ್ವರ್ಣಾ ಭಟ್ ಸೇರಿದಂತೆ ಹಲವರಿದ್ದರು.

Follow Us:
Download App:
  • android
  • ios