ಕೋವಿಡ್ ನಿಯಂತ್ರಣದಲ್ಲಿ ರಾಜ್ಯದಲ್ಲಿ ಅತ್ಯುನ್ನತ ಮಟ್ಟದ ಸಮಿತಿಯಾದ ಕೋವಿಡ್‌ ಕಾರ್ಯಪಡೆಯನ್ನು ಮುಖ್ಯಮಂತ್ರಿ ಯಡಿಯೂರಪ್ಪ ಪುನಾರಚಿಸಿ ಆದೇಶ ಹೊರಡಿಸಿದ್ದಾರೆ.

ಬೆಂಗಳೂರು, (ಮೇ.03): ಕೋವಿಡ್ ನಿಯಂತ್ರಣದಲ್ಲಿ ರಾಜ್ಯದಲ್ಲಿ ಅತ್ಯುನ್ನತ ಮಟ್ಟದ ಸಮಿತಿಯಾದ ಕೋವಿಡ್‌ ಕಾರ್ಯಪಡೆಯನ್ನು ಮುಖ್ಯಮಂತ್ರಿ ಯಡಿಯೂರಪ್ಪ ಪುನಾರಚಿಸಿದ್ದು, ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಅವರನ್ನು ಕಾರ್ಯಪಡೆ ಅಧ್ಯಕ್ಷರನ್ನಾಗಿ ನೇಮಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಲೋಕೋಪಯೋಗಿ ಸಚಿವರೂ ಆದ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಈವರೆಗೂ ಈ ಕಾರ್ಯಪಡೆ ಅಧ್ಯಕ್ಷರಾಗಿದ್ದರು. ಇದೀಗ ಗೋವಿಂದ ಕಾರಜೋಳ ಅವರನ್ನ ಬದಲಾಯಿಸಿ ಅಶ್ವತ್ಥ್ ನಾರಾಯಣ ಅವರಿಗೆ ವಹಿಸಲಾಗಿದೆ.

ಚಾಮರಾಜನಗರಕ್ಕೆ ಆಕ್ಸಿಜನ್ ಕೊಟ್ಟಿಲ್ಲ ಎನ್ನುವ ಆರೋಪಕ್ಕೆ ಮೈಸೂರು ಜಿಲ್ಲಾಡಳಿತದಿಂದ ಸ್ಪಷ್ಟನೆ

ಪುನಾರಚನೆಗೊಂಡ ಈ ಕಾರ್ಯಪಡೆಯ ಅಧ್ಯಕ್ಷರಾಗಿ ಡಾ.ಅಶ್ವತ್ಥನಾರಾಯಣ ಜತೆಯಲ್ಲಿ ಸದಸ್ಯರಾಗಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಖಾತೆ ಸಚಿವ ಎಸ್.‌ಸುರೇಶ್‌ ಕುಮಾರ್‌, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಖಾತೆ ಸಚಿವ ಸಿ.ಸಿ.ಪಾಟೀಲ್‌ ಹಾಗೂ ಆರೋಗ್ಯ & ವೈದ್ಯಕೀಯ ಶಿಕ್ಷಣ ಖಾತೆ ಸಚಿವ ಡಾ.ಕೆ.ಸುಧಾಕರ್‌ ಇದ್ದಾರೆ.

ಇಡೀ ರಾಜ್ಯದ ಕೋವಿಡ್ ಪರಿಸ್ಥಿತಿಯ ಉಸ್ತುವಾರಿ ಜತೆಗೆ‌, ಉನ್ನತ ಮಟ್ಟದ ನಿರ್ಧಾರಗಳನ್ನು ಕೈಗೊಳ್ಳುವ ಅಧಿಕಾರ ಈ ಕಾರ್ಯಪಡೆಗೆ ಇದೆ.