ಜಾತಿಗಣತಿ ವರದಿ ಬಗ್ಗೆ ರಾಜ್ಯ ನಾಯಕರನ್ನೇ ಕೇಳಿ: ಮಲ್ಲಿಕಾರ್ಜುನ ಖರ್ಗೆ
ಜಾತಿ ಜನಗಣತಿ ವಿಚಾರಿವಾಗಿ ನಾವು ಈಗ ಮಾತ್ರ ಹೇಳುತ್ತಿಲ್ಲ. ಲೋಕಸಭೆ ಚುನಾವಣೆ ವೇಳೆಯಲ್ಲೇ ಭರವಸೆ ನೀಡಿದ್ದೆವು. ಎಲ್ಲ ರಾಜ್ಯಗಳ ಅಭಿಪ್ರಾಯ ಪಡೆಯುತ್ತೇವೆ. ಆನಂತರ ಮುಂದಿನ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ
ಬೆಂಗಳೂರು(ಅ.08): ‘ಜಾತಿ ಜನ ಗಣತಿ ಸಂಬಂಧ ಎಲ್ಲಾ ರಾಜ್ಯಗಳ ಅಭಿಪ್ರಾಯ ಪಡೆಯುತ್ತೇವೆ. ಬಳಿಕ ಮುಂದಿನ ಕ್ರಮ ತೆಗೆದುಕೊಳ್ಳುತ್ತೇವೆ. ಇನ್ನು ಕರ್ನಾಟಕ ರಾಜ್ಯದ ಜಾತಿಗಣತಿ ಬಗ್ಗೆ ಇಲ್ಲಿರುವ ನಾಯಕರನ್ನೇ ಕೇಳಿ’ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಸದಾಶಿವನಗರ ತಮ್ಮ ನಿವಾಸದ ಬಳಿ ಮಾತನಾಡಿದ ಅವರು, ಜಾತಿ ಜನಗಣತಿ ವಿಚಾರಿವಾಗಿ ನಾವು ಈಗ ಮಾತ್ರ ಹೇಳುತ್ತಿಲ್ಲ. ಲೋಕಸಭೆ ಚುನಾವಣೆ ವೇಳೆಯಲ್ಲೇ ಭರವಸೆ ನೀಡಿದ್ದೆವು. ಎಲ್ಲ ರಾಜ್ಯಗಳ ಅಭಿಪ್ರಾಯ ಪಡೆಯುತ್ತೇವೆ. ಆನಂತರ ಮುಂದಿನ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.
ಜಾತಿ ಗಣತಿ ವರದಿ ಅ.18ರಂದು ಸಂಪುಟದಲ್ಲಿ ಮಂಡನೆ: ಸಿಎಂ ಸಿದ್ದರಾಮಯ್ಯ
ಕರ್ನಾಟಕದಲ್ಲಿ ಜಾತಿಗಣತಿ ವರದಿ ಜಾರಿ ಬಗ್ಗೆ ಒತ್ತಾಯ ಕೇಳಿ ಬಂದಿದೆಯಲ್ಲಾ ಎಂಬ ಪ್ರಶ್ನೆಗೆ, ‘ರಾಜ್ಯದಲ್ಲಿ ಜನಗಣತಿ ಜಾರಿ ವಿಚಾರವಾಗಿ ಇಲ್ಲಿರುವ ನಾಯಕರನ್ನೇ ಕೇಳಿ’ ಎಂದಷ್ಟೇ ಹೇಳಿದರು.
ಹರ್ಯಾಣ ಚುನಾವಣೆ ಫಲಿತಾಂಶ ವಿಚಾರವಾಗಿ ಪ್ರತಿಕ್ರಿಯಿಸಿ, ಹರ್ಯಾಣ, ಜಮ್ಮುಕಾಶ್ಮೀರದಲ್ಲಿ ಕಾಂಗ್ರೆಸ್ ಸರ್ಕಾರ ಬರುತ್ತೆಂದು ನಾವು ಮೊದಲೇ ಹೇಳಿದ್ದೇವೆ. ಜಮ್ಮುವಿನಲ್ಲಿ ಕಾಂಗ್ರೆಸ್ ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.