ಹಲ್ಲೆ, ಜಾತಿ ನಿಂದನೆ: ಸಚಿವ ಡಿ.ಸುಧಾಕರ್ ಸೇರಿ ಮೂವರ ವಿರುದ್ಧ ಕೇಸ್
ದೌರ್ಜನ್ಯ, ವಂಚನೆ, ಹಲ್ಲೆ ಮತ್ತು ಜಾತಿ ನಿಂದನೆ ಆರೋಪದಡಿ ಯೋಜನೆ ಮತ್ತು ಸಾಂಖ್ಯಿಕ ಖಾತೆ ಸಚಿವ ಡಿ.ಸುಧಾಕರ್ ಸೇರಿ ಮೂವರ ವಿರುದ್ಧ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಬೆಂಗಳೂರು (ಸೆ.11): ದೌರ್ಜನ್ಯ, ವಂಚನೆ, ಹಲ್ಲೆ ಮತ್ತು ಜಾತಿ ನಿಂದನೆ ಆರೋಪದಡಿ ಯೋಜನೆ ಮತ್ತು ಸಾಂಖ್ಯಿಕ ಖಾತೆ ಸಚಿವ ಡಿ.ಸುಧಾಕರ್ ಸೇರಿ ಮೂವರ ವಿರುದ್ಧ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಯಲಹಂಕ ನಿವಾಸಿ ಸುಬ್ಬಮ್ಮ ಎಂಬುವವರು ನೀಡಿದ ದೂರಿನ ಮೇರೆಗೆ ಸೆವೆನ್ ಹಿಲ್ಸ್ ಡೆವಲಪರ್ಸ್ ಮತ್ತು ಟ್ರೇಡರ್ಸ್ ಪಾಲುದಾರರಾದ ಸಚಿವ ಡಿ.ಸುಧಾಕರ್, ಶ್ರೀನಿವಾಸ್, ಭಾಗ್ಯಮ್ಮ ಎಂಬುವವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಬೆಂಗಳೂರು: ಸ್ಕ್ಯಾನಿಂಗ್‌ಗೆ ಬಂದಿದ್ದ ಯುವತಿ ಜತೆ ಅಸಭ್ಯ ವರ್ತನೆ: ಟೆಕ್ನಿಶಿಯನ್ ಜೈಲಿಗೆ
ಸೆವೆನ್ ಹಿಲ್ಸ್ ಡೆವಲಪರ್ಸ್ ಮತ್ತು ಟ್ರೇಡರ್ಸ್ನವರು(Seven Hills Developers and Traders) ಯಲಹಂಕ ಗ್ರಾಮದ ಸರ್ವೆ ನಂಬರ್ 108/1ರ 1.30 ಎಕರೆ ಜಮೀನನ್ನು ಮೋಸದಿಂದ ಕಬಳಿಕೆ ಮಾಡಿದ್ದಾರೆ. ಈ ಪ್ರಕರಣ ನ್ಯಾಯಾಲಯದಲ್ಲಿ ಇರುವಾಗ ಗುಂಪು ಕಟ್ಟಿಕೊಂಡು ಬಂದು ದೌರ್ಜನ್ಯ ಎಸೆಗಿದ್ದಾರೆ. ಮಹಿಳೆಯರನ್ನು ಕರೆದುಕೊಂಡು ಬಂದು ಹಲ್ಲೆ ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ ಎಂದು ತಿಳಿದು ಬಂದಿದೆ.
ಸಚಿವರ ಪುತ್ರನಿಂದ ದೂರು:
ಸೆವೆನ್ ಹಿಲ್ಸ್ ಡೆವಲಪರ್ಸ್ ಮತ್ತು ಟ್ರೇಡರ್ಸ್‌ಗೆ ಸೇರಿದ ಆಸ್ತಿಗೆ ಅತಿಕ್ರಮ ಪ್ರವೇಶ ಮಾಡಿದ ಆರೋಪದಡಿ ಯಲಹಂಕ ಪೊಲೀಸ್ ಠಾಣೆಯಲ್ಲಿ 11 ಮಂದಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಸಚಿವ ಡಿ.ಸುಧಾಕರ್ ಪುತ್ರ, ಸೆವೆನ್ ಹಿಲ್ಸ್ ಡೆವಲಪರ್ಸ್ ಮತ್ತು ಟ್ರೇಡರ್ಸ್ ಕಂಪನಿಯ ನಿರ್ದೇಶಕ ಸುಹಾಸ್ ಸುಧಾಕರ್ ಶನಿವಾರ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಖತರ್ನಾಕ್ ಗ್ಯಾಂಗ್ ಫೀಲ್ಡಿಗಿಳಿದರೆ ಮನೆ, ಪಿಜಿ ಮುಂದೆ ಬಿಟ್ಟಿರೋ ಶೂ ಚಪ್ಪಲಿಗಳು ಮಾಯಾ!