ಅಕ್ರಮ ಮರಳು ಸಾಗಾಟ ತಡೆದ ಕಾನ್‌ಸ್ಟೆಬಲ್ ಮೇಲೆ ಹಲ್ಲೆ ಆರೋಪ; ಜೆಡಿಎಸ್ ಶಾಸಕಿ ಕರೆಮ್ಮ ನಾಯಕ್ ಪುತ್ರನ ವಿರುದ್ಧ ಎಫ್‌ಐಆರ್
ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಟ್ರ್ಯಾಕ್ಟರ್ ತಡೆದ ಕರ್ತವ್ಯ ನಿರತ ಪೊಲೀಸ್ ಪೇದೆ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ದೇವದುರ್ಗ ಜೆಡಿಎಸ್ ಶಾಸಕಿ ಕರೆಮ್ಮ ನಾಯಕ್ ಅವರ ಪುತ್ರ ಸೇರಿ ಸಂತೋಷ ಹಾಗೂ ಇತರ ಏಳು ಮಂದಿ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ರಾಯಚೂರು (ಫೆ.12): ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಟ್ರ್ಯಾಕ್ಟರ್ ತಡೆದ ಕರ್ತವ್ಯ ನಿರತ ಪೊಲೀಸ್ ಪೇದೆ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ದೇವದುರ್ಗ ಜೆಡಿಎಸ್ ಶಾಸಕಿ ಕರೆಮ್ಮ ನಾಯಕ್ ಅವರ ಪುತ್ರ ಸೇರಿ ಸಂತೋಷ ಹಾಗೂ ಇತರ ಏಳು ಮಂದಿ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಭಾನುವಾರ ದೇವದುರ್ಗ ಪೊಲೀಸ್ ಠಾಣೆಯಲ್ಲಿ ನಿಯೋಜಿತರಾಗಿರುವ ಕಾನ್‌ಸ್ಟೆಬಲ್ ಹನುಮಂತರಾಯ ಅವರು ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಅನ್ನು ತಡೆದು ವಾಹನ ಮತ್ತು ಅದರ ಚಾಲಕನನ್ನು ತನಿಖೆಗಾಗಿ ಠಾಣೆಗೆ ಕರೆದೊಯ್ದಾಗ ಈ ಘಟನೆ ನಡೆದಿದೆ ಎಂದು ಅವರು ಹೇಳಿದ್ದಾರೆ.
ಗದಗ: ತಂಗಿಗೆ ಚುಡಾಯಿಸ್ಬೇಡ ಎಂದಿದ್ದಕ್ಕೆ ಅಣ್ಣನ ಮೇಲೆ ಪುಂಡರಿಂದ ಮಾರಣಾಂತಿಕ ಹಲ್ಲೆ!
ಪೊಲೀಸರ ಪ್ರಕಾರ, ಕಾನ್‌ಸ್ಟೆಬಲ್‌ಗೆ ನಂತರ ಶಾಸಕಿಯ ಪುತ್ರ ಸಂತೋಷ್‌ನಿಂದ ಕರೆ ಬಂದಿದ್ದು, ಇನ್‌ಸ್ಪೆಕ್ಷನ್ ಬಂಗಲೆಯಲ್ಲಿ ಸಭೆ ನಡೆಸುವಂತೆ ಸೂಚಿಸಿದ್ದಾರೆ. ಅದರಂತೆ ಕಾನ್‌ಸ್ಟೆಬಲ್ ಹನುಮಂತರಾಯ ಅವರು ಪ್ರವಾಸಿ ಮಂದಿರ ತಲುಪಿದ ನಂತರ, ಜೆಡಿಎಸ್ ಕಾರ್ಯಕರ್ತರ ಗುಂಪು ಅವರನ್ನು ಥಳಿಸಿದೆ.
ಗಾಯಗೊಂಡ ಕಾನ್‌ಸ್ಟೆಬಲ್‌ನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಾನ್‌ಸ್ಟೆಬಲ್ ನೀಡಿದ ದೂರಿನ ಆಧಾರದ ಮೇಲೆ ಸಂತೋಷ್ ಮತ್ತು ಘಟನೆಯಲ್ಲಿ ಭಾಗಿಯಾಗಿರುವ ಇತರ ಏಳು ಮಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಭಾನುವಾರ ಸಂಜೆ ದೇವದುರ್ಗ ಪೊಲೀಸ್ ಠಾಣೆಯ ಮುಂದೆ ಶಾಸಕಿ ಮತ್ತು ಅವರ ಬೆಂಬಲಿಗರು ತಮ್ಮ ವಿರುದ್ಧ ಪಿತೂರಿ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದರು.
"ಈ ಪ್ರಕರಣದಲ್ಲಿ ಇನ್ನೂ ಯಾವುದೇ ಬಂಧನವಾಗಿಲ್ಲ. ಆದರೆ ನಾವು ಶೀಘ್ರದಲ್ಲೇ ಘಟನೆಯಲ್ಲಿ ಭಾಗಿಯಾಗಿರುವ ಸಂತೋಷ್ ಮತ್ತು ಇತರರನ್ನು ವಿಚಾರಣೆ ಮಾಡುತ್ತೇವೆ. ತನಿಖೆ ನಡೆಯುತ್ತಿದೆ" ಎಂದು ಪೊಲೀಸರು ತಿಳಿಸಿದ್ದಾರೆ.
ದೇವದುರ್ಗ ಶಾಸಕಿಗೆ ನಿಂದನೆ, ಕೊಲೆ ಬೆದರಿಕೆ: ಮಾಜಿ ಶಾಸಕನ ಸಹೋದರ ಸೇರಿ 8 ಜನರ ವಿರುದ್ಧ ಕೇಸ್
ಈ ಹಿಂದೆ ಅಕ್ರಮ ಮರಳುಗಾರಿಕೆ ವಿರುದ್ಧ ಶಾಸಕಿ ಕರೆಮ್ಮ ನಾಯಕ್ ತೊಡೆ ತಟ್ಟಿದ್ದರು. ಆದ್ರೀಗ ಅಕ್ರಮ ಮರಳುಗಾರಿಕೆಗೆ ಪುತ್ರನ ಮೂಲಕ ಕುಮ್ಮಕ್ಕು ನೀಡುತ್ತಿರುವ ಆರೋಪ ಕೇಳಿಬಂದಿದೆ.