ದರ್ಗಾದ ಬಳಿ ಬೈಕ್ ನಿಲ್ಲಿಸಿ ಜೈಶ್ರೀರಾಮ್ ಘೋಷಣೆ;ಕಿಡಿಗೇಡಿಗಳ ಬಂಧನಕ್ಕೆ ಮುಸ್ಲಿಂ ಸಮುದಾಯ ಆಗ್ರಹ
ನಾಗೇನಹಳ್ಳಿ ದರ್ಗಾದಲ್ಲಿ ದತ್ತಜಯಂತಿ ನಡೆಸುವುದಾಗಿ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಶ್ರೀರಾಮಸೇನೆ ವಿಭಾಗ ಅಧ್ಯಕ್ಷ ರಂಜಿತ್ ಶೆಟ್ಟಿ ಸೇರಿದಂತೆ ಮೂವರನ್ನು ಪೊಲೀಸರು ಮಂಗಳವಾರ ವಶಕ್ಕೆ ಪಡೆದು ಸಂಜೆ ಬಿಡುಗಡೆಗೊಳಿಸಿದರು.
ಚಿಕ್ಕಮಗಳೂರು (ಡಿ.27): ನಾಗೇನಹಳ್ಳಿ ದರ್ಗಾದಲ್ಲಿ ದತ್ತಜಯಂತಿ ನಡೆಸುವುದಾಗಿ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಶ್ರೀರಾಮಸೇನೆ ವಿಭಾಗ ಅಧ್ಯಕ್ಷ ರಂಜಿತ್ ಶೆಟ್ಟಿ ಸೇರಿದಂತೆ ಮೂವರನ್ನು ಪೊಲೀಸರು ಮಂಗಳವಾರ ವಶಕ್ಕೆ ಪಡೆದು ಸಂಜೆ ಬಿಡುಗಡೆಗೊಳಿಸಿದರು.
ಮುಸ್ಲಿಂ ಸಮುದಾಯದವರು ದತ್ತಪೀಠದಲ್ಲಿ ಉರುಸ್ ಆಚರಿಸುವುದಾದರೇ, ಸೌಹಾರ್ದತೆಯ ದೃಷ್ಟಿಯಿಂದ ನಾಗೇನ ಹಳ್ಳಿಯಲ್ಲಿ ಡಿ.26 ರಂದು ದತ್ತಜಯಂತಿ ಆಚರಿಸುವುದಾಗಿ ಶ್ರೀರಾಮ ಸೇನೆ ರಾಜ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ ಮತ್ತು ರಂಜಿತ್ ಶೆಟ್ಟಿ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಮತ್ತು ರಾಜ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ ಅವರನ್ನು ಜ.5 ರವರೆಗೆ ಜಿಲ್ಲಾ ಪ್ರವೇಶವನ್ನು ನಿಷೇಧಿಸಿ ಆದೇಶ ಹೊರಡಿಸಿದೆ.
ಚುನಾವಣೆಯಲ್ಲಿ ನನ್ನ ಸೋಲಿಸಲು ಆಗದ್ದಕ್ಕೆ ವೈಯಕ್ತಿಕ ದಾಳಿ: ಸಿಎಂ ಸಿದ್ದರಾಮಯ್ಯ ವಿರುದ್ಧ ಸಂಸದ ಪ್ರತಾಪ್ ಸಿಂಹ ಕಿಡಿ
ನಾಗೇನಹಳ್ಳಿ ದರ್ಗಾ ಸುತ್ತಮುತ್ತ 200 ಮೀಟರ್ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ದತ್ತಜಯಂತಿ ಆಚರಣೆ ಕರೆ ಹಿನ್ನೆಲೆಯಲ್ಲಿ ವಿಭಾಗ ಅಧ್ಯಕ್ಷ ರಂಜಿತ್ ಶೆಟ್ಟಿ ಸೇರಿದಂತೆ ಮೂವರನ್ನು ವಶಕ್ಕೆ ಪಡೆದು ಸಂಜೆ ಬಿಡುಗಡೆ ಗೊಳಿಸಲಾಯಿತು.
ದರ್ಗಾಕ್ಕೆ ಹಾನಿಗೆ ಯತ್ನ
ಕಿಡಿಗೇಡಿಗಳ ಗುಂಪೊಂದು ರಸ್ತೆ ಬದಿಯಲ್ಲಿದ್ದ ದರ್ಗಾ ಹಾನಿಗೆ ಯತ್ನಿಸಿರುವ ಘಟನೆ ತರೀಕೆರೆ ತಾಲೂಕಿನ ಲಿಂಗದಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಸಂತವೇರಿ ಗ್ರಾಮದಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ.
ತರೀಕೆರೆ ರಾಜ್ಯ ಹೆದ್ದಾರಿ ಬದಿಯ ದರ್ಗಾದ ಬಳಿ ಭದ್ರಾವತಿ ತಾಲೂಕಿನಿಂದ ಸುಮಾರು 25 ಬೈಕ್ ಗಳಲ್ಲಿ ಆಗಮಿಸಿದ್ದ ದತ್ತಮಾಲಾಧಾರಿಗಳು ದರ್ಗಾದ ಬಳಿ ಬೈಕ್ ನಿಲ್ಲಿಸಿಕೊಂಡು ಜೈಶ್ರೀರಾಮ್ ಘೋಷಣೆ ಕೂಗುತ್ತ ಗೊಂದಲ ಸೃಷ್ಟಿಸಿದ್ದಾರೆ. ಈ ವೇಳೆ ದರ್ಗಾದ ಬಳಿ ಭದ್ರತೆಗೆ ನಿಯೋಜನೆಗೊಂಡಿದ್ದ ಪೊಲೀಸರು ದತ್ತಮಾಲಾಧಾರಿ ಗಳನ್ನು ಮುಂದೆ ಹೋಗುವಂತೆ ತಿಳಿಸಿದ್ದಾರೆ. ಪೊಲೀಸರ ಸೂಚನೆ ಧಿಕ್ಕರಿಸಿದ ದತ್ತಮಾಲಾಧಾರಿಗಳು ದರ್ಗಾದ ಬಳಿ ಹುಚ್ಚಾಟ ಮೆರೆದಿದ್ದಾರೆ. ದರ್ಗಾದ ಒಳಗೆ ನುಗ್ಗಲು ಯತ್ನಿಸಿದರೆಂದು ಹೇಳಲಾಗಿದ್ದು, ಸ್ಥಳೀಯ ಮುಸ್ಲಿಂ ಸಮುದಾಯದವರು ಹಾಗೂ ವಿವಿಧ ಸಂಘಟನೆಗಳ ಮುಖಂಡರು ಸ್ಥಳಕ್ಕೆ ಬರುತ್ತಿದ್ದಂತೆ ದತ್ತಮಾಲಾಧಾರಿಗಳು ಬೈಕ್ ಏರಿ ಪರಾರಿ ಯಾಗಿದ್ದಾರೆಂದು ಹೇಳಲಾಗುತ್ತಿದೆ.
ಮೋದಿ ಮತ್ತೆ ಪ್ರಧಾನಿ ಆಗುವುದನ್ನ ಯಾರಿಂದಲೂ ತಪ್ಪಿಸಲಾಗಲ್ಲ: ಖ್ಯಾತ ಜ್ಯೋತಿಷಿ ರಾಜಗುರು ದ್ವಾರಕನಾಥ್ ಭವಿಷ್ಯ
ದರ್ಗಾ ಆವರಣದಲ್ಲಿ ಸಿಸಿ ಕ್ಯಾಮರ ಅಳವಡಿಸಿದ್ದು, ಪೊಲೀಸರು ಸಿಸಿ ಕ್ಯಾಮರ ಪರಿಶೀಲಿಸಿ ಕಿಡಿಗೇಡಿಗಳ ವಿರುದ್ಧ ಕಾನೂನು ಕ್ರಮವಹಿಸಬೇಕು, ಸ್ಥಳಿಯರು ಆಗ್ರಹಿಸಿದ್ದಾರೆ.
ಘಟನಾ ಸ್ಥಳಕ್ಕೆ ತರಿಕೆರೆ ಡಿವೈಎಸ್ಪಿ ನೇತೃತ್ವದ ಪೊಲೀಸರ ತಂಡ ಭೇಟಿ ನೀಡಿ ಪರಿಶೀಲಿದ್ದಾರೆ. ಲಿಂಗದಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.