ರೈಲಿನ ಸಂಚಾರಕ್ಕೆ ಯಾವುದೇ ತಡೆ ಇಲ್ಲದಂತೆ ಸರಾಗವಾಗಿಸಲು ಸ್ವಯಂಚಾಲಿತ ಸಿಗ್ನಲಿಂಗ್ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ.

ಬೆಂಗಳೂರು(ಡಿ.22): ಯಶವಂತಪುರ ಮತ್ತು ಅರಸೀಕೆರೆ ನಡುವೆ (165.86 ಕಿ.ಮೀ.) ಸ್ವಯಂಚಾಲಿತ ಸಿಗ್ನಲಿಂಗ್ ವ್ಯವಸ್ಥೆಯನ್ನು ಜಾರಿಗೊಳಿಸಲು ರೈಲ್ವೆ ಮಂಡಳಿಯು ಅನುಮೋದನೆ ನೀಡಿದೆ. ಇದರಿಂದ ಪ್ರಯಾಣಿಕ ಹಾಗೂ ಸರಕು ಸಾಗಣೆ ರೈಲುಗಳ ಸಂಚಾರಕ್ಕೆ ಹೆಚ್ಚಿನ ಅನುಕೂಲವಾಗಲಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಬೆಂಗಳೂರು ಮತ್ತು ಮೈಸೂರು ವಿಭಾಗಗಳು ಅದರಲ್ಲೂ ವಿಶೇಷವಾಗಿ ಯಶವಂತಪುರ-ಅರಸೀಕೆರೆ ವಿಭಾಗದಲ್ಲಿ ಹೆಚ್ಚಿನ ಪ್ರಯಾಣಿಕ ರೈಲುಗಳಿಗೆ ಬೇಡಿಕೆಯಿದೆ. ಅಲ್ಲದೆ ಇಲ್ಲಿಂದ ಆಹಾರ ಧಾನ್ಯ, ರಸಗೊಬ್ಬರ, ಪಿಒಎಲ್, ಸಿಮೆಂಟ್, ಉಕ್ಕು ಮತ್ತು ವಾಹನಗಳು ಸೇರಿದಂತೆ ಸರಕು ಸಾಗಣೆ ಕೂಡ ಹೆಚ್ಚಿದೆ. ಈ ಹಿನ್ನೆಲೆಯಲ್ಲಿ ರೈಲಿನ ಸಂಚಾರಕ್ಕೆ ಯಾವುದೇ ತಡೆ ಇಲ್ಲದಂತೆ ಸರಾಗವಾಗಿಸಲು ಸ್ವಯಂಚಾಲಿತ ಸಿಗ್ನಲಿಂಗ್ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ.

ಒಂಟಿಯಾಗಿ ರೈಲಲ್ಲಿ ಪ್ರಯಾಣಿಸೋ ಮಹಿಳೆಯರಿಗೆ ಸಿಗುತ್ತೆ ಈ ಸೌಲಭ್ಯ

ಈ ಯೋಜನೆಗೆ ₹218.75 ಕೋಟಿ ತಗುಲುವ ನೀರಿಕ್ಷೆಯಿದ್ದು, ಮೂರು ವರ್ಷಗಳ ಅವಧಿಯಲ್ಲಿ ಯೋಜನೆಯು ಪೂರ್ಣಗೊಳಿಸುವ ಗುರಿಯಿದೆ. ಸ್ವಯಂಚಾಲಿತ ಸಿಗ್ನಲಿಂಗ್‌ನ ಅನುಷ್ಠಾನವು ರೈಲ್ವೆ ಮೂಲಸೌಕರ್ಯವನ್ನು ಆಧುನೀಕರಣಗೊಳಿಸವ ಹೆಜ್ಜೆಯಾಗಿದೆ ಎಂದು ನೈಋತ್ಯ ರೈಲ್ವೆ ಪ್ರಕಟಣೆಯಲ್ಲಿ ತಿಳಿಸಿದೆ.