Asianet Suvarna News Asianet Suvarna News

ಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠಾಪನೆ; ಜ.22 ರಂದು ಸರ್ಕಾರಿ ರಜೆ ಘೊಷಣೆ ಇಲ್ಲ: ಸಿಎಂ ಸ್ಪಷ್ಟನೆ

ಅಯೋಧ್ಯೆಯ ರಾಮಮಂದಿರದಲ್ಲಿ ರಾಮಲಲ್ಲಾ ವಿಗ್ರಹ ಪ್ರತಿಷ್ಠಾಪನೆ ಕಾರ್ಯಕ್ರಮ ನಾಳೆ ನಡೆಲಿದೆ ದೇಶದ ಹಲವು ರಾಜ್ಯಗಳು ರಜೆ ಘೋಷಿಸಿವೆ ಆದರೆ ಕರ್ನಾಟಕದಲ್ಲಿ ನಾಳೆ ಜನವರಿ 22ರಂದು ಸರ್ಕಾರಿ ರಜೆ ಘೋಷಿಸುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

Ayodhya Ram Mandir Pranapratishtapane No government holiday in karnataa CM Siddaramaiah clarifies rav
Author
First Published Jan 21, 2024, 9:37 PM IST

ತುಮಕೂರು (ಜ.21): ಅಯೋಧ್ಯೆಯ ರಾಮಮಂದಿರದಲ್ಲಿ ರಾಮಲಲ್ಲಾ ವಿಗ್ರಹ ಪ್ರತಿಷ್ಠಾಪನೆ ಕಾರ್ಯಕ್ರಮ ನಾಳೆ ನಡೆಲಿದೆ ದೇಶದ ಹಲವು ರಾಜ್ಯಗಳು ರಜೆ ಘೋಷಿಸಿವೆ ಆದರೆ ಕರ್ನಾಟಕದಲ್ಲಿ ನಾಳೆ ಜನವರಿ 22ರಂದು ಸರ್ಕಾರಿ ರಜೆ ಘೋಷಿಸುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ನಾಳೆ ಸರ್ಕಾರಿ ರಜೆ ಘೋಷಿಸಬೇಕು ಎಂದು ಬಿಜೆಪಿ ಸೇರಿದಂತೆ ಹಿಂದೂ ಸಂಘಟನೆಗಳು ಹಾಗೂ ವಿವಿಧ ಸಂಘಟನೆಗಳು ಆಗ್ರಹಿಸಿದ್ದವು. ರಜೆ ಕೊಡಬೇಕೋ ಬೇಡವೋ ಎಂಬ ಬಗ್ಗೆ ತೀರ್ಮಾನಿಸಲಾಗುವುದು ಎಂದು ಹೇಳಿದ್ದರು. ಆದರೆ ಇದೀಗ  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಜೆ ಘೋಷಣೆ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದರೊಂದಿಗೆ ಸರ್ಕಾರಿ ರಜೆ ಬಗ್ಗೆ ಸಿಎಂ ಸಿದ್ದರಾಮಯ್ಯನವರು ತಮ್ಮ ನಿಲುವು ಪ್ರಕಟಿಸಿದ್ದಾರೆ.

'ಅದೇನು ದುರ್ಬುದ್ಧಿ ಬಂದಿದೋ ಗೊತ್ತಿಲ್ಲ; ದುರ್ಯೋಧನ ರೀತಿ ಆಡ್ತಾರೆ : ರಜೆ ಘೋಷಿಸದ ಸಿಎಂ ವಿರುದ್ಧ ಆರ್ ಅಶೋಕ್ ವಾಗ್ದಾಳಿ

ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ನಾಳೆ ಮುಜರಾಯಿ ದೇಗುಲಗಳಲ್ಲಿ ವಿಶೇಷ ಪೂಜೆ ನಡೆಯುತ್ತೆ. ಆದರೆ ಸರ್ಕಾರಿ ರಜೆ ಇಲ್ಲ. ನಾಳೆ ಮುಜರಾಯಿ ದೇಗುಲಗಳಲ್ಲಿ ದಾಸೋಹ, ಪಾನಕ-ಫಲಹಾರ ವ್ಯವಸ್ಥೆ ಬಗ್ಗೆ ನನಗೆ ಮಾಹಿತಿ ಇಲ್ಲ. ನಾಳೆ ಮಹದೇವಪುರದಲ್ಲಿ ರಾಮನ ದೇವಸ್ಥಾನ ಉದ್ಘಾಟನೆ ಮಾಡುತ್ತಿದ್ದೇನೆ. ಕಾರ್ಯಕ್ರಮಕ್ಕೆ ನನಗೆ ಆಹ್ವಾನ ನೀಡಿದ್ದಾರೆ. ಹೀಗಾಗಿ ದೇಗುಲ ಉದ್ಘಾಟಿಸುತ್ತೇನೆ ಎಂದು ಹೇಳಿದರು. 

ನಾಳೆ ಅಯೋಧ್ಯೆ ಬಾಲರಾಮ ಪ್ರಾಣಪ್ರತಿಷ್ಠೆ: ಕಾಫಿನಾಡು ಚಿಕ್ಕಮಗಳೂರಲ್ಲಿ ಸಂಭ್ರಮ!

ರಾಮಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ವಿಧಾನಪರಿಷತ್ ಪ್ರತಿಪಕ್ಷ ನಾಯಕ ಕೋಟ ಶ್ರೀನಿವಾಸ್ ಪೂಜಾರಿ, ವಿಪಕ್ಷ ನಾಯಕ ಆರ್ ಅಶೋಕ್ ಕೂಡ ಸಿದ್ದರಾಮಯ್ಯನವರಿಗೆ ಪತ್ರ ಬರೆದು ಮನವಿ ಮಾಡಿಕೊಂಡಿದ್ದರು. ಅಲ್ಲದೇ ಹಿಂದೂಪರ ಸಂಘಟನೆಗಳು, ಬೆಂಗಳೂರು ವಕೀಲರ ಸಂಘವು ಸಹ ರಜೆ ನೀಡುವಂತೆ ಮನವಿ ಮಾಡಿತ್ತು. ಆದರೆ ಇದೀಗ ಅಂತಿಮವಾಗಿ ಸಿದ್ದರಾಮಯ್ಯನವರು ರಜೆ ಘೋಷಣೆ ಮಾಡುವುದಿಲ್ಲ ಎಂದು ಹೇಳಿದ್ದಾರೆ.

Follow Us:
Download App:
  • android
  • ios