ರಾಮಮಂದಿರ ಲೋಕಾರ್ಪಣೆ ಹಿನ್ನೆಲೆ: ಮಂಗಳೂರಿನಲ್ಲಿ ಹೈ ಅಲರ್ಟ್!
ಸೋಮವಾರ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದ ಲೋಕಾರ್ಪಣೆ ಹಿನ್ನೆಲೆಯಲ್ಲಿ ಮಂಗಳೂರು ನಗರದಾದ್ಯಂತ ಬಿಗು ಪೊಲೀಸ್ ಬಂದೋಬಸ್ತ್ ಗೆ ಕಮಿಷನರ್ ಸೂಚನೆ ನೀಡಿದ್ದು, ಹೈ ಅಲರ್ಟ್ ಇರುವಂತೆ ಪೊಲೀಸ್ ಇಲಾಖೆಗೆ ಆದೇಶಿಸಿದ್ದಾರೆ.
ಭರತ್ ರಾಜ್ ಏಷ್ಯಾನೆಟ್ ಸುವರ್ಣ ನ್ಯೂಸ್ ಮಂಗಳೂರು
ಮಂಗಳೂರು (ಜ.20): ಸೋಮವಾರ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದ ಲೋಕಾರ್ಪಣೆ ಹಿನ್ನೆಲೆಯಲ್ಲಿ ಮಂಗಳೂರು ನಗರದಾದ್ಯಂತ ಬಿಗು ಪೊಲೀಸ್ ಬಂದೋಬಸ್ತ್ ಗೆ ಕಮಿಷನರ್ ಸೂಚನೆ ನೀಡಿದ್ದು, ಹೈ ಅಲರ್ಟ್ ಇರುವಂತೆ ಪೊಲೀಸ್ ಇಲಾಖೆಗೆ ಆದೇಶಿಸಿದ್ದಾರೆ.
ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಸೂಚನೆ ಹಿನ್ನೆಲೆಯಲ್ಲಿ ನಗರಾದ್ಯಂತ ಸೂಕ್ತ ಬಂದೋಬಸ್ತ್ ಕ್ರಮಗಳನ್ನ ಕೈಗೊಳ್ಳಲಾಗಿದೆ. ಮಂಗಳೂರು ನಗರದಲ್ಲಿ ದೇವಸ್ಥಾನ ಮತ್ತು ಮಂದಿರಗಳಲ್ಲಿ ಕಾರ್ಯಕ್ರಮ ಇದ್ದು, ಒಟ್ಟು 196 ಕಡೆಗಳಲ್ಲಿ ಪೂಜೆ, ಧಾರ್ಮಿಕ ಕಾರ್ಯಕ್ರಮ ಸ್ಥಳಗಳನ್ನು ಪೊಲೀಸ್ ಇಲಾಖೆ ಗುರುತಿಸಿದೆ.
131 ಸೂಕ್ಷ್ಮ ಪ್ರದೇಶಗಳಲ್ಲಿ ಹಗಲು-ರಾತ್ರಿ ಪಿಕೆಟಿಂಗ್ ನೇಮಿಸಿ ಅಧಿಕಾರಿಗಳ ನಿಯೋಜನೆ ಮಾಡಲಾಗಿದ್ದು, ನಗರದಾದ್ಯಂತ 57 ಸೆಕ್ಟರ್ ಮೊಬೈಲ್ ಸ್ಕ್ಯಾಡ್ ಗಳ ಮೂಲಕ 24 ಗಂಟೆ ಗಸ್ತಿಗೆ ಸೂಚಿಸಲಾಗಿದೆ. ನಗರದ 14 ಸ್ಥಳಗಳಲ್ಲಿ ಚೆಕ್ ಪಾಯಿಂಟ್ ಗಳಿಗೆ ಜಾಗ ಗುರುತು ಮಾಡಿದ್ದು, 9 ಸಿ.ಎ.ಆರ್ ಮತ್ತು 3 ಕೆ.ಎಸ್.ಆರ್.ಪಿ ತುಕಡಿಗಳ ನಿಯೋಜನೆ ಮಾಡಲಾಗಿದೆ.
ತಡರಾತ್ರಿ ಮತ್ತು ಮುಂಜಾನೆ ವಿಶೇಷ ಗಸ್ತುಗಳನ್ನು ಆಯೋಜನೆ ಜೊತೆಗೆ ನಗರದ ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ವಿದ್ವಂಸಕ ತಪಾಸಣಾ ತಂಡದಿಂದ ತಪಾಸಣೆ ನಡೆಯಲಿದೆ. ಕಮಿಷನರೇಟ್ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಮೆರವಣಿಗೆ, ರ್ಯಾಲಿಗಳಿಗೆ ಅನುಮತಿ ಇಲ್ಲವಾಗಿದ್ದು, ಪಾಲಿಕೆಯೊಂದಿಗೆ ಸಮನ್ವಯ ಸಾದಿಸಿ ಫ್ಲೆಕ್ಸ್, ಬ್ಯಾನರ್, ಬಂಟಿಂಗ್ಸ್ ಅಳವಡಿಕೆಗಳ ಮೇಲೆ ಸೂಕ್ತ ನಿಗಾ ಇಡಲಾಗಿದೆ.
ಈ ಬಾರಿ ಅಭಿಮಾನಿಗಳೊಂದಿಗೆ ಬರ್ತಡೇ ಆಚರಿಸಿಕೊಳ್ಳಲ್ಲ ಎಂದ ನಿಖಿಲ್ ಕುಮಾರಸ್ವಾಮಿ! ಕಾರಣ ಇಲ್ಲಿದೆ
ನಗರ ಕಮಿಷನರೇಟ್ ವ್ಯಾಪ್ತಿಯಲ್ಲಿ ಭಾನುವಾರ ಮದ್ಯಾರಾತ್ರಿಯಿಂದ ಮಂಗಳವಾರ ಮುಂಜಾನೆಯವರೆಗೆ ಮದ್ಯ ನಿಷೇಧಕ್ಕೆ ಡಿಸಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಕಮಿಷನರ್ ತಿಳಿಸಿದ್ದಾರೆ. ಸದ್ಯ 3-ಡಿಸಿಪಿ, ೦6-ಎಸಿಪಿ, 11-ಪಿ.ಐ ಮತ್ತು 37-ಪಿ.ಎಸ್.ಐ ದರ್ಜೆಯ ಅಧಿಕಾರಿಗಳ ನೇಮಕ ಮಾಡಿದ್ದು, ಒಟ್ಟು 781 ಪೊಲೀಸ್ ಸಿಬ್ಬಂದಿ ಬಂದೋಬಸ್ತ್ ಕರ್ತವ್ಯಕ್ಕೆ ನಿಯೋಜನೆ ಮಾಡಲಾಗಿದೆ ಎಂದು ಮಂಗಳೂರು ಕಮಿಷನರ್ ಅನುಪಮ್ ಅಗರ್ವಾಲ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ; ಚಕ್ರವರ್ತಿ ಸೂಲಿಬೆಲೆ ವಿರುದ್ಧ ಎಫ್‌ಐಆರ್ !