ನಾವೂ ಶ್ರೀರಾಮಚಂದ್ರನ ಭಕ್ತರು: ಅಯೋಧ್ಯಾ ಮಂದಿರ ಉದ್ಘಾಟನೆಗೆ ನಮ್ಮ ವಿರೋಧ ಇಲ್ಲ: ಸಿಎಂ
ಅಯೋಧ್ಯಾ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಬಿಜೆಪಿಯವರು ರಾಜಕೀಯ ಮಾಡ್ತಿದ್ದಾರೆ. ನಾವು ಶ್ರೀರಾಮಚಂದ್ರನ ವಿರುದ್ಧವಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ಬೆಂಗಳೂರು (ಜ.11): ಅಯೋಧ್ಯಾ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಬಿಜೆಪಿಯವರು ರಾಜಕೀಯ ಮಾಡ್ತಿದ್ದಾರೆ. ನಾವು ಶ್ರೀರಾಮಚಂದ್ರನ ವಿರುದ್ಧವಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ಅಯೋಧ್ಯೆ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಗೈರಾಗುವ ವಿಚಾರ ಹೇಳಿಕೆ ಸಂಬಂಧ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, ನಾವು ರಾಮಮಂದಿರದ ವಿರುದ್ಧ ಎಂದು ಬಿಜೆಪಿಯವರು ಬಿಂಬಿಸುತ್ತಿದ್ದಾರೆ. ಆದರೆ ನಾವೂ ಶ್ರೀರಾಮಚಂದ್ರನನ್ನ ಪೂಜಿಸುತ್ತೇವೆ, ಭಜನೆ ಮಾಡುತ್ತೇವೆ, ರಾಮಮಂದಿರ ಕಟ್ಟಿದ್ದೇವೆ. ಹೀಗಾಗಿ ರಾಮಮಂದಿರಕ್ಕೆ ನಮ್ಮ ವಿರೋಧವಿಲ್ಲ. ರಾಮಮಂದಿರ ವಿಚಾರದಲ್ಲಿ ಬಿಜೆಪಿಯವರು ರಾಜಕೀಯ ಮಾಡ್ತಿದ್ದಾರೆ ಅದಕ್ಕೆ ನಮ್ಮ ವಿರೋಧವಿದೆ ಎಂದರು.
ಶ್ರೀರಾಮ, ರಾಮಮಂದಿರ ವಿಷಯವನ್ನು ದೊಡ್ಡ ರಾಜಕೀಯ ವಿಷಯವನ್ನಾಗಿ ಮಾಡಿಕೊಂಡು. ಚುನಾವಣೆಯಲ್ಲಿ ಮತ ಸೆಳೆಯಲು ಬಿಜೆಪಿ ಪ್ಲಾನ್ ಮಾಡಿದೆ. ಹೀಗಾಗಿ ಅದನ್ನೇ ರಾಜಕೀಯ ವಿಷಯವನ್ನಾಗಿ ಮಾಡಿಕೊಂಡಿದ್ದಾರೆ. ಈ ವಿಷಯವನ್ನು ನಾವು ವಿರೋಧ ಮಾಡಿದ್ದೇವೆ ಅಷ್ಟೇ. ನಾವೆಲ್ಲ ಶ್ರೀರಾಮಚಂದ್ರನ ಭಕ್ತರೇ. ಕೇಂದ್ರ ಸಚಿವರುಗಳು ರಾಜಕೀಯ ಮಾತನಾಡ್ತಿದ್ದಾರೆ. ರಾಜಕೀಯ ಮಾತನಾಡೋರಿಗೆ ಔಷಧವಿಲ್ಲ ಎಂದು ಪರೋಕ್ಷವಾಗಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ತಿರುಗೇಟು ನೀಡಿದರು.
ನಾವು ರಾಮಭಕ್ತರೇ ಆದರೆ ರಾಮಮಂದಿರ ಉದ್ಘಾಟನೆಗೆ ಯಾಕೆ ಹೋಗೊಲ್ಲಂದ್ರೆ..; ಮಾಜಿ ಸಚಿವ ಎಚ್ ಆಂಜನೇಯ ಹೇಳಿದ್ದೇನು?