ಅಯೋಧ್ಯೆ ಬಾಲರಾಮನ ಪ್ರಾಣ ಪ್ರತಿಷ್ಠಾಪನೆ: ಸರ್ಕಾರಿ ರಜೆ ಘೋಷಿಸುವಂತೆ ಬಿವೈ ವಿಜಯೇಂದ್ರ ಆಗ್ರಹ!
ಅಯೋಧ್ಯೆಯಲ್ಲಿ ನಡೆಯುವ ಐತಿಹಾಸಿಕ ಪ್ರಾಣ ಪ್ರತಿಷ್ಠಾಪನ ಸಮಾರಂಭಕ್ಕೆ ಸಾಕ್ಷಿಯಾಗಲು ರಾಜ್ಯದ ಜನರಿಗೆ ಅವಕಾಶ ನೀಡಬೇಕು. ಇದಕ್ಕಾಗಿ ಜ.22ರಂದು ರಾಜ್ಯ ಸರ್ಕಾರ ಸರ್ಕಾರಿ ರಜೆ ಘೋಷಣೆ ಮಾಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆಗ್ರಹಿಸಿದ್ದಾರೆ.
ಬೆಂಗಳೂರು (ಜ.22): ಅಯೋಧ್ಯೆಯಲ್ಲಿ ನಡೆಯುವ ಐತಿಹಾಸಿಕ ಪ್ರಾಣ ಪ್ರತಿಷ್ಠಾಪನ ಸಮಾರಂಭಕ್ಕೆ ಸಾಕ್ಷಿಯಾಗಲು ರಾಜ್ಯದ ಜನರಿಗೆ ಅವಕಾಶ ನೀಡಬೇಕು. ಇದಕ್ಕಾಗಿ ಜ.22ರಂದು ರಾಜ್ಯ ಸರ್ಕಾರ ಸರ್ಕಾರಿ ರಜೆ ಘೋಷಣೆ ಮಾಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆಗ್ರಹಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಬಿವೈ ವಿಜಯೇಂದ್ರ ರಾಮಲಲ್ಲಾ ವಿಗ್ರಹದ ಪ್ರಾಣಪ್ರತಿಷ್ಠಾಪನೆ ನಿಮಿತ್ತ ಕೇಂದ್ರ ಸರ್ಕಾರ ರಜೆ ಘೋಷಿಸಿದೆ. ಇಂದು ಜಗತ್ತಿನಾದ್ಯಂತ ಐತಿಹಾಸಿಕ ದಿನವಾಗಿದ್ದು, ರಾಜ್ಯ ಸರ್ಕಾರ ರಜೆ ಘೋಷಿಸಬೇಕು. ಈ ಸಂಬಂಧ ಬಿಜೆಪಿ ಮತ್ತು ಜೆಡಿಎಸ್ ಕೂಡ ಇದೇ ರೀತಿಯ ನಿಲುವು ಹೊಂದಿವೆ. ಇಂತಹ ಐತಿಹಾಸಿಕ ಘಟನೆಯನ್ನು ವೀಕ್ಷಿಸಲು ಜನರಿಗೆ ಅವಕಾಶವಿದೆ. ಕರ್ನಾಟಕದ ಪ್ರಸ್ತುತ ಕಾಂಗ್ರೆಸ್ ಸರ್ಕಾರವು ರಜೆ ಘೋಷಿಸದಿರುವುದುಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠಾಪನೆ; ಜ.22 ರಂದು ಸರ್ಕಾರಿ ರಜೆ ಘೊಷಣೆ ಇಲ್ಲ: ಸಿಎಂ ಸ್ಪಷ್ಟನೆ
ಕಾಂಗ್ರೆಸ್ ನಾಯಕರು ರಾಮಮಂದಿರ ಆಹ್ವಾನ ತಿರಸ್ಕರಿಸಿ ಬಹುಸಂಖ್ಯಾತ ಹಿಂದೂಗಳ ಭಾವನೆಗೆ ಘಾಸಿ ಮಾಡಿದ್ದಾರೆ. ಅಲ್ಪಸಂಖ್ಯಾತರಿಗೆ ನೋವಾಗುತ್ತದೆ ಎಂದು ಆಹ್ವಾನ ತಿರಸ್ಕರಿಸಿದ್ದಾರೆ. ಅಲ್ಪಸಂಖ್ಯಾತರಿಗೆ ದುಃಖ.. ಆದರೆ ಅದಕ್ಕಿಂತ ಹೆಚ್ಚು ದುಃಖ ಕಾಂಗ್ರೆಸ್‍ನವರಿಗೆ ಆಗುತ್ತದೆ ಎಂದು ಅವರು ವ್ಯಂಗ್ಯವಾಡಿದ್ದಾರೆ 'ಅದೇನು ದುರ್ಬುದ್ಧಿ ಬಂದಿದೋ ಗೊತ್ತಿಲ್ಲ; ದುರ್ಯೋಧನ ರೀತಿ ಆಡ್ತಾರೆ : ರಜೆ ಘೋಷಿಸದ ಸಿಎಂ ವಿರುದ್ಧ ಆರ್ ಅಶೋಕ್ ವಾಗ್ದಾಳಿ
ಇದೇ ವೇಳೆ ರಾಜ್ಯ ಸರ್ಕಾರವನ್ನ ರಾಜ್ಯಪಾಲರ ಮೂಲಕ ಕಂಟ್ರೋಲ್ ಮಾಡಲಾಗುತ್ತಿದೆ ಎಂಬ ಸಚಿವ ಪ್ರಿಯಾಂಕ್ ಖರ್ಗೆ ಆರೋಪ ವಿಚಾರಕ್ಕೆ ಪ್ರತಿಕ್ರಿಯಿಸಿ, ಬಿ.ಕೆ.ಹರಿಪ್ರಸಾದ್ ಅವರನ್ನ ಕೇಂದ್ರ ಸರ್ಕಾರ ಟಾರ್ಗೆಟ್ ಮಾಡಿದೆಯೋ? ರಾಜ್ಯ ಸರ್ಕಾರ ಟಾರ್ಗೆಟ್ ಮಾಡಿದೆಯೋ? ಮುಂದಿನ ದಿನಗಳಲ್ಲಿ ಅದು ಗೊತ್ತಾಗಲಿದೆ ಎಂದು ಹೇಳಿದರು.