Asianet Suvarna News Asianet Suvarna News

ರಾಜ್ಯಮಟ್ಟದ ವಿಚಾರ ಸಂಕಿರಣದಲ್ಲಿ ಶಿಕ್ಷಣ ಸಚಿವ ಡಾ.ಅಶ್ವತ್ಥನಾರಾಯಣ 

"ತ್ಯಾಗ, ಬಲಿದಾನಗಳ ಸ್ಮರಣೆಯೇ ಅಮೃತ ‌ಮಹೋತ್ಸವ" ರಾಜ್ಯಮಟ್ಟದ ವಿಚಾರ ಸಂಕಿರಣದಲ್ಲಿ  ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥನಾರಾಯಣ ಹೇಳಿದರು.

Azadi Ka Amrit Mahotsav State level Conference Conducted in Bengaluru University rav
Author
Bangalore, First Published Aug 5, 2022, 2:09 PM IST

ಬೆಂಗಳೂರು: (ಆ.5) : ಭಾರತ ಸ್ವಾತಂತ್ರ್ಯ ಪಡೆಯಲಿಕ್ಕೆ ಸಾವಿರಾರು ಜನರ ತ್ಯಾಗ, ಬಲಿದಾನಗಳು ನಡೆದಿವೆ. ಆ ತ್ಯಾಗ, ಬಲಿದಾನ ಮಾಡಿರುವ ಮಹನೀಯರನ್ನು ನೆನೆಯಬೇಕು ಎಂಬ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ದೇಶಾದ್ಯಂತ  ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಆಚರಣೆಗೆ ಕರೆ ನೀಡಿದ್ದಾರೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ(Dr.C.N.Ashwath Narayan) ಹೇಳಿದರು.

ಅಜಾದಿ ಕಾ ಅಮೃತ ಮಹೋತ್ಸವ(Azadi Ka Amrit Mahotsav) ನಿಮಿತ್ತ ಬೆಂಗಳೂರು ವಿಶ್ವವಿದ್ಯಾಲ(Bengaluru University)ಯದಲ್ಲಿ ವಿದ್ಯುನ್ಮಾನ ಮಾಧ್ಯಮ ವಿಭಾಗ ಮತ್ತು ದಿಶಾ ಭಾರತ(Dishaa Bharat) ಸಹಯೋಗದಲ್ಲಿ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ವಿಚಾರ ಸಂಕಿರಣ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ಕಳೆದ 75 ವರ್ಷಗಳಲ್ಲಿ ಭಾರತವು ವಿವಿಧತೆಯಲ್ಲಿ ಏಕತೆ ಸಾಧಿಸಿದೆ. ಅದಕ್ಕಾಗಿಯೇ ಪ್ರಧಾನಿ ಮೋದಿ ಅವರು ಇದೊಂದು ಅಮೃತ ಕಾಲ ಎಂದು ಘೋಷಿಸಿದ್ದಾರೆ.

ಯತಿರಾಜ ಮಠದ ಶ್ರೀಗಳಿಗೆ ತುಮಕೂರು ವಿವಿ ಗೌರವ ಡಾಕ್ಟರೇಟ್ ಪ್ರದಾನ

ನಮ್ಮ ರಾಜ್ಯದಲ್ಲಿ ಆರೂವರೆ ಕೋಟಿ ಜನಸಂಖ್ಯೆ ಇದ್ದರೂ ಗುಣಮಟ್ಟದ ಶಿಕ್ಷಣದ ಕೊರತೆಯಿಂದಾಗಿ ಟ್ಯಾಲೆಂಟ್‌‌ಗೂ ಕೊರತೆ ಉಂಟಾಗಿದೆ. ತರಗತಿಯ ಕಲಿಕೆಯಿಂದ ಹೊರಬಂದರೆ ಮಾತ್ರ ಗುಣಮಟ್ಟದ ಶಿಕ್ಷಣ ಪಡೆಯಲು ಸಾಧ್ಯ. ಆ ನಿಟ್ಟಿನಲ್ಲಿ ದೇಶದಲ್ಲೇ ಪ್ರಪ್ರಥಮ ಬಾರಿಗೆ ಕರ್ನಾಟಕದಲ್ಲಿ ಎನ್‌ಇಪಿ(NEP) ಜಾರಿಗೆ ತರಲಾಗಿದೆ. ಈ ನಾಡಿನಲ್ಲಿ ಪ್ರತಿಯೊಬ್ಬ ಯುವಕರೂ ಕೌಶಲ ಹೊಂದಬೇಕು. ಆ ಮೂಲಕ ಪ್ರತಿಯೊಬ್ಬರೂ ಉದ್ಯೋಗ ಪಡೆಯುವಂತಾಗಬೇಕು ಎಂಬ ನಿಟ್ಟಿನಲ್ಲಿ ನಮ್ಮ ಸರಕಾರ ಕೆಲಸ ಮಾಡುತ್ತಿದೆ ಎಂದು ಹೇಳಿದರು.

ಕರ್ನಾಟಕ ಸಾಹಿತ್ಯ ಅಕಾಡೆಮಿ(Karnataka Sahitya Academy) ಅಧ್ಯಕ್ಷ ಡಾ.ಬಿ.ವಿ.ವಸಂತ್‌ಕುಮಾರ್(Dr.B.V.Vasanth Kumar), ಮನೆಗಿಂತ ದೊಡ್ಡ ವಿಶ್ವವಿದ್ಯಾಲಯ ಮತ್ತೊಂದಿಲ್ಲ.ಮನೆಯ ಸಂಸ್ಕೃತಿಯಿಂದ ಕಲಿಯದ ಪಾಠ ಬೇರೆ ಎಲ್ಲಿಂದಲೂ ಕಲಿಯಲು ಸಾಧ್ಯವಿಲ್ಲ. ದಾನ, ಧರ್ಮದ ಬಗ್ಗೆ ಯಾವ ವಿಶ್ವವಿದ್ಯಾಲಯದಲ್ಲಿ ಕಲಿಸುವುದಿಲ್ಲ. ಆದರೆ ನಮ್ಮ ಹಳ್ಳಿಗಳಲ್ಲಿರುವ ರೈತರು ಬೆಳೆ ಬಂದಾಗ ಬಡವರಿಗೆ, ದರಿದ್ರರಿಗೆ ದಾನ ಮಾಡಿ ನಂತರ ಮನೆಗೆ ತೆಗೆದುಕೊಂಡು ಹೋಗುತ್ತಿದ್ದರು. ಪರಂಪರಾಗತದಿಂದ ಇಂತಹ ಗುಣವನ್ನು ಕಲಿಸಿದ್ದು ಭಾರತ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಬೆಂವಿವಿ ಕುಲಪತಿ ಡಾ.ಎಸ್.ಎಂ.ಜಯಕರ(Dr.S.M.Jayakar), ಕುಲಸಚಿವ ಡಾ.ಎಂ.ಕೊಟ್ರೇಶ್(Dr.M.Kotresh), ದಿಶಾ ಭಾರತ್ ಅಧ್ಯಕ್ಷ ಡಾ.ಎನ್.ವಿ.ರಘುರಾಮ್(Dr.N.V.Raghuram) ಮತ್ತಿತರರು ಉಪಸ್ಥಿತರಿದ್ದರು.

ಪಠ್ಯ ಪರಿಷ್ಕರಣೆ ಗೊಂದಲ ನಿವಾರಣೆ: ಸಚಿವ ಅಶ್ವತ್ಥ್ ನಾರಾಯಣ್


ನಾವು ಜ್ಞಾನವನ್ನು ಸಂಪಾದಿಸಬೇಕು. ಆ ಜ್ಞಾನವನ್ನು ಮಂಡಿಸಬೇಕು. ಮಂಡಿಸಿದ ವಿಚಾರಕ್ಕೆ ಬದ್ಧವಾಗಿರಬೇಕು. ಈ ನಿಟ್ಟಿನಲ್ಲಿ ದಿಶಾ ಭಾರತ ಸಂಸ್ಥೆಯು ಯಶಸ್ವಿಯಾಗಿ ಕೆಲಸ ಮಾಡುತ್ತಿದೆ. ವಿಶ್ವವಿದ್ಯಾಲಯಗಳಲ್ಲೂ ಇದು ಅನುಷ್ಠಾನವಾಗಬೇಕು.
-ಡಾ.ಸಿ.ಎನ್.ಅಶ್ವತ್ಥ ನಾರಾಯಣ
ಉನ್ನತ ಶಿಕ್ಷಣ ಸಚಿವ

Follow Us:
Download App:
  • android
  • ios