Asianet Suvarna News Asianet Suvarna News

ಬೆಂಗಳೂರಿನಂತೆ ರಾಜ್ಯದ ಇತರ ನಗರಗಳಲ್ಲೂ ಬಿ ಖಾತಾ: ಸಚಿವ ರಹೀಂಖಾನ್‌

ರಾಜ್ಯಾದ್ಯಂತ ಗಂಭೀರ ಸ್ವರೂಪದ ಸಮಸ್ಯೆಯಾಗಿದೆ. ಅದರ ನಿವಾರಣೆಗಾಗಿ ಸಚಿವ ಸಂಪುಟ ಉಪಸಮಿತಿಯನ್ನು ರಚಿಸಲಾಗಿದೆ. ಈಗಾಗಲೇ ಎರಡು ಸಭೆಗಳಾಗಿದ್ದು, ಶೀಘ್ರದಲ್ಲಿಯೇ ಮೂರನೇ ಸಭೆ ನಡೆಯಲಿದೆ. ಅಲ್ಲಿ ಸೂಕ್ತ ತೀರ್ಮಾನ ತೆಗೆದುಕೊಂಡು ಬಿಬಿಎಂಪಿಯಲ್ಲಿ ಎ, ಬಿ. ಖಾತಾ ನೀಡುವಂತೆ ಇತರೆ ಪ್ರದೇಶದಲ್ಲಿಯೂ ಬಿ ಖಾತಾಗಳನ್ನು ನೀಡಲು ಕ್ರಮ ಕೈಗೊಳ್ಳಲಾಗುತ್ತದೆ: ಪೌರಾಡಳಿತ ಸಚಿವ ರಹೀಂಖಾನ್‌ 
 

B Khata in other cities of the state like Bengaluru Says Minister Rahim Khan grg
Author
First Published Dec 9, 2023, 7:18 PM IST

ವಿಧಾನಸಭೆ(ಡಿ.09):  ಸ್ಥಳೀಯ ಸಂಸ್ಥೆಗಳಲ್ಲಿ ನಮೂನೆ-3ರ ವಿತರಣೆಯಲ್ಲಿನ ಲೋಪದೋಷಗಳನ್ನು ಸರಿಪಡಿಸಲು ಮುಂದಿನ ಎರಡು ತಿಂಗಳಲ್ಲಿ ಸಚಿವ ಸಂಪುಟ ಉಪ ಸಮಿತಿಯು ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಪೌರಾಡಳಿತ ಸಚಿವ ರಹೀಂಖಾನ್‌ ಆಶ್ವಾಸನೆ ನೀಡಿದ್ದಾರೆ.

ಶುಕ್ರವಾರ ಕಾಂಗ್ರೆಸ್‌ನ ಭೀಮಣ್ಣ ಟಿ. ನಾಯಕ್‌ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯಾದ್ಯಂತ ಗಂಭೀರ ಸ್ವರೂಪದ ಸಮಸ್ಯೆಯಾಗಿದೆ. ಅದರ ನಿವಾರಣೆಗಾಗಿ ಸಚಿವ ಸಂಪುಟ ಉಪಸಮಿತಿಯನ್ನು ರಚಿಸಲಾಗಿದೆ. ಈಗಾಗಲೇ ಎರಡು ಸಭೆಗಳಾಗಿದ್ದು, ಶೀಘ್ರದಲ್ಲಿಯೇ ಮೂರನೇ ಸಭೆ ನಡೆಯಲಿದೆ. ಅಲ್ಲಿ ಸೂಕ್ತ ತೀರ್ಮಾನ ತೆಗೆದುಕೊಂಡು ಬಿಬಿಎಂಪಿಯಲ್ಲಿ ಎ, ಬಿ. ಖಾತಾ ನೀಡುವಂತೆ ಇತರೆ ಪ್ರದೇಶದಲ್ಲಿಯೂ ಬಿ ಖಾತಾಗಳನ್ನು ನೀಡಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.

ಬೆಂಗಳೂರು ಸುತ್ತ 2500 ಎಕರೆ ಅರಣ್ಯ ಒತ್ತುವರಿ, ಇದರಿಂದಾಗಿ ಚಿರತೆ, ಆನೆ ದಾಳಿ, ಖಂಡ್ರೆ

ಈ ಹಿಂದೆ ಹಳೆಯ ಪಟ್ಟಣ ಹಾಗೂ ನಗರ ಪ್ರದೇಶಗಳಲ್ಲಿ ಯೋಜಿತ ನಕ್ಷೆಗಳಿರಲಿಲ್ಲ. ಫಾರಂ-ಸಿ ನೀಡಲು ಯೋಜಿತ ನಕ್ಷೆ, ನಿರಾಕ್ಷೇಪಣಾ ಪತ್ರ ಸೇರಿದಂತೆ ಹಲವು ಷರತ್ತುಗಳನ್ನು ವಿಧಿಸಲಾಗಿದೆ. ಅವುಗಳು ಲಭ್ಯವಿಲ್ಲದ ಕಾರಣ ಸಮಸ್ಯೆ ಹೆಚ್ಚಾಗಿದೆ. ಶೀಘ್ರದಲ್ಲೇ ಸೂಕ್ತ ತೀರ್ಮಾನ ಕೈಗೊಂಡು ಎರಡು ತಿಂಗಳಲ್ಲಿ ಸಮಸ್ಯೆಯನ್ನು ಬಗೆಹರಿಸುತ್ತೇವೆ ಎಂದರು.

ಭೀಮಣ್ಣ ಟಿ. ನಾಯಕ್‌ ಅವರು, ಶಿರಸಿ ಸಿದ್ಧಾಪುರ ಕ್ಷೇತ್ರದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಫಾರಂ ನಂ-3 ನೀಡುತ್ತಿಲ್ಲ. ಇದರಿಂದ ಪಟ್ಟಣ, ಪಂಚಾಯಿತಿ, ನಗರಸಭೆ, ಪುರಸಭೆಗಳಲ್ಲಿರುವ ತಮ್ಮ ಮನೆಗಳ ನಿರ್ಮಾಣಕ್ಕೆ ಸಾಲ ಪಡೆಯಲು ಅವಕಾಶಗಳಾಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

Follow Us:
Download App:
  • android
  • ios