ಯಾದಗಿರಿ(ಮಾ.16): ಬಿಜೆಪಿ ಮುಖಂಡ, ಮಾಜಿ ಸಚಿವ ಬಾಬೂರಾವ್ ಚಿಂಚನಸೂರ್‌ ಪ್ರಧಾನಿ ನರೇಂದ್ರ ಮೋದಿ ಕುರಿತಾಗಿ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದಾರೆ.

ಯಾದಗಿರಿ ಜಿಲ್ಲೆ ಗುರುಮಠಕಲ್‍ನಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಬಾಬೂರಾವ್ ಚಿಂಚನಸೂರ್‌, ‘ನಾನೂ ಕೂಡ ಪ್ರಧಾನಿ ನರೇಂದ್ರ ಮೋದಿ ಇದ್ದಂತೆ. ಆದರೆ ನನಗೆ ಪತ್ನಿ ಇದ್ದಾರೆ. ಅವರಿಗಿಲ್ಲ ಎಂಬುದಷ್ಟೇ ವ್ಯತ್ಯಾಸ..’ಎಂದು ಹೇಳಿದ್ದಾರೆ.

"

ಕಾಂಗ್ರೆಸ್‌ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಚಿಂಚನಸೂರ್‌, ಡಾ. ಉಮೇಶ್ ಜಾಧವ್ ಗೆದ್ದರೆ ಕೇಂದ್ರ ಸಚಿವರಾಗುತ್ತಾರೆ. ಹಾಗಾದರೆ ಇಲ್ಲಿನ ಪ್ರತಿಯೊಬ್ಬರೂ ಮಂತ್ರಿಯಾದಂತೆ. ಹೀಗಾಗಿ ನೀವೆಲ್ಲರೂ ಅವರನ್ನು ಬಹುಮತದಿಂದ ಗೆಲ್ಲಿಸಿ ಎಂದು ಮನವಿ ಮಾಡಿದ್ದಾರೆ.

ಕಾಂಗ್ರೆಸ್ ಮುಖಂಡ, ಲೋಕಸಭೆ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಒಂದು ಹಳೆಯ ಪರ್ವತದಂತೆ, ಅದೀಗ ನಿಧಾನವಾಗಿ ಕುಸಿಯಲು ಪ್ರಾರಂಭಿಸಿದೆ ಎಂದು ಚಿಂಚನಸೂರ್ ವ್ಯಂಗ್ಯವಾಡಿದ್ದಾರೆ.