ಹಿಂದುಳಿದ ವರ್ಗದ ಬಿಜೆಪಿ ಶಾಸಕರಿಂದ ವಿಧಾನಸೌಧ ಗಾಂಧಿ ಪ್ರತಿಮೆ ಎದುರು ಧರಣಿ ಎಚ್ಚರಿಕೆ!
ರಾಜ್ಯ ಸರ್ಕಾರದ ವಿರುದ್ಧ ಹಿಂದುಳಿದ ವರ್ಗದ ಬಿಜೆಪಿ ಶಾಸಕರ ಪ್ರತಿಭಟನೆ ಎಚ್ಚರಿಕೆ ನೀಡಿದ್ದಾರೆ. ಉಡುಪಿಯಲ್ಲಿ ಮಾಜಿ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸಿಎಂ ಹಾಗೂ ಸಚಿವರಿಗೆ ಎಚ್ಚರಿಕೆ ನೀಡಿದ್ದಾರೆ.
ಉಡುಪಿ (ನ.11): ರಾಜ್ಯ ಸರ್ಕಾರದ ವಿರುದ್ಧ ಹಿಂದುಳಿದ ವರ್ಗದ ಬಿಜೆಪಿ ಶಾಸಕರ ಪ್ರತಿಭಟನೆ ಎಚ್ಚರಿಕೆ ನೀಡಿದ್ದಾರೆ. ಉಡುಪಿಯಲ್ಲಿ ಮಾಜಿ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸಿಎಂ ಹಾಗೂ ಸಚಿವರಿಗೆ ಎಚ್ಚರಿಕೆ ನೀಡಿದ್ದಾರೆ.
ಉಡುಪಿಯಲ್ಲಿ ಮಾತನಾಡಿದ ಅವರು , ಮುಖ್ಯಮಂತ್ರಿಗಳೇ ಮತ್ತು ಸಚಿವ ತಂಗಡಿ ಅವರೇ ಇನ್ನು ಸಹಿಸಲು ಸಾಧ್ಯವಿಲ್ಲ. ಒಂದು ವಾರದೊಳಗೆ ಹಿಂದುಳಿದ ವರ್ಗಗಳ ಸಮುದಾಯ ಭವನಕ್ಕೆ 100 ಕೋಟಿ ರೂಪಾಯಿ ಬಿಡುಗಡೆ ಮಾಡಿದ ಹಣ ಮಂಜೂರು ಮಾಡಬೇಕು. ಇಲ್ಲವಾದ್ರೆ ಹಿಂದುಳಿದ ವರ್ಗದ ಶಾಸಕರು ಮಾಜಿ ಶಾಸಕರು ಸೇರಿ ಸರ್ಕಾರದ ವಿರುದ್ಧ ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಧರಣಿ ಮಾಡುತ್ತೇವೆ ಎಂದು ಎಚ್ಚರಿಸಿದ್ದಾರೆ.
ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಸಮರ್ಥ ಆಡಳಿತ ನಡೆಸಲು ವಿಫಲ: ಕೋಟ ಶ್ರೀನಿವಾಸ ಪೂಜಾರಿ
ಹಿಂದುಳಿದ ವರ್ಗದ ವಿದ್ಯಾರ್ಥಿಗಳು ಮತ್ತು ಜನರಿಗೆ ತೊಂದರೆಯಾಗುತ್ತಿದೆ.ಈ ಬಗ್ಗೆ ಸರ್ಕಾರ ಗಮನ ನೀಡುತ್ತಿಲ್ಲ ಎಂದು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದೆ.ರಾಜ್ಯದಲ್ಲಿ 2400 ಹಾಸ್ಟೆಲ್ ಗಳಿವೆ.1 ಲಕ್ಷ ವಿದ್ಯಾರ್ಥಿಗಳು ಹಾಸ್ಟೆಲಿಗೆ ಬೇಡಿಕೆ ಇರಿಸಿದ್ದಾರೆ.ವಿದ್ಯಾರ್ಥಿ ನಿಲಯ ಇಲ್ಲದೆ ಶಿಕ್ಷಣ ಪಡೆಯಲು ಹಿಂದುಳಿದ ಮಕ್ಕಳಿಗೆ ತೊಂದರೆ ಆಗುತ್ತದೆ ಎಂದು ಗಮನಸೆಳೆದಿದ್ದಾರೆ.
ಬಿಜೆಪಿ ಸರ್ಕಾರ ಇದ್ದಾಗ 30,000 ವಿದ್ಯಾರ್ಥಿಗಳಿಗೆ ಹಾಸ್ಟೆಲ್ ನಲ್ಲಿ ಅವಕಾಶ ಕಲ್ಪಿಸಿತ್ತು. ಆರ್ಥಿಕ ಇಲಾಖೆಯ ಅನುಮೋದನೆ ಪಡೆದು ಅವಕಾಶ ಮಾಡಿದ್ದೆವು. ಟೆಂಡರ್ ಮಾಡಿ ಹಿಂದುಳಿದ ವರ್ಗದ ಮಹಿಳೆಯರಿಗೆ 10,000 ಹೊಲಿಗೆ ಯಂತ್ರ ಹಂಚಲು ಯೋಜನೆ ರೂಪಿಸಿದ್ದೆವು. ಈ ಬಗ್ಗೆ ಫಲಾನುಭವಿಗಳ ಆಯ್ಕೆಯು ಆಗಿತ್ತು. ಆದರೆ ಹಾಲಿ ಸರ್ಕಾರ ಹಿಂದುಳಿದ ವರ್ಗವನ್ನು ಸರ್ಕಾರ ತುಂಬಾ ನಿರ್ಲಕ್ಷ್ಯ ಮಾಡುತ್ತಿದೆ.
ಆಗಸ್ಟ್ ತಿಂಗಳಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ 100 ಕೋಟಿಗೆ ಅನುಮೋದನೆ ಕೊಟ್ಟು ಹಣ ಬಿಡುಗಡೆ ಮಾಡಿತ್ತು.ಆದರೆ ಇದರ ಪ್ರಯೋಜನ ಇವತ್ತಿಗೂ ಸಿಗಲಿಲ್ಲ.ಸಮುದಾಯ ಭವನ ನಿರ್ಮಿಸಿ ಇಲಾಖೆಗೆ ವರದಿ ಕೊಟ್ಟರು ಹಣ ಬಿಡುಗಡೆ ಮಾಡಿಲ್ಲ.ಅನೇಕ ಸ್ವಾಮೀಜಿಗಳು ಮುಖಂಡರು ಈ ಬಗ್ಗೆ ಗಮನ ಸೆಳೆದಿದ್ದಾರೆ ಎಂದು ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಸಮರ್ಥ ಯುವಕ ರಾಜ್ಯಾಧ್ಯಕ್ಷ
ಬಹಳ ಸಮರ್ಥ, ಯುವಕ ರಾಜ್ಯಾಧ್ಯಕ್ಷರವನ್ನು ಹೈಕಮಾಂಡ್ ಆಯ್ಕೆ ಮಾಡಿದೆ.ಮೋದಿ- ಶಾ, ನಡ್ದಾ ,ಬಿಎಲ್ ಸಂತೋಷ್ ಈ ಆಯ್ಕೆ ಮಾಡಿದ್ದಾರೆ ಎಂದು ಕೋಟ ಹೇಳಿದರು.
ಬಿಜೆಪಿಯ ಉಪಾಧ್ಯಕ್ಷನಾಗಿ ಕೆಲಸ ಮಾಡಿದವನಿಗೆ ರಾಜ್ಯಾಧ್ಯಕ್ಷ ಪಟ್ಟ ಒಲಿದಿದೆ.
ಬಿಜೆಪಿಯ ಇಡೀ ತಂಡ ವಿಜಯೇಂದ್ರ ಜೊತೆ ಒಟ್ಟಾಗಿ ನಿಲ್ಲುತ್ತದೆ.ಮುಂದಿನ ಚುನಾವಣೆಯಲ್ಲಿ ಅದರ ಫಲಿತಾಂಶ ಹೊರಬೀಳಲಿದೆ. ಬಿಜೆಪಿಗೆ ಪ್ರತಿಯೊಬ್ಬ ಕಾರ್ಯಕರ್ತ ಪಕ್ಷದ ಮುಖಂಡ ಅನಿವಾರ್ಯ. ಯಡಿಯೂರಪ್ಪನ ಮಗ ಕೂಡ ಬಿಜೆಪಿಯ ಒಬ್ಬ ಕಾರ್ಯಕರ್ತ.ಯಡಿಯೂರಪ್ಪ ಒಬ್ಬ ಪುತ್ರ ಎಂಪಿ ಆಗಿದ್ದಾರೆ, ಈಗ ಒಬ್ಬ ರಾಜ್ಯಾಧ್ಯಕ್ಷರಾಗಿದ್ದಾರೆ. ಸಾಮರ್ಥ್ಯಕ್ಕೆ ಅನುಗುಣವಾಗಿ ಜವಾಬ್ದಾರಿಯನ್ನು ಕೊಡಲಾಗಿದೆ ಎಂದರು.
ಎಲ್ಲಾ ಸಮಾಜವನ್ನು ಒಟ್ಟುಗೂಡಿಸಿಕೊಂಡು ಒಂದು ರಾಜಕೀಯ ಪಕ್ಷವನ್ನು ಕಟ್ಟಲಾಗುತ್ತದೆ. ಸರ್ವವ್ಯಾಪಿ ಸರ್ವಸ್ಪರ್ಶಿ ಸಮುದಾಯ ಗಮನಲ್ಲಿಟ್ಟು ವಿಪಕ್ಷ ನಾಯಕನ ಆಯ್ಕೆಯಾಗಲಿದೆ.ಶ್ರೀ ರಾಮುಲು, ಸಿ ಟಿ ರವಿ ಬೇಸರದಲ್ಲಿ ಇಲ್ಲ.ಎಲ್ಲರೂ ಜೊತೆಯಾಗಿ ಪಕ್ಷ ಸಂಘಟನೆಯ ಕೆಲಸವನ್ನು ಮಾಡುತ್ತಾರೆ ಎಂದರು.
ಕೇಂದ್ರದ ಕಡೆ ಕೈ ತೋರುವ ಬದಲು ತಮ್ಮ ಕೆಲಸ ಮಾಡಲಿ: ಸಿಎಂಗೆ ಎಚ್‌ಡಿಕೆ ತಿರುಗೇಟು
ವಿಧಾನಸಭೆ ಮತ್ತು ವಿಧಾನ ಪರಿಷತ್ ವಿಪಕ್ಷ ನಾಯಕನ ಆಯ್ಕೆ ಆಡುತ್ತದೆ.ಪಕ್ಷ ಕಳೆದ ಬಾರಿ ನನಗೆ ವಿಪಕ್ಷ ನಾಯಕರ ಸ್ಥಾನದ ಅವಕಾಶ ಕೊಟ್ಟಿತ್ತು.
ಈ ಬಾರಿ ಪಕ್ಷ ಯಾವ ನಿರ್ಧಾರ ತೆಗೆದುಕೊಳ್ಳುತ್ತದೆ ಗೊತ್ತಿಲ್ಲ .ಅವಕಾಶಕೊಟ್ಟರೆ ನಿಭಾಯಿಸುತ್ತೇನೆ ಎಂದು ಹೇಳಿದ್ದೇನೆಪಕ್ಷದ ವಿಪಕ್ಷ ನಾಯಕನಾಗುವ ಅವಕಾಶ ಕೊಟ್ಟರೆ ನಾನು ಸ್ವೀಕಾರ ಮಾಡಿ ನಿಭಾಯಿಸುತ್ತೇನೆ.34 ಜನ ಮೇಲ್ಮನೆ ಸದಸ್ಯರಿದ್ದಾರೆ, ಯಾರನ್ನ ಮಾಡಬೇಕು ಎಂದು ಪಕ್ಷ ನಿರ್ಧರಿಸುತ್ತದೆ.ಹುದ್ದೆಗಳಿಗೆ ನಿರಾಸಕ್ತಿ ಇರುವವರು ಇರೋದಿಲ್ಲ ಎಲ್ಲರಿಗೂ ಆಸಕ್ತಿ ಇರುತ್ತದೆ ಅಂತಲೂ ಹೇಳಿದರು.