ಬಾಗಲಕೋಟೆ ಜಿಲ್ಲೆಯ ಜಮಖಂಡಿಯ ರಾಮತೀರ್ಥ ದೇವಸ್ಥಾನದ ಬಳಿ ಮೂವರು ವ್ಯಕ್ತಿಗಳು ಕರಪತ್ರಗಳನ್ನು ಹಂಚುವ ಮೂಲಕ ಮುಸ್ಲಿಂ ಧರ್ಮಕ್ಕೆ ಮತಾಂತರಕ್ಕೆ ಪ್ರಚೋದಿಸಿದ ಘಟನೆ ನಡೆದಿದೆ. ವಿವಿಧ ಆಮಿಷಗಳನ್ನು ತೋರಿಸಿ ಮತಾಂತರಕ್ಕೆ ಯತ್ನಿಸಿದ ಆರೋಪದ ಮೇಲೆ ಮುಸ್ತಾಫ, ಸುಲೇಮಾನ್, ಮತ್ತು ಅಲಿಸಾಬ್ ಎಂಬವರ ವಿರುದ್ಧ ಜಮಖಂಡಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಾಗಲಕೋಟೆ (ಏ.11): ಬಾಗಲಕೋಟೆ ಜಿಲ್ಲೆಯ ಜಮಖಂಡಿಯ ರಾಮತೀರ್ಥ ದೇವಸ್ಥಾನದ ಬಳಿ ಮೂವರು ವ್ಯಕ್ತಿಗಳು ಕರಪತ್ರಗಳನ್ನು ಹಂಚುವ ಮೂಲಕ ಮುಸ್ಲಿಂ ಧರ್ಮಕ್ಕೆ ಮತಾಂತರಕ್ಕೆ ಪ್ರಚೋದಿಸಿದ ಘಟನೆ ನಡೆದಿದೆ. ವಿವಿಧ ಆಮಿಷಗಳನ್ನು ತೋರಿಸಿ ಮತಾಂತರಕ್ಕೆ ಯತ್ನಿಸಿದ ಆರೋಪದ ಮೇಲೆ ಮುಸ್ತಾಫ, ಸುಲೇಮಾನ್, ಮತ್ತು ಅಲಿಸಾಬ್ ಎಂಬವರ ವಿರುದ್ಧ ಜಮಖಂಡಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸ್ಥಳೀಯ ಹಿಂದೂ ಸಮುದಾಯದ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಪೊಲೀಸರ ಗಮನಕ್ಕೆ ಬಂದ ಕೂಡಲೇ ಪ್ರಕರಣ ದಾಖಲಿಸಿದ ಪೊಲೀಸರು ಮೂವರಿಗೆ ನೋಟಿಸ್ ಜಾರಿ ಮಾಡಿದ್ದಾರೆ. ತನಿಖೆ ಚುರುಕುಗೊಂಡಿದ್ದು, ಮುಂದಿನ ಕಾನೂನು ಕ್ರಮಕ್ಕಾಗಿ ಪೊಲೀಸರು ಕಾರ್ಯಪ್ರವೃತ್ತರಾಗಿದ್ದಾರೆ.
ಇದನ್ನೂ ಓದಿ: ಧರ್ಮ ಬದಲಿಸಿಕೊಂಡು ಪಿಯುಸಿ ವಿದ್ಯಾರ್ಥಿಯ ಮದುವೆಯಾದ ಮೂರು ಮಕ್ಕಳ ತಾಯಿ
ಅನ್ನಭಾಗ್ಯ ಅಕ್ಕಿ ಸಾಗಿಸುತ್ತಿದ್ದ ಲಾರಿ ಪಲ್ಟಿ
ಕೊಪ್ಪಳ (ಏ.11): ಕೊಪ್ಪಳ ತಾಲೂಕಿನ ಚಿಕ್ಕಸಿಂಧೋಗಿ ಬಳಿ ಎರಡು ಪ್ರತ್ಯೇಕ ರಸ್ತೆ ಅಪಘಾತಗಳು ಸಂಭವಿಸಿವೆ. ಮೊದಲ ಘಟನೆಯಲ್ಲಿ, ದಾವಣಗೆರೆಯಿಂದ ಸಿಂಧನೂರ ಕಡೆಗೆ ಅನ್ನಭಾಗ್ಯ ಯೋಜನೆಯ ಅಕ್ಕಿ ಸಾಗಿಸುತ್ತಿದ್ದ ಲಾರಿಯೊಂದು ಮಳೆಯಿಂದಾಗಿ ರಸ್ತೆಯಲ್ಲಿ ಪಲ್ಟಿಯಾಗಿದೆ. ಈ ದುರ್ಘಟನೆಯಲ್ಲಿ ಯಾವುದೇ ಪ್ರಾಣಹಾನಿ ವರದಿಯಾಗಿಲ್ಲ, ಆದರೆ ಲಾರಿಯಲ್ಲಿದ್ದ ಅಕ್ಕಿ ಚೆಲ್ಲಾಪಿಲ್ಲಿಯಾಗಿದೆ.
ಇದೇ ವೇಳೆ ಚಿಕ್ಕಸಿಂಧೋಗಿ ಬಳಿಯೇ ಮತ್ತೊಂದು ಘಟನೆಯಲ್ಲಿ ಎರಡು ಆಟೋಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ.
ಇದನ್ನೂ ಓದಿ: ನಾಲ್ಕು ಕಾರುಗಳ ಮಧ್ಯೆ ನಡೆದ ಸರಣಿ ಅಪಘಾತ
ಕೊಪ್ಪಳದಿಂದ ಸಿಂಧೋಗಿಗೆ ಬಳ್ಳೊಳ್ಳಿ ತುಂಬಿಕೊಂಡು ಹೊರಟಿದ್ದ ಆಟೋ, ಎದುರಿಗೆ ಬಂದ ಪ್ಯಾಸೆಂಜರ್ ಆಟೋಗೆ ಡಿಕ್ಕಿಯಾಗಿದೆ. ಈ ಅಪಘಾತದಲ್ಲಿ ಆಟೋ ಚಾಲಕರಿಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಎರಡೂ ಘಟನೆಗಳು ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಸ್ತೆ ಸಂಚಾರವನ್ನು ಸರಿಪಡಿಸಲು ಕ್ರಮ ಕೈಗೊಳ್ಳಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಪೊಲೀಸ್ ಇಲಾಖೆಯಿಂದ ಅಧಿಕೃತ ವರದಿಗಾಗಿ ಕಾಯಬೇಕಾಗಿದೆ.
