Asianet Suvarna News Asianet Suvarna News

23 ತಳಿಗಳ ನಾಯಿ ಸಾಕಣೆ ನಿಷೇಧ ಹೈಕೋರ್ಟ್‌ನಲ್ಲಿ ರದ್ದು

ತಜ್ಞರು ಸೇರಿದಂತೆ ಸಂಬಂಧಪಟ್ಟವರೊಂದಿಗೆ ಸಮಾಲೋಚನೆ ನಡೆಸಿ, ಕೇಂದ್ರ ಸರ್ಕಾರ ಹೊಸ ಸುತ್ತೋಲೆ ಹೊರಡಿಸಬಹುದಾಗಿದೆ. ಶ್ವಾನ ತಳಿ ಪ್ರಮಾಣೀಕರಿಸುವ ಸಂಸ್ಥೆಗಳು ಮತ್ತು ಪ್ರಾಣಿ ದಯಾ ಸಂಘಟನೆಯ ಸಂಘಟನೆಗಳನ್ನು ಸರ್ಕಾರ ಕಡ್ಡಾಯವಾಗಿ ಆಲಿಸಬೇಕು ಎಂದು ಆದೇಶದಲ್ಲಿ ಸೂಚಿಸಿದ ನ್ಯಾಯಪೀಠ 

Ban on 23 Breed of Dogs Canceled in High Court of Karnataka grg
Author
First Published Apr 11, 2024, 10:30 AM IST

ಬೆಂಗಳೂರು(ಏ.11):  ಮನುಷ್ಯನ ಜೀವಕ್ಕೆ ಅಪಾಯಕಾರಿ ಮಾಗೂ ಮಾರಕವಾಗಬಹುದಾದ 23 ಶ್ವಾನ ತಳಿಗಳ ಸಾಕುವಿಕೆಯನ್ನು ನಿಷೇಧಿಸಿ ಕೇಂದ್ರ ಸರ್ಕಾರ ಇತ್ತೀಚೆಗೆ ಹೊರಡಿಸಿದ್ದ ಸುತ್ತೋಲೆಯನ್ನು ಹೈಕೋರ್ಟ್ ರದ್ದುಪಡಿಸಿದೆ.
ಕೇಂದ್ರ ಸರ್ಕಾರದ ಸುತ್ತೋಲೆ ಪ್ರಶ್ನಿಸಿ ಶ್ವಾನ ತರಬೇತುದಾರ ಕಿಂಗ್ ಸಾಲ್ಮನ್ ಡೇವಿಡ್ ಸಲ್ಲಿಸಿದ್ದ ಅರ್ಜಿ ಪುರಸ್ಕರಿಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ ಬುಧವಾರ ಈ ಆದೇಶ ಮಾಡಿದೆ.

ತಜ್ಞರು ಸೇರಿದಂತೆ ಸಂಬಂಧಪಟ್ಟವರೊಂದಿಗೆ ಸಮಾಲೋಚನೆ ನಡೆಸಿ, ಕೇಂದ್ರ ಸರ್ಕಾರ ಹೊಸ ಸುತ್ತೋಲೆ ಹೊರಡಿಸಬಹುದಾಗಿದೆ. ಶ್ವಾನ ತಳಿ ಪ್ರಮಾಣೀಕರಿಸುವ ಸಂಸ್ಥೆಗಳು ಮತ್ತು ಪ್ರಾಣಿ ದಯಾ ಸಂಘಟನೆಯ ಸಂಘಟನೆಗಳನ್ನು ಸರ್ಕಾರ ಕಡ್ಡಾಯವಾಗಿ ಆಲಿಸಬೇಕು ಎಂದು ನ್ಯಾಯಪೀಠ ಆದೇಶದಲ್ಲಿ ಸೂಚಿಸಿದೆ.

ಬೆಂಗಳೂರು: ಜಡ್ಜ್ ಎದುರೇ ಕತ್ತು ಕೊಯ್ದುಕೊಂಡ ವ್ಯಕ್ತಿ, ಹೈಕೋರ್ಟ್‌ಲ್ಲಿ ಆತ್ಮಹತ್ಯೆ ಯತ್ನ

ಅಮೆರಿಕನ್ ಸ್ಟಾಫೋರ್ಡ್ಶೈರ್ ಟೆರಿಯರ್, ಫಿಲಾ ಬ್ರಸಿಲೈರೊ, ಡೊಗೊ ಅರ್ಜೆಂಟಿನೊ, ಅಮೆರಿಕನ್ ಬುಲ್ಡಾಗ್, ಪಿಟ್ಬುಲ್ ಟೆರಿಯರ್ ಮತ್ತು ಟೋಸ ಇನು ಸೇರಿದಂತೆ ಮನುಷ್ಯರ ಜೀವಕ್ಕೆ ಅಪಾಯಕಾರಿ ಹಾಗೂ ಮಾರಕವಾಗಬಹುದಾದ 23 ಶ್ವಾನ ತಳಿಯ ಸಾಕುವಿಕೆಯನ್ನು ನಿಷೇಧಿಸುವಂತೆ ರಾಜ್ಯ ಸರ್ಕಾರ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚಿಸಿ ಕೇಂದ್ರ ಸರ್ಕಾರವು 2024ರ ಮಾ.12ರಂದು ಸುತ್ತೋಲೆ ಹೊರಡಿಸಿತ್ತು.

Follow Us:
Download App:
  • android
  • ios