Aero India 2025 2025 ರ ಬೆಂಗಳೂರು ಏರೋ ಶೋನಲ್ಲಿ ಆಹಾರದಲ್ಲಿ ಜಿರಳೆಗಳು ಪತ್ತೆಯಾಗಿವೆ. ಈ ಘಟನೆಯ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಕಳಪೆ ಆಹಾರ ಪೂರೈಕೆ ಬಗ್ಗೆ ಆಕ್ರೋಶ ವ್ಯಕ್ತವಾಗಿದೆ.

ಬೆಂಗಳೂರಿನಲ್ಲಿ ನಡೆದ 2025 ರ ಏರೋ ಶೋನ ಮೊದಲ ದಿನದಂದು ಆಹಾರದಲ್ಲಿ ಜಿರಳೆಗಳು ಪತ್ತೆಯಾಗಿರುವುದು ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಆಹಾರದಲ್ಲಿ ಜಿರಳೆಗಳು ಪತ್ತೆಯಾಗಿರುವ ಘಟನೆಯ ಚಿತ್ರಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಕಲುಷಿತ, ಕಳಪೆ ಆಹಾರ ಪೂರೈಕೆ ಮಾಡಿದ್ದಕ್ಕೆ ಅಧಿಕಾರಿಗಳ ವಿರುದ್ಧ ನೆಟ್ಟಿಗರು ಆಕ್ರೋಶ ಹೊರಹಾಕಿದ್ದಾರೆ.

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಾಳೆ(ಫೆ.10) ರಿಂದ ಏರೋ ಇಂಡಿಯಾ ಏರ್​ ಶೋ ನಡೆಯಲಿರುವ ಹಿನ್ನೆಲೆ ಕರ್ನಾಟಕ ಪ್ರವಾಸದಲ್ಲಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ನಾಳೆ ಳಗ್ಗೆ 9 ಗಂಟೆಗೆ ಏರ್​ ಶೋ ಉದ್ಘಾಟಿಸಲಿದ್ದಾರೆ. ಈಗಾಗಲೇ ಬೆಂಗಳೂರಿಗೆ ಆಗಮಿಸಿರುವ ರಕ್ಷಣಾ ಸಚಿವರು. ಇತ್ತ ನಾಳೆ ನಡೆಯಲಿರುವ ಕಾರ್ಯಕ್ರಮಕ್ಕೆ ಎಲ್ಲ ಸಿದ್ಧ ತೆ ಮಾಡಿಕೊಳ್ಳಲಾಗಿದೆ. ಬಿಗಿ ಭದ್ರತೆಗೆ ಪೊಲೀಸ ಭದ್ರತಾ ಪಡೆಗಳನ್ನ ನಿಯೋಜಿಸಲಾಗಿದೆ.

ಇದನ್ನೂ ಓದಿ: ಈ ಬಾರಿಯ ಏರ್ ಶೋದಲ್ಲಿ ತೇಜಸ್ ಟಾಪರ್? #Aeroindia2025 #DKSunil #BengaluruBuzz

ಕರ್ತವ್ಯದಲ್ಲಿರುವ ಪೊಲೀಸ್ ಸಿಬ್ಬಂದಿಗೆ ಊಟದ ವ್ಯವಸ್ಥೆ ಮಾಡಲಾಗಿದೆ. ಊಟದ ವೇಳೆ ಆಹಾರದಲ್ಲಿ ಜಿರಳೆ ಇರುವುದು ಪತ್ತೆಯಾದ ಬಳಿಕ ಕಾರ್ಯಕ್ರಮದ ವ್ಯವಸ್ಥೆ ಬಗ್ಗೆ ಪೊಲೀಸರು ತೀವ್ರವಾಗಿ ಟೀಕಿಸಿದ್ದಾರೆ. ಉನ್ನತ ಮಟ್ಟದಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಇಂಥ ಕಳಪೆ ಆಹಾರ ಪೂರೈಕೆಯಾಗುತ್ತಿರುವುದು, ಆಹಾರ ಸುರಕ್ಷತೆ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.