ಮಹಾಮಾರಿ ಕೊರೋನಾ ಸೇವೆಗೆ ವಿವಿ ವಿದ್ಯಾರ್ಥಿಗಳು..!
ವಿದ್ಯಾರ್ಥಿಗಳು ಅಥವಾ ಸಿಬ್ಬಂದಿ ಸ್ವ ಇಚ್ಛೆಯಿಂದ ಈ ಕಾರ್ಯದಲ್ಲಿ ತೊಡಗಿಸಿಕೊಳ್ಳಬಹುದು| ಅಂತಹ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ತಮ್ಮ ವಿವರವನ್ನು ಸಂಬಂಧಪಟ್ಟ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಬೇಕು| ಕುಲಸಚಿವರು ಇಚ್ಛೆಯಿರುವ ವಿದ್ಯಾರ್ಥಿ ಅಥವಾ ಸಿಬ್ಬಂದಿ ಎರಡು ದಿನದೊಳಗೆ ತಮ್ಮ ಮಾಹಿತಿಯನ್ನು ಆನ್‌ಲೈನ್ ಮೂಲಕ ಸಲ್ಲಿಸಲು ತಿಳಿಸಿದ್ದಾರೆ|
ಬೆಂಗಳೂರು(ಜು.20): ಕೊರೋನಾ ರ‍್ಯಾಪಿಡ್ ಆ್ಯಂಟಿಜೆನ್ ಪರೀಕ್ಷೆ ನಡೆಸುವ ಕಾರ್ಯದಲ್ಲಿ ಪಾಲ್ಗೊಳ್ಳಲು ಇಚ್ಛೆ ಇರುವ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಎರಡು ದಿನದೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವಂತೆ ಬೆಂಗಳೂರು ವಿಶ್ವವಿದ್ಯಾಲಯ ಕುಲಸಚಿವರಾದ ಕೆ.ಜ್ಯೋತಿ ತಿಳಿಸಿದ್ದಾರೆ.
ವಿಶ್ವವಿದ್ಯಾಲಯದ ಸಿಬ್ಬಂದಿ ಅಥವಾ ಸ್ನಾತಕೋತ್ತರ ವಿಜ್ಞಾನ ವಿಭಾಗ ಅಥವಾ ವಿಷಯದ ವಿದ್ಯಾರ್ಥಿಗಳನ್ನು ರಾರಯಪಿಡ್ ಆ್ಯಂಟಿಜೆನ್ ಪರೀಕ್ಷೆ ನಡೆಸಲು ಅವಶ್ಯಕವಾಗಿ ಬಳಸಿಕೊಳ್ಳುವ ಸಂಬಂಧ ವಿಶ್ವವಿದ್ಯಾಲಯದ ಕುಲಪತಿಗಳಿಗೆ ಉನ್ನತ ಶಿಕ್ಷಣ ಇಲಾಖೆ ಪತ್ರ ಬರೆದಿದೆ.
ಬೆಂಗಳೂರು: ನಾಲ್ಕೂವರೆ ತಿಂಗಳಲ್ಲಿ ಬರೋಬ್ಬರಿ 7232 ಜನರ ಸಾವು, ಕಾರಣ?
ವಿದ್ಯಾರ್ಥಿಗಳು ಅಥವಾ ಸಿಬ್ಬಂದಿ ಸ್ವ ಇಚ್ಛೆಯಿಂದ ಈ ಕಾರ್ಯದಲ್ಲಿ ತೊಡಗಿಸಿಕೊಳ್ಳಬಹುದು. ಅಂತಹ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ತಮ್ಮ ವಿವರವನ್ನು ಸಂಬಂಧಪಟ್ಟ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಬೇಕು. ಕುಲಸಚಿವರು ಇಚ್ಛೆಯಿರುವ ವಿದ್ಯಾರ್ಥಿ ಅಥವಾ ಸಿಬ್ಬಂದಿ ಎರಡು ದಿನದೊಳಗೆ ತಮ್ಮ ಮಾಹಿತಿಯನ್ನು ಆನ್‌ಲೈನ್ ಮೂಲಕ ಸಲ್ಲಿಸಲು ತಿಳಿಸಿದ್ದಾರೆ. ಕೊರೋನಾ ಸೋಂಕು ವ್ಯಾಪಕವಾಗಿ ಹಬ್ಬುತ್ತಿದ್ದು, ರಾರಯಪಿಡ್ ಆ್ಯಂಟಿಜೆನ್ ಪರೀಕ್ಷೆ ಆರಂಭಿಸಲಾಗಿದೆ. ಇದಕ್ಕೆ ಹೆಚ್ಚುವರಿ ಸ್ವಯಂಸೇವಕರ ಅಗತ್ಯವಿದೆ.