ನಗರದ ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಕಚೇರಿ ಮುಂಭಾಗದಲ್ಲಿ ಅನಧಿಕೃತವಾಗಿ ಬ್ಯಾನರ್‌ ಅಳವಡಿಸಿದ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷರಿಗೆ ಬಿಬಿಎಂಪಿಯು .50 ಸಾವಿರ ದಂಡ ವಿಧಿಸಿದೆ.

ಬೆಂಗಳೂರು (ಆ.22) :  ನಗರದ ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಕಚೇರಿ ಮುಂಭಾಗದಲ್ಲಿ ಅನಧಿಕೃತವಾಗಿ ಬ್ಯಾನರ್‌ ಅಳವಡಿಸಿದ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷರಿಗೆ ಬಿಬಿಎಂಪಿಯು .50 ಸಾವಿರ ದಂಡ ವಿಧಿಸಿದೆ.

ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ನಗರದಲ್ಲಿ ಅನಧಿಕೃತ ಬ್ಯಾನರ್‌, ಫ್ಲೆಕ್ಸ್‌ ತೆರವು ಕಾರ್ಯಾಚರಣೆಯನ್ನು ಬಿಬಿಎಂಪಿ ಆರಂಭಿಸಿದೆ. ವಸಂತನಗರ ವಾರ್ಡ್‌ ವ್ಯಾಪ್ತಿಯ ಮಿಲ್ಲರ್‌ ಟ್ಯಾಂಕ್‌ ಬೆಡ್‌ ಏರಿಯಾದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ(KPCC office)ಯ ಹಿಂದುಳಿದ ವರ್ಗಗಳ ವಿಭಾಗ, ರಾಜ್ಯಾಧ್ಯಕ್ಷರು, ಜಿಲ್ಲಾಧ್ಯಕ್ಷರು, ಹಾಗೂ ರಾಜ್ಯದ ಎಲ್ಲಾ ಪದಾಧಿಕಾರಿಗಳು ಮಾಜಿ ಪ್ರಧಾನಿ ದಿವಂಗತ ರಾಜೀವ್‌ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ದಿವಂಗತ ಡಿ.ದೇವರಾಜ ಅರಸು ಅವರ ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್‌ ಕಚೇರಿಯ ಮುಂಭಾಗದಲ್ಲಿ ಬ್ಯಾನರ್‌ ಅಳವಡಿಸಿದ್ದರು.

ಬ್ಯಾನರ್‌ ಅಳವಡಿಗೆಗೆ ಬಿಬಿಎಂಪಿಯಿಂದ ಪರವಾನಗಿ ಪಡೆದಿರಲಿಲ್ಲ. ಹೀಗಾಗಿ, ಬಿಬಿಎಂಪಿಯ ವಸಂತ ನಗರ ವಾರ್ಡ್‌ನ ಸಹಾಯಕ ಕಂದಾಯ ಅಧಿಕಾರಿ ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ (ಕೆಪಿಸಿಸಿ) ಅಧ್ಯಕ್ಷರಿಗೆ .50 ಸಾವಿರ ದಂಡ ವಿಧಿಸಿ, ಮುಖ್ಯ ಆಯುಕ್ತರ ಖಾತೆಗೆ ದಂಡ ಮೊತ್ತವನ್ನು ಪಾವತಿಸುವಂತೆ ಸೂಚಿಸಿದ್ದಾರೆ.

Ghar wapsi: ಕಾಂಗ್ರೆಸ್‌ಗೆ ನೂರಾರು ಬಿಜೆಪಿ ಮುಖಂಡರು ಕಾರ‍್ಯಕರ್ತರ ಸೇರ್ಪಡೆ, ಎಸ್‌ಟಿಎಸ್, ಹೆಬ್ಬಾರ್ ಸೇರುವುದು ನಿಚ್ಚಳ!