Asianet Suvarna News Asianet Suvarna News

ಜಾತಿಗಣತಿ ಮೂಲ ವರದಿ ನಾಪತ್ತೆ: ತನಿಖೆಗೆ ಯತ್ನಾಳ್‌ ಆಗ್ರಹ

2015ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಇದ್ದು, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸಲಾಯಿತು.180 ಕೋಟಿ ರು. ವೆಚ್ಚದಲ್ಲಿ ಸಮೀಕ್ಷೆ ವರದಿ ಸಿದ್ದಪಡಿಸಲಾಗಿದೆ. ಆ ವರದಿ ಕಳೆದು ಹೋಗಿರುವುದು ಪೂರ್ವ ನಿಯೋಜಿತ ಷಡ್ಯಂತ್ರ ಎಂಬುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ 

Basanagouda Patil Yatnal Demands an Investigation about Caste Census Original Report Missing grg
Author
First Published Nov 23, 2023, 11:00 AM IST

ಬೆಂಗಳೂರು(ನ.23):  ರಾಜ್ಯ ಸರ್ಕಾರ 180 ಕೋಟಿ ರು. ವೆಚ್ಚ ಮಾಡಿ ನಡೆಸಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿಯ ಮೂಲಪ್ರತಿ ಕಾಣೆಯಾಗಲು ಕಾರಣರಾದ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಆಗ್ರಹಿಸಿದ್ದಾರೆ.

ಈ ಸಂಬಂಧ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್‌ ಹೆಗ್ಡೆ ಅವರಿಗೆ ಪತ್ರ ಬರೆದಿರುವ ಅವರು, ಹಿಂದುಳಿದ ವರ್ಗಗಳ ಆಯೋಗ ಹಿಂದಿನ ಅಧ್ಯಕ್ಷರ ಆಪ್ತ ಕಾರ್ಯದರ್ಶಿಯವರಿಗೆ ನೋಟಿಸ್ ನೀಡಿ ನಂತರ ರಾಜಕೀಯ ಒತ್ತಡಕ್ಕೆ ಮಣಿದು ತನಿಖೆಯನ್ನೇ ಅರ್ಧಕ್ಕೆ ಕೈಬಿಟ್ಟಿರುವುದು ಆಶ್ಚರ್ಯದ ಸಂಗತಿ. ಈ ಕೂಡಲೇ ವರದಿ ನೈಜತೆಯ ಬಗ್ಗೆ ತನಿಖೆ ಮಾಡಬೇಕು ಹಾಗು ನಿರ್ಲಕ್ಷ್ಯಕ್ಕೆ ಕಾರಣರಾದ ಅಧಿಕಾರಿ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಪತ್ರದಲ್ಲಿ ಆಗ್ರಹಿಸಿದ್ದಾರೆ.

ಬಿಜೆಪಿ ಒಂದು ಕುಟುಂಬದ ಪಕ್ಷ ಆಗಬಾರದು: ಶಾಸಕ ಬಸನಗೌಡ ಯತ್ನಾಳ್

2015ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಇದ್ದು, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸಲಾಯಿತು.180 ಕೋಟಿ ರು. ವೆಚ್ಚದಲ್ಲಿ ಸಮೀಕ್ಷೆ ವರದಿ ಸಿದ್ದಪಡಿಸಲಾಗಿದೆ. ಆ ವರದಿ ಕಳೆದು ಹೋಗಿರುವುದು ಪೂರ್ವ ನಿಯೋಜಿತ ಷಡ್ಯಂತ್ರ ಎಂಬುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಮೂಲ ಪ್ರತಿ ಕಳೆದುಹೋಗಿದ್ದರೂ ಅಧಿಕಾರಿಗಳು ಯಾವುದೇ ಪೊಲೀಸ್‌ ಠಾಣೆಗೆ ದೂರು ದಾಖಲಿಸದಿರುವುದು ಆಶ್ಚರ್ಯದ ಸಂಗತಿ. ಇಂತಹ ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದ್ದಾರೆ.

Follow Us:
Download App:
  • android
  • ios