Asianet Suvarna News Asianet Suvarna News

ಐಸಿಸಿ ಲಿಂಕ್ ಆರೋಪದ ಬೆನ್ನಲ್ಲೇ ಮುಸ್ಲಿಂ ಗುರು ಪೀರಾಗೆ ಸಿಎಂ ಸಿದ್ದರಾಮಯ್ಯ ಕ್ಲೀನ್ ಚಿಟ್!

ಸಿಎಂ ಸಿದ್ದರಾಮಯ್ಯ ಜೊತೆ ವೇದಿಕೆಯಲ್ಲಿ ಕಾಣಿಸಿಕೊಂಡ ಮುಸ್ಲಿಂ ದರ್ಗಾ ಮೌಲ್ವಿ ತನ್ವೀರ್ ಪೀರಾಗೆ ಐಸಿಸ್ ಲಿಂಕ್ ಇದೆ ಅನ್ನೋ ಬಸನಗೌಡ ಪಾಟೀಲ್ ಯತ್ನಾಳ್ ಮಾಡಿರುವ ಆರೋಪ ಬಾರಿ ಸಂಚಲನ ಸೃಷ್ಟಿಸಿದೆ. ಇದೀಗ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.
 

basangouda patil yatnal biggest liar CM Siddaramaih hits back BJP over molvi Tanveer peera ISIS link allegation ckm
Author
First Published Dec 7, 2023, 11:22 AM IST

ಬೆಳಗಾವಿ(ಡಿ.07) ಸಿಎಂ ಸಿದ್ದರಾಮಯ್ಯ ಮುಸ್ಲಿಂ ಧರ್ಮಗುರುಗಳ ಕಾರ್ಯಕ್ರಮ ಇದೀಗ ರಾಜ್ಯ ರಾಜಕಾರಣದಲ್ಲಿ ಭಾರಿ ಕೋಲಾಹಲ ಎಬ್ಬಿಸಿದೆ. ಒಂದೆಡೆ ಸಿಎಂ ಸಿದ್ದರಾಮಯ್ಯ ಅನುದಾನ ವಿಚಾರ ಚರ್ಚೆಗೆ ಗ್ರಾಸವಾಗುತ್ತಿದ್ದಂತೆ ಬಿಜೆಪಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಸಿಡಿಸಿದ ಬಾಂಬ್ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಜೊತೆ ವೇದಿಕೆ ಹಂಚಿಕೊಂಡ ಮುಸ್ಲಿಂ ಮೌಲ್ವಿ ತನ್ವೀರ್ ಪೀರ್‌ಗೆ ಐಸಿಸಿ ನಂಟಿದೆ ಅನ್ನೋ ಆರೋಪವನ್ನು ಯತ್ನಾಳ್ ಮಾಡಿದ್ದರು. ಇದು ಭಾರಿ ಸಂಚಲನ ಸೃಷ್ಟಿಸಿದೆ. ವಿವಾದ ಜೋರಾಗುತ್ತಿದ್ದಂತೆ ಇಂದು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಈ ವೇಳೆ ಮುಸ್ಲಿಂ ಮೌಲ್ವಿ ತನ್ವೀರ್ ಪೀರಾಗೆ ಕ್ಲೀನ್ ಚಿಟ್ ನೀಡಿದ್ದಾರೆ. ಮುಸ್ಲಿಂ ಗುರು ಪೀರಾ ಜೊತೆ ನನಗೆ ಹಲವು ವರ್ಷದ ನಂಟಿದೆ. ಬಸನಗೌಡ ಪಾಟೀಲ್ ಯತ್ನಾಳ್ ಮಹಾ ಸುಳ್ಳುಗಾರ. ಅವರ ಮಾತಿನಲ್ಲಿ ಯಾವುದೇ ಹುರುಳಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಡಿ. 4ರಂದು ಹುಬ್ಬಳ್ಳಿ ತಾಲೂಕಿನ ಪಾಳೆ ಗ್ರಾಮದ ಹಜರತ್ ಸೈಯ್ಯದ ಮೊಹಮ್ಮದ ಬಾದಶಾ ಪೀರಾ (ಭಾಷಾಪೀರಾ) ದರ್ಗಾ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ದಕ್ಷಿಣ ಭಾರತ ಮುಸ್ಲಿಂ ಧರ್ಮಗುರುಗಳ ಸಮ್ಮೇಳನದಲ್ಲಿ ಮುಖ್ಯಮಂತ್ರಿಗಳ ಜೊತೆ ಐಸಿಸ್‌ ಸಂಘಟನೆಯೊಂದಿಗೆ ನಂಟು ಇದ್ದವರು ಭಾಗಿಯಾಗಿದ್ದರು ಎಂದು ಯತ್ನಾಳ ಆರೋಪ ಮಾಡಿದ್ದರು.

 

ಸಾರೇ ಜಹಾಸೇ ಅಚ್ಚಾ... ದೇಶಭಕ್ತಿ ಗೀತೆ ಮೂಲಕ ಯತ್ನಾಳ್‌ಗೆ ಟಾಂಗ್ ಕೊಟ್ಟ ಮೌಲ್ವಿ ತನ್ವೀರ್ ಹಾಶ್ಮಿ! ವೈರಲ್ ವಿಡಿಯೋ

ಆರಂಭದಲ್ಲೇ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡುವ ವೇಳೆ ಈ ಹೇಳಿಕೆ ನೀಡಿದ್ದ ಬಸನಗೌಡ ಪಾಟೀಲ್ ಯತ್ನಾಳ್, ಇದು ಹುಡುಗಾಟಿಕೆ ಅಲ್ಲ, ಗಂಭೀರ ವಿಚಾರವನ್ನೇ ಹೇಳುತ್ತಿದ್ದೇನೆ ಎಂದಿದ್ದರು. ಆದರೆ ಈ ಆರೋಪ ಸುಳ್ಳು ಎಂದು ಕಾಂಗ್ರೆಸ್ ನಾಯಕರು ಪ್ರತಿಕ್ರಿಯೆ ನೀಡುತ್ತಿದ್ದಂತೆ, ಕೆಲ ಫೋಟೋಗಳನ್ನು ಬಿಡುಗಡೆ ಮಾಡಿದ್ದರು. ಇಷ್ಟೇ ಅಲ್ಲ ಶೀಘ್ರದಲ್ಲೇ ಮತ್ತಷ್ಟು ದಾಖಲೆ ಬಹಿರಂಗಪಡಿಸುವುದಾಗಿ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

ಯತ್ನಾಳ್ ಆರೋಪಕ್ಕೆ ಹಲವು ಕಾಂಗ್ರೆಸ್ ನಾಯಕರು ಉತ್ತರಿಸಿದ್ದಾರೆ. ಯತ್ನಾಳ್ ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ, ಇದು ಸುಳ್ಳು ಆರೋಪ ಎಂದು ಪ್ರತಿಕ್ರಿಯೆ ನೀಡಿದ್ದರು. ಇದೀಗ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿ ಪರಿಸ್ಥಿತಿ ತಿಳಿಗೊಳಿಸುವ ಪ್ರಯತ್ನ ಮಾಡಿದ್ದಾರೆ. ನನಗೂ ಮುಸ್ಲಿಂ ಧರ್ಮ ಗುರು ತನ್ವೀರ್ ಪೀರಾ ಜೊತೆ ಹಲವು ವರ್ಷದ ನಂಟಿದೆ. ಬಸನಗೌಡ ಪಾಟೀಲ್ ಯತ್ನಾಳ್ ಆರೋಪ ಸತ್ಯಕ್ಕೆದೂರವಾಗಿದೆ. ಯತ್ನಾಳ್ ಬಾಯಿ ತೆಗೆದರೆ ಸುಳ್ಳನ್ನೇ ಹೇಳುತ್ತಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಯತ್ನಾಳ್ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.  

ಸಿಎಂ ಜೊತೆ ವೇದಿಕೆ ಹಂಚಿಕೊಂಡ ಮೌಲ್ವಿಗೆ ಐಸಿಸ್‌ ನಂಟು, ತನಿಖೆ ನಡೆಸುವಂತೆ ಅಮಿತ್‌ ಶಾಗೆ ಯತ್ನಾಳ್‌ ಪತ್ರ

ಶಾಸಕ ಬಸನಗೌಡ ಪಾಟೀಲ ಯತ್ನಾಳರ ಆರೋಪ ಶುದ್ಧ ಸುಳ್ಳು ಎಂದು ಹಜರತ್ ಸೈಯ್ಯದ ಮೊಹಮ್ಮದ ಬಾದಶಾ ಪೀರಾ (ಭಾಷಾಪೀರಾ) ದರ್ಗಾ ಧರ್ಮಗುರು ಸಯ್ಯದ ತಾಜುದ್ದೀನ್ ಖಾದ್ರಿ ಸ್ಪಷ್ಟಪಡಿಸಿದ್ದಾರೆ. ಇತ್ತ ಕಾಂಗ್ರೆಸ್ ನಾಯಕರು ಶಾಸಕ ಯತ್ನಾಳ್ ವಿರುದ್ಧ ಮುಗಿಬಿದ್ದಿದ್ದಾರೆ.

 

Follow Us:
Download App:
  • android
  • ios