Asianet Suvarna News Asianet Suvarna News

ನಿತಿನ್ ಗಡ್ಕರಿ-ಬೊಮ್ಮಾಯಿ ಸಭೆ: ಬೆಂಗಳೂರಿನ ರಸ್ತೆ, ಟ್ರಾಫಿಕ್ ಬಗ್ಗೆ ಮಹತ್ವದ ಚರ್ಚೆ

ಬೆಂಗಳೂರಿನ ರಸ್ತೆ ಹಾಗೂ ಟ್ರಾಫಿಕ್‌ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಸಚಿವ ನಿತಿನ್ ಗಡ್ಕರಿ ಜತೆ ಮಹತ್ವದ ಸಭೆ ನಡೆಸಿದ್ದಾರೆ.

basavaraj bommai and nitin gadkari meeting Over bengaluru Roads And traffic rbj
Author
First Published Sep 8, 2022, 4:04 PM IST

ಬೆಂಗಳೂರು, (ಸೆಪ್ಟೆಂಬರ್.08) : ಕೇಂದ್ರ ರಸ್ತೆ ಸಾರಿಗೆ ಹಾಗೂ ಭೂ ಹೆದ್ದಾರಿ ಇಲಾಖೆ ವತಿಯಿಂದ ಬೆಂಗಳೂರಿನಲ್ಲಿ ನಡೆದ ಎರಡು ದಿನಗಳ ಮಂಥನ ರಾಷ್ಟ್ರೀಯ ವಿಚಾರಣ ಸಂಕೀರ್ಣ ಉದ್ಘಾಟನೆಗೆಂದು ಬೆಂಗಳೂರಿಗೆ ಆಗಮಿಸಿದ ಕೇಂದ್ರ ಕೇಂದ್ರ ಸಚಿವ ನಿತಿನ್ ಗಡ್ಕರಿ ಜೊತೆ ಸಿಎಂ ಬೊಮ್ಮಾಯಿ ಅವರ ಮಹತ್ವದ ಸಭೆ ನಡೆಸಿದರು. ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು(ಸೆ.08) ಕೇಂದ್ರ ಸಚಿವ ನಿತಿನ್ ಗಡ್ಕರಿ ಜೊತೆ ಬೆಂಗಳೂರಿನ ರಸ್ತೆ, ಟ್ರಾಫಿಕ್ ಬಗ್ಗೆ ಚರ್ಚೆ ನಡೆಸಿದ್ದಾರೆ.

ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿ, ಹೊಸ ಟೆಕ್ನಾಲಜಿ ಬಳಸಿ ಟ್ರಾಫಿಕ್ ಸಮಸ್ಯೆ ಬಗೆಹರಿಸುವ ಬಗ್ಗೆ ಚರ್ಚೆ ನಡೆದಿದೆ. ಬೆಂಗಳೂರು-ಮೈಸೂರು ರಸ್ತೆ ಕಾಮಗಾರಿ ಬಗ್ಗೆಯೂ ಚರ್ಚಿಸಿದ್ದೇವೆ. ಡ್ರೈನೇಜ್ ಸಿಸ್ಟಮ್​ ಮಾಡಿ ಮಳೆ ನೀರು ಹರಿದು ಹೋಗಲು ಆದಷ್ಟು ಬೇಗ ಕ್ರಮ ಕೈಗೊಳ್ಳಲಾಗುತ್ತೆ. ಕೂಡಲೇ ರಸ್ತೆ ದುರಸ್ತಿಗೆ ಅಧಿಕಾರಿಗಳಿಗೆ ನಿತಿನ್ ಗಡ್ಕರಿ ಸೂಚಿಸಿದ್ದಾರೆ. ಎಲಿವೇಟೆಡ್​ ಟ್ರಾನ್ಸ್​ಪೋರ್ಟ್​ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡಿದ್ದೇವೆ. ರೋಪ್ ವೇ ಮೂಲಕ ಸಂಚರಿಸುವ ಬಗ್ಗೆ ಸಭೆಯಲ್ಲಿ ಚರ್ಚೆ ಆಗಿದೆ. ಶಿರಾಡಿಘಾಟ್ ಸೇರಿ ಅನೇಕ ಅನೇಕ ಹೆದ್ದಾರಿಗಳ ಬಗ್ಗೆ ಚರ್ಚೆ ಮಾಡಿದ್ದೇವೆ ಎಂದು ಮಾಹಿತಿ ನೀಡಿದರು.

Namma Metro: ಏರ್‌ಪೋರ್ಟ್‌ ಮೆಟ್ರೋ ಮಾರ್ಗ ಚುರುಕು

ಎಲ್ಲೆಲ್ಲಿ ರಸ್ತೆ ಮಾಡಲು ಸಾಧ್ಯವಿಲ್ಲವೊ ಅಲ್ಲೆಲ್ಲ ಎಲಿವೇಟೆಡ್ ಟ್ರಾನ್ಸ್‌ಪೋರ್ಟ್ ಮಾಡಲು ಚಿಂತನೆ ನಡೆಸಿದ್ದೇವೆ. ಈಗಾಗಲೇ ಅದರ ತಂತ್ರಜ್ಞಾನ ಇದೆ. ಅದನ್ನು ಬೆಂಗಳೂರಿಗೆ ಯಾವ ರೀತಿ ಬಳಸಿಕೊಳ್ಳಬಹುದು ಅಂತ ಚರ್ಚೆ ನಡೆಸಿದ್ದೇವೆ. ಬೆಂಗಳೂರು ಮೈಸೂರು ಹೆದ್ದಾರಿ ಉದ್ಘಾಟನೆಗೆ ಯಾವುದೇ ದಿನಾಂಕ‌ ನಿಗದಿ ಮಾಡಿಲ್ಲ. ಅಲ್ಲಿ ಇನ್ನೂ ಸ್ವಲ್ಪ ಕೆಲಸ ಬಾಕಿ ಉಳಿದಿದೆ. ಭೂ ಒತ್ತುವರಿ ಸಮಸ್ಯೆ ಇದೆ. ಅದೆಲ್ಲ ಪೂರ್ಣವಾದ ನಂತರ ಉದ್ಘಾಟನೆಯ ದಿನಾಂಕ‌ ತಿಳಿಸಲಾಗುವುದು ಹೇಳಿದರು.

ಇನ್ನು ಬೆಂಗಳೂರು-ಪುಣೆ ಹೈವೇ ಸಮಸ್ಯೆ ಬಗ್ಗೆಯೂ ಗಡ್ಕರಿ ಅವರ ಗಮನಕ್ಕೆ ತರಲಾಗಿದ್ದು, ಈ ಬಗ್ಗೆ ಅವರು ಅಧಿಕಾರಿಗಳಿಗೆ ಸೂಚನೆ ಸಹ ಕೊಟ್ಟಿದ್ದಾರೆ ಎಂದು ವಿವರಿಸಿದರು.

ಸಭೆಯಲ್ಲಿ ಸಾರಿಗೆ ಸಚಿವ ಶ್ರೀರಾಮುಲು, ಲೋಕೋಪಯೋಗಿ ಸಚಿವ ಸಿ ಸಿ ಪಾಟೀಲ್, ಸಂಸದರಾದ ಪಿ ಸಿ ಮೋಹನ್, ತೇಜಸ್ವಿ ಸೂರ್ಯ ಸೇರಿದಂತೆ ಹಲವರು ಭಾಗಿಯಾಗಿದ್ದರು.

Follow Us:
Download App:
  • android
  • ios