Asianet Suvarna News Asianet Suvarna News

ಸಿಎಂ ಬಸವರಾಜ ಬೊಮ್ಮಾಯಿಗೆ ಹೊರಟ್ಟಿ ಪತ್ರ

  • ಬೆಳಗಾವಿಯಲ್ಲಿ ನವೆಂಬರ್‌ ಅಂತ್ಯ ಅಥವಾ ಡಿಸೆಂಬರ್‌ ಮೊದಲ ವಾರದಲ್ಲಿ ವಿಧಾನಸಭೆಯ ಚಳಿಗಾಲದ ಅಧಿವೇಶನ 
  • ವಿಧಾನಸಭೆಯ ಚಳಿಗಾಲದ ಅಧಿವೇಶನ ನಡೆಸುವಂತೆ ವಿಧಾನಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ
Basavaraja Horatti weites Letter To CM Basavaraja bommai snr
Author
Bengaluru, First Published Nov 1, 2021, 6:41 AM IST
  • Facebook
  • Twitter
  • Whatsapp

 ಹುಬ್ಬಳ್ಳಿ (ನ.01):  ಬೆಳಗಾವಿಯಲ್ಲಿ (Belagavi) ನವೆಂಬರ್‌ ಅಂತ್ಯ ಅಥವಾ ಡಿಸೆಂಬರ್‌ ಮೊದಲ ವಾರದಲ್ಲಿ ವಿಧಾನಸಭೆಯ (Assembly) ಚಳಿಗಾಲದ ಅಧಿವೇಶನ (Session) ನಡೆಸುವಂತೆ ವಿಧಾನಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ (Basavaraja horatti) ಸರ್ಕಾರವನ್ನು ಆಗ್ರಹಿಸಿದ್ದಾರೆ.

ಈ ಕುರಿತು ಸರ್ಕಾರಕ್ಕೆ ಪತ್ರ (Letter) ಬರೆದಿರುವ ಅವರು, ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನಪರಿಷತ್ತಿಗೆ ಆಯ್ಕೆಯಾಗಿರುವ 25 ಜನ ಸದಸ್ಯರ ಅಧಿಕಾರವಧಿ 2022ರ ಜ. 5ಕ್ಕೆ ಮುಕ್ತಾಯವಾಗಲಿದೆ. ಈ ಬಾರಿಯ ವಿಧಾನ ಮಂಡಲದ ಚಳಿಗಾಲದ ಅಧಿವೇಶನವನ್ನು ಬೆಳಗಾವಿಯ (Belagavi) ಸುವರ್ಣಸೌಧದಲ್ಲಿ (Suvarnasoudha) ನಡೆಸುವ ಕುರಿತು ಈಗಾಗಲೇ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗಿದ್ದು ಅವರು ಸಹ ಅದಕ್ಕೆ ಒಪ್ಪಿಗೆ ಸೂಚಿಸಿದ್ದಾರೆ. 

ಚುನಾವಣೆಗೆ ಮತ್ತೆ ಸ್ಪರ್ಧಿಸಲು ವಿಪ ಸಭಾಪತಿ ಹೊರಟ್ಟಿ ನಿರ್ಧಾರ

ಈ ಹಿನ್ನೆಲೆಯಲ್ಲಿ ಈ ಬಾರಿಯ ಚಳಿಗಾಲದ ಅಧಿವೇಶನವನ್ನು ನವೆಂಬರ್‌ ತಿಂಗಳಾಂತ್ಯದಲ್ಲಿ ಅಥವಾ ಡಿಸೆಂಬರ್‌ (December) ಮೊದಲ ವಾರದಲ್ಲಿ ಬೆಳಗಾವಿಯಲ್ಲಿ (Belagavi) ನಡೆಸಬೇಕು. ಇದರಿಂದ ಜನವರಿಯಲ್ಲಿ (January) ಮೊದಲ ವಾರದಲ್ಲಿ ನಿವೃತ್ತಿಗೊಳ್ಳಲಿರುವ 25 ಜನ ವಿಧಾನಪರಿಷತ್ತಿನ ಸದಸ್ಯರಿಗೆ ಚಳಿಗಾಲದ ಅಧಿವೇಶನದಲ್ಲಿ ಪಾಲ್ಗೊಳ್ಳಲು ಅವಕಾಶ ದೊರೆಯಲಿದೆ. 

ಅದರಿಂದ ತಮ್ಮ ಕ್ಷೇತ್ರಗಳಿಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಚರ್ಚೆ ನಡೆಸಿ ಪರಿಹಾರ ಕಂಡುಕೊಳ್ಳಲು ಅವರಿಗೆ ಅನುಕೂಲವಾಗುವುದು. ಈ ನಿಟ್ಟಿನಲ್ಲಿ ವಿಧಾನ ಮಂಡಲದ ಚಳಿಗಾಲದ ಅಧಿವೇಶನ ನಡೆಯುವ ದಿನಾಂಕ ಮೊದಲೇ ಪ್ರಕಟಿಸುವಂತೆ ಮುಖ್ಯಮಂತ್ರಿಗಳನ್ನು ಒತ್ತಾಯಿಸಿದ್ದಾರೆ.

ಹಿಂದೆಯೂ ಪ್ರಸ್ತಾಪ

 

ಚಳಿಗಾಲದ ಅಧಿವೇಶನವನ್ನು(Winter Session) ಈ ಸಲ ಡಿಸೆಂಬರ್‌ನಲ್ಲಿ ಬೆಳಗಾವಿಯಲ್ಲಿ ನಡೆಸಲು ಉದ್ದೇಶಿಸಲಾಗಿದೆ. ಈ ಸಂಬಂಧ ಮುಖ್ಯಮಂತ್ರಿ, ಸ್ಪೀಕರ್‌ ಜತೆ ಮಾತನಾಡಿದ್ದೇನೆ ಎಂದು ವಿಧಾನಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ(Basavaraj Horatti) ತಿಳಿಸಿದ್ದಾರೆ.  

ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಉತ್ತರ ಕರ್ನಾಟಕ(North Karnataka) ಭಾಗದ ಸಮಸ್ಯೆಗಳನ್ನು ಇಟ್ಟುಕೊಂಡು ಎರಡು ವಾರಗಳ ಕಾಲ ಅಧಿವೇಶನ ನಡೆಸಲು ಚರ್ಚಿಸಲಾಗಿದೆ. ಬಹುಶಃ ಡಿಸೆಂಬರ್‌ 2ನೇ ವಾರದಿಂದ ಅಧಿವೇಶನ ನಡೆಯಲಿದೆ. ಈ ಬಾರಿ ಬೆಂಗಳೂರಿನಲ್ಲಿ ನಡೆದ ಅಧಿವೇಶನದಂತೆ, ಬೆಳಗಾವಿಯಲ್ಲಿ(Belagavi) ನಡೆಯಲಿರುವ ಅಧಿವೇಶನಕ್ಕೂ ವಿರೋಧ ಪಕ್ಷದವರು ಸಹಕಾರ ನೀಡಬೇಕು. ಯಾವುದೇ ಗಲಾಟೆ, ಬಹಿಷ್ಕಾರ ಮಾಡದೆ ಮುಕ್ತವಾಗಿ ಚರ್ಚೆಯಲ್ಲಿ ಪಾಲ್ಗೊಳ್ಳಬೇಕು ಎಂದು ಅವರಲ್ಲಿ ವಿನಂತಿಸಲಾಗುವುದು. ವಿರೋಧ ಪಕ್ಷಗಳು ಸಹಕಾರ ನೀಡುತ್ತವೆ ಎಂಬ ವಿಶ್ವಾಸವಿದೆ ಎಂದು ನುಡಿದರು.

ಮುಖ್ಯಮಂತ್ರಿ, ವಿಧಾನಸಭಾಧ್ಯಕ್ಷ ಮತ್ತು ವಿಧಾನಪರಿಷತ್‌ ಸಭಾಪತಿ ಮೂವರೂ ಈ ಭಾಗದವರೇ ಇದ್ದೇವೆ. ಆದ್ದರಿಂದ, ಬೆಳಗಾವಿಯಲ್ಲಿ ನಡೆಯಲಿರುವ ಅಧಿವೇಶನದಲ್ಲಿ ಕೆಲವು ಸಮಸ್ಯೆಗಳಿಗೆ ಪರಿಹಾರ ದೊರಕಬಹುದು. ಈ ಕುರಿತು ಈಗಾಗಲೇ ಕೆಲವಷ್ಟುಯೋಜನೆಗಳನ್ನು ಸಿದ್ಧಪಡಿಸಲಾಗಿದೆ. 3 ವರ್ಷದಿಂದ ಬೆಳಗಾವಿಯಲ್ಲಿ ಅಧಿವೇಶನ ನಡೆದಿಲ್ಲ. ಈ ಸಲ ನಡೆಯಲಿದೆ ಎಂದು ತಿಳಿಸಿದರು. ಬೆಂಗಳೂರಿನ ಅಧಿವೇಶನ ಈ ಸಲ ಉತ್ತಮವಾಗಿದೆ. ಅಜೆಂಡಾಗಳೆಲ್ಲ ಶೇ. 90ರಷ್ಟುಪೂರ್ಣವಾಗಿವೆ ಎಂದು ನುಡಿದ ಅವರು, ಪ್ರತಿಪಕ್ಷಗಳು ಅಧಿವೇಶನಕ್ಕೆ ಉತ್ತಮ ಸಹಕಾರ ನೀಡಿದವು. ಉತ್ತಮ ಚರ್ಚೆಗಳಾದವು ಎಂದು ತಿಳಿಸಿದರು.

ಶಿಕ್ಷಕರ ವರ್ಗಾವಣೆ ವಿಳಂಬಕ್ಕೆ ದರಿದ್ರ ಅಧಿಕಾರಿಗಳೇ ಕಾರಣ: ಬಸವರಾಜ ಹೊರಟ್ಟಿ

ಪಿಂಚಣಿ ಜಾರಿಯಾಗಲಿ:

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಪಿಂಚಣಿ ಯೋಜನೆಯನ್ನು ರದ್ದು ಪಡಿಸುವ ಅವಕಾಶ ರಾಜ್ಯ ಸರ್ಕಾರಕ್ಕಿದೆ. ತಮಿಳುನಾಡು ಸರ್ಕಾರ ಅದಕ್ಕೆ ಸಮಿತಿಯೊಂದನ್ನು ರಚಿಸಿ, ಹಳೆ ಪಿಂಚಣಿ ಯೋಜನೆ ಜಾರಿಗೆಗೆ ಮುಂದಾಗಿದೆ. ರಾಜ್ಯದಲ್ಲಿ 1.38 ಲಕ್ಷ ಶಿಕ್ಷಕರು ನೂತನ ಪಿಂಚಣಿ ಯೋಜನೆಗೆ ಒಳಪಡುತ್ತಿದ್ದು, ಅದನ್ನು ವಿರೋಧಿಸಿ ಹೋರಾಟದ ಹಾದಿ ಸಹ ಹಿಡಿದಿದ್ದಾರೆ. ಪಿಂಚಣಿ ಜಾರಿಯಾಗಬೇಕು ಎಂದು ನುಡಿದರು.

ಶಿಕ್ಷಣ ನೀತಿ ತರಾತುರಿ ಬೇಡ:

ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಬಗ್ಗೆ ಅಧಿಕಾರಿಗಳಿಗೆ, ಶಿಕ್ಷಕರಿಗೂ ಸರಿಯಾಗಿ ಮಾಹಿತಿಯಿಲ್ಲ. ತರಾತುರಿಯಿಂದ ಇದನ್ನು ಜಾರಿಗೊಳಿಸಬಾರದು. ಜಾರಿಗೂ ಮುನ್ನ ವಿಭಾಗ ಮಟ್ಟದಲ್ಲಿ ತಂಡಗಳನ್ನು ರಚಿಸಿ ಸೆಮಿನಾರ್‌ ಮಾಡಬೇಕು. ಈ ನೀತಿಯಲ್ಲಿ ಏನೆಲ್ಲ ಇದೆ ಎಂಬ ಬಗ್ಗೆ ಕಾರ್ಯಾಗಾರಗಳ ಮೂಲಕ ಜನರಿಗೆ, ಶಿಕ್ಷಕರಿಗೆ ಮನವರಿಕೆ ಮಾಡಿಕೊಡಬೇಕು. ಬಳಿಕ ಜಿಲ್ಲಾ ಮಟ್ಟದಲ್ಲೂ ಇದೇ ರೀತಿ ಕಾರ್ಯಾಗಾರ ಮಾಡಬೇಕು. ಯಾವ ರೀತಿ ಮಕ್ಕಳಿಗೆ ಉಪಯೋಗ ಎಂಬುದನ್ನು ತಿಳಿಸಿಕೊಡಬೇಕು. ಮಕ್ಕಳಿಗೆ ನೈತಿಕ ಶಿಕ್ಷಣ ಅತ್ಯಗತ್ಯ. ಆ ಅಂಶ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿದೆ. ಆದರೆ ತರಾತುರಿಯಿಂದ ಜಾರಿಗೊಳಿಸುವ ಬದಲು ಅದರ ಬಗ್ಗೆ ಅರಿವು ಮೂಡಿಸುವ ಮೂಲಕ ಜಾರಿಗೊಳಿಸಬೇಕು ಎಂದು ಸಲಹೆ ಮಾಡಿದರು.

ಮಹದಾಯಿಗಾಗಿ ಹೋರಾಟ ಮಾಡಿದವರೇ ಇದೀಗ ಆಡಳಿತದಲ್ಲಿದ್ದಾರೆ. ಆದಕಾರಣ ಮಹದಾಯಿ ಯೋಜನೆ ಅನುಷ್ಠಾನಗೊಳಿಸಬೇಕು. ಈ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು.

Follow Us:
Download App:
  • android
  • ios