Asianet Suvarna News Asianet Suvarna News

ಕೊರೋನಾ ಕಾಟ: ಬೆಂಗಳೂರಲ್ಲಿ ಸಾರ್ವಜನಿಕ ಗಣೇಶೋತ್ಸವಕ್ಕೆ ಬ್ರೇಕ್‌?

ಬೆಂಗಳೂರು ನಗರದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗಿದೆ| ರಸ್ತೆ ಮತ್ತು ಮನೆಗಳನ್ನು ಕಂಟೈನ್ಮೆಂಟ್‌ ಮಾಡಲಾಗಿದೆ| ಗಣೇಶ ಉತ್ಸವ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ಜನ ಗುಂಪು ಸೇರುವ ಸಾಧ್ಯತೆ ಇದೆ. ಇದರಿಂದ ಸೋಂಕು ಹರಡುವ ಪ್ರಮಾಣ ಹೆಚ್ಚಾಗಲಿದೆ| ನಗರದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ನೀಡದಿರಲು ಚಿಂತನೆ|

BBMP Commissioner N Manjunath Talks over Bengaluru Ganesh Festival
Author
Bengaluru, First Published Jul 30, 2020, 7:53 AM IST

ಬೆಂಗಳೂರು(ಜು.30): ನಗರದಲ್ಲಿ ಕೊರೋನಾ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಬಾರಿಯ ಗಣೇಶ ಚತುರ್ಥಿ ವೇಳೆ ಸಾರ್ವಜನಿಕ ಸ್ಥಳದಲ್ಲಿ ಗಣೇಶ ಪ್ರತಿಷ್ಠಾಪನೆ ಹಾಗೂ ಉತ್ಸವಕ್ಕೆ ಅವಕಾಶ ನೀಡದಿರಲು ಬಿಬಿಎಂಪಿ ಚಿಂತನೆ ನಡೆಸುತ್ತಿದೆ ಎಂದು ಬಿಬಿಎಂಪಿ ಆಯುಕ್ತ ಎನ್‌.ಮಂಜುನಾಥ ಪ್ರಸಾದ್‌ ತಿಳಿಸಿದ್ದಾರೆ.

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಗರದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗಿದೆ. ರಸ್ತೆ ಮತ್ತು ಮನೆಗಳನ್ನು ಕಂಟೈನ್ಮೆಂಟ್‌ ಮಾಡಲಾಗಿದೆ. ಗಣೇಶ ಚತುರ್ಥಿ (ಆಗಸ್ಟ್‌ 21 ಮತ್ತು 22) ಉತ್ಸವ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ಜನ ಗುಂಪು ಸೇರುವ ಸಾಧ್ಯತೆ ಇದೆ. ಇದರಿಂದ ಸೋಂಕು ಹರಡುವ ಪ್ರಮಾಣ ಹೆಚ್ಚಾಗಲಿದೆ. ಹೀಗಾಗಿ, ನಗರದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ನೀಡದಿರಲು ಚಿಂತನೆ ಮಾಡಲಾಗಿದೆ. ಈ ಬಗ್ಗೆ ಸರ್ಕಾರಕ್ಕೂ ಸಹ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ತಿಳಿಸಿದರು.

ಹಾಸಿಗೆಗಳ ಬಗ್ಗೆ ಮಾಹಿತಿ ನೀಡಲು ಅಧಿಕಾರಿಗಳನ್ನೇ ಕಾಯಿಸಿದ ಆಸ್ಪತ್ರೆ

ಮನೆಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಿ, ಮನೆಯಲ್ಲಿಯೇ ವಿಸರ್ಜನೆ ಮಾಡಬಹುದು ಅಥವಾ ಬಿಬಿಎಂಪಿಯಿಂದ ಪ್ರತಿವರ್ಷ ವ್ಯವಸ್ಥೆ ಮಾಡುವಂತೆ ಮೊಬೈಲ್‌ ವಿಸರ್ಜನೆ ವಾಹನ ವ್ಯವಸ್ಥೆ ಮಾಡಲಾಗುವುದು ಎಂದರು.
 

Follow Us:
Download App:
  • android
  • ios