Asianet Suvarna News Asianet Suvarna News

DK Shivakumar: 6 ತಿಂಗಳಲ್ಲಿ ಬಿಬಿಎಂಪಿ ಚುನಾವಣೆ: ಡಿಸಿಎಂ ಡಿಕೆಶಿ

ಮೂರುವರೆ ವರ್ಷಗಳಿಂದ ಜನಪ್ರತಿನಿಧಿಗಳಿಲ್ಲದ ಬಿಬಿಎಂಪಿಗೆ ಚುನಾವಣೆ ನಡೆಸಲು ರಾಜ್ಯ ಸರ್ಕಾರ ಮುಂದಾಗಿದೆ. ಮುಂದಿನ ಆರು ತಿಂಗಳೊಳಗೆ ಬಿಬಿಎಂಪಿ ಚುನಾವಣೆ ನಡೆಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಘೋಷಿಸಿದ್ದಾರೆ.

BBMP elections within 6 months says DCM DK Shivakumar at bengaluru rav
Author
First Published May 30, 2023, 4:39 AM IST

ಬೆಂಗಳೂರು (ಮೇ.30) : ಮೂರುವರೆ ವರ್ಷಗಳಿಂದ ಜನಪ್ರತಿನಿಧಿಗಳಿಲ್ಲದ ಬಿಬಿಎಂಪಿಗೆ ಚುನಾವಣೆ ನಡೆಸಲು ರಾಜ್ಯ ಸರ್ಕಾರ ಮುಂದಾಗಿದೆ. ಮುಂದಿನ ಆರು ತಿಂಗಳೊಳಗೆ ಬಿಬಿಎಂಪಿ ಚುನಾವಣೆ ನಡೆಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಘೋಷಿಸಿದ್ದಾರೆ.

ಬಿಬಿಎಂಪಿ(BBMP) ಸದಸ್ಯರ ಅವಧಿ 2020ರ ಸೆಪ್ಟೆಂಬರ್‌ನಲ್ಲೇ ಪೂರ್ಣಗೊಂಡಿದ್ದರೂ, ಬಿಬಿಎಂಪಿ ಕಾಯ್ದೆ ರಚನೆ, ವಾರ್ಡ್‌ಗಳ ಮರು ವಿಂಗಡಣೆ ಸೇರಿ ಇನ್ನಿತರ ಕಾರಣಗಳಿಂದಾಗಿ ಚುನಾವಣೆ ನಡೆಸಲಾಗಿಲ್ಲ. ಅದರ ನಡುವೆ ಸುಪ್ರೀಂಕೋರ್ಟ್(Supreme court of inida) ಮತ್ತು ಹೈಕೋರ್ಟ್‌ನಲ್ಲಿ(Karnataka high court) ಬಿಬಿಎಂಪಿ ವಾರ್ಡ್‌ ಮೀಸಲಾತಿಗೆ ಸಂಬಂಧಿಸಿದ ಅರ್ಜಿಗಳ ವಿಚಾರಣೆಯೂ ನಡೆಯುತ್ತಿದೆ. ಈ ಕಾರಣಗಳಿಂದಾಗಿ ಕಳೆದ ಮೂರುವರೆ ವರ್ಷಗಳಿಂದ ಬಿಬಿಎಂಪಿಯಲ್ಲಿ ಜನಪ್ರತಿನಿಧಿಗಳಿಲ್ಲದಂತಾಗಿದೆ. ಇದೀಗ ಕಾಂಗ್ರೆಸ್‌ ಸರ್ಕಾರ ಚುನಾವಣೆಗಿರುವ ಎಲ್ಲ ತೊಡಕುಗಳನ್ನು ನಿವಾರಿಸಿ ವರ್ಷದ ಅಂತ್ಯದೊಳಗೆ ಚುನಾವಣೆ ನಡೆಸುವುದಾಗಿ ತಿಳಿಸಿದೆ.

Bengaluru- ಬಿಬಿಎಂಪಿ ಚುನಾವಣೆಗೆ ರಾಮಲಿಂಗಾರೆಡ್ಡಿ ನೇತೃತ್ವದಲ್ಲಿ ಸಮಿತಿ ರಚನೆ

ಈ ಕುರಿತಂತೆ ಸೋಮವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌(DK Shivakumar), ಬಿಬಿಎಂಪಿ ಚುನಾವಣೆ(BBMP election )ಯನ್ನು ಮುಂದಿನ 6 ತಿಂಗಳಲ್ಲಿ ನಡೆಸಲಾಗುವುದು. ಈ ಕುರಿತಂತೆ ಕಾಂಗ್ರೆಸ್‌ ಪ್ರಣಾಳಿಕೆಯಲ್ಲೂ ತಿಳಿಸಲಾಗಿದೆ. ಬೆಂಗಳೂರಿನ ಆಡಳಿತವನ್ನು ಅಧಿಕಾರಿಗಳ ಕೈಯಲ್ಲಿ ಕೊಡಲು ನಾವು ಸಿದ್ಧರಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆ ನಡೆಸಲೇಬೇಕು. ಅದಕ್ಕೆ ನಾವು ಬದ್ಧರಾಗಿದ್ದೇವೆ. ಜನರ ಸಮಸ್ಯೆ ಆಲಿಸಲು ಶೀಘ್ರದಲ್ಲಿ ಕಾರ್ಪೋರೇಟರ್‌ಗಳು ಆಯ್ಕೆಯಾಗಿ ಬರಲಿದ್ದಾರೆ ಎಂದು ಮಾಹಿತಿ ನೀಡಿದರು.

ರಾಮಲಿಂಗಾರೆಡ್ಡಿ ಅಧ್ಯಕ್ಷತೆಯಲ್ಲಿ ಸಮಿತಿ

ಬಿಬಿಎಂಪಿ ವಾರ್ಡ್‌ ಮರು ವಿಂಗಡಣೆ ಕುರಿತಂತೆ ಕಾಂಗ್ರೆಸ್‌ ನಾಯಕರು ಮತ್ತು ಬಿಬಿಎಂಪಿಯ ಮಾಜಿ ಸದಸ್ಯರು ಹಿಂದಿನಿಂದಲೂ ಆಕ್ಷೇಪ ವ್ಯಕ್ತಪಡಿಸುತ್ತಿದ್ದರು. ಕಾಂಗ್ರೆಸ್‌ ಸದಸ್ಯರು ಗೆಲ್ಲಬಹುದಾದ ವಾರ್ಡ್‌ಗಳಲ್ಲಿ ಕಾಂಗ್ರೆಸ್‌ ಪರವಾದ ಮತದಾರರು ಬೇರೆ ವಾರ್ಡ್‌ಗಳಿಗೆ ಸೇರ್ಪಡೆಯಾಗುವಂತೆ ವಾರ್ಡ್‌ ಮರು ವಿಂಗಡಣೆ ಮಾಡಲಾಗಿದೆ ಎಂಬ ಆರೋಪಗಳು ಕೇಳಿಬಂದಿದ್ದವು. ಈ ಗೊಂದಲಗಳನ್ನೆಲ್ಲ ನಿವಾರಿಸುವ ಸಲುವಾಗಿ ವಾರ್ಡ್‌ ಮರುವಿಂಗಡಣೆ ಕುರಿತು ಪರಿಶೀಲನೆ ನಡೆಸಿ ವರದಿ ನೀಡುವ ಸಲುವಾಗಿ ಸಚಿವ ರಾಮಲಿಂಗಾರೆಡ್ಡಿ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲು ನಿರ್ಧರಿಸಲಾಗಿದೆ. ಸಮಿತಿಯು ವರದಿ ನೀಡಿದ ನಂತರ, ಸದ್ಯ ರಚಿಸಲಾಗಿರುವ 243 ವಾರ್ಡ್‌ಗಳ ಗಡಿಯಲ್ಲಿ ಮತ್ತೆ ಬದಲಾವಣೆ ತರುವುದು ಸಮಿತಿ ರಚನೆಯ ಉದ್ದೇಶವಾಗಿದೆ.

 

ಗುತ್ತಿಗೆದಾರರಿಗೆ ಪಾಲಿಕೆ ಹಣಕ್ಕೆ ಬ್ಯಾಂಕ್‌ ಕೊಕ್ಕೆ: ತುರ್ತು ಅಗತ್ಯ ಇರೋರಿಗೆ ಹಣಕ್ಕೆ ಓವಿಡಿಎಸ್‌ ಜಾರಿ!

Follow Us:
Download App:
  • android
  • ios