ಬಿಬಿಎಂಪಿ ವ್ಯಾಪ್ತಿಯಲ್ಲಿ ಒಣಗಿದ ಮರಗಳು ಮತ್ತು ಅಪಾಯಕಾರಿ ಕೊಂಬೆಗಳನ್ನು ತೆರವುಗೊಳಿಸಲು 1533 ಟೋಲ್‌ಫ್ರೀ ಸಂಖ್ಯೆ ಬಿಡುಗಡೆ ಮಾಡಲಾಗಿದೆ. ನಾಗರಿಕರು ಈ ಸಂಖ್ಯೆಗೆ ಕರೆ ಮಾಡಿ ದೂರು ನೀಡಬಹುದು. ವಿಧಾನಸಭಾ ಕ್ಷೇತ್ರವಾರು ಅರಣ್ಯ ಇಲಾಖೆ ಅಧಿಕಾರಿಗಳ ಸಂಪರ್ಕ ಸಂಖ್ಯೆಗಳನ್ನು ಸಹ ನೀಡಲಾಗಿದೆ.
ಬೆಂಗಳೂರು (ಜೂ.26): ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಒಣಗಿದ ಮರಗಳು ಮತ್ತು ಅಪಾಯಕಾರಿ ಕೊಂಬೆಗಳ ತೆರವಿಗೆ ಮುಂದಾಗಿದೆ. ಸಾರ್ವಜನಿಕ ಸುರಕ್ಷತೆ ದೃಷ್ಟಿಯಿಂದ ಈ ಕಾರ್ಯಕ್ಕೆ ಸಹಾಯವಾಗಿ ಬಿಬಿಎಂಪಿ 1533 ಎಂಬ ಟೋಲ್‌ಫ್ರೀ ಸಂಖ್ಯೆಯನ್ನು ಬಿಡುಗಡೆ ಮಾಡಿದೆ. ಒಣಗಿದ ಮರಗಳು ಅಥವಾ ಅಪಾಯಕಾರಿ ಕೊಂಬೆಗಳ ಬಗ್ಗೆ ದೂರು ಇದ್ದರೆ, ನಾಗರಿಕರು ಈ ಸಂಖ್ಯೆಗೆ ಕರೆ ಮಾಡಿ ಮಾಹಿತಿ ನೀಡಬಹುದು ಎಂದು ಬಿಬಿಎಂಪಿ ಕಮಿಷನರ್ ಮನವಿ ಮಾಡಿದ್ದಾರೆ.
ಬಿಬಿಎಂಪಿಯ 8 ವಲಯಗಳಲ್ಲಿ ವಿಧಾನಸಭಾ ಕ್ಷೇತ್ರವಾರು ದೂರು ಸಲ್ಲಿಸಲು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸಂಪರ್ಕ ಸಂಖ್ಯೆಗಳನ್ನು ನೀಡಲಾಗಿದೆ. ಕೆಳಗಿನಂತೆ ವಿವರಗಳು:
1. ಪಶ್ಚಿಮ ವಲಯ:
-ರಾಜಾಜಿನಗರ, ಗೋವಿಂದರಾಜನಗರ, ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರಗಳಿಗೆ ಪ್ರಭಾರ ವಲಯ ಅರಣ್ಯಾಧಿಕಾರಿಯಾದ ಸುದರ್ಶನ್ – 9480683341-ಮಹಾಲಕ್ಷ್ಮಿಪುರಂ, ಗಾಂಧಿನಗರ, ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರಗಳಿಗೆ ರಾಜೇಶ್ - 9449175978
2. ಪೂರ್ವ ವಲಯ:
-ಶಾಂತಿನಗರ, ಸಿ.ವಿ. ರಾಮನ್ ನಗರ, ಪುಲಿಕೇಶಿನಗರ ವಿಧಾನಸಭಾ ಕ್ಷೇತ್ರಗಳಿಗೆ ಪ್ರಭಾರ ವಲಯ ಅರಣ್ಯಾಧಿಕಾರಿಯಾದ ನಾಗೇಂದ್ರ – 9113530344-ಶಿವಾಜಿನಗರ, ಹೆಬ್ಬಾಳ, ಸರ್ವಜ್ಞ ನಗರ ವಿಧಾನಸಭಾ ಕ್ಷೇತ್ರಗಳಿಗೆ ಉಪ ವಲಯ ಅರಣ್ಯಾಧಿಕಾರಿ- ಶಿವಣ್ಣ - 9164597895
3. ದಕ್ಷಿಣ ವಲಯ:
-ಬಸವನಗುಡಿ, ವಿಜಯನಗರ, ಪದ್ಮನಾಭನಗರ ವಿಧಾನಸಭಾ ಕ್ಷೇತ್ರಗಳಿಗೆ ಪ್ರಭಾರ ವಲಯ ಅರಣ್ಯಾಧಿಕಾರಿಯಾದ ಚಂದ್ರಪ್ಪ ವಿ - 9480683655-ಚಿಕ್ಕಪೇಟೆ, ಜಯನಗರ ವಿಧಾನಸಭಾ ಕ್ಷೇತ್ರಗಳಿಗೆ ಉಪ ವಲಯ ಅರಣ್ಯಾಧಿಕಾರಿಯಾದ ಬಿ.ಬಿ ಮೇಟಿ – 9740576919
-ಬಿಟಿಎಂ ಲೇಔಟ್ ವಿಧಾನಸಭಾ ಕ್ಷೇತ್ರಕ್ಕೆ ಉಪ ವಲಯ ಅರಣ್ಯಾಧಿಕಾರಿಯಾದ ಹರೀಶ್ ಹೆಚ್.ಆರ್ - 7676165253
4. ದಾಸರಹಳ್ಳಿ ವಲಯ:
-ದಾಸರಹಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ಪ್ರಭಾರ ವಲಯ ಅರಣ್ಯಾಧಿಕಾರಿಯಾದ ರಾಜಪ್ಪ ಕೆ.ಎನ್ - 9448234928
5. ಬೊಮ್ಮನಹಳ್ಳಿ ವಲಯ:
-ಬೊಮ್ಮನಹಳ್ಳಿ, ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರಗಳಿಗೆ ಪ್ರಭಾರ ವಲಯ ಅರಣ್ಯಾಧಿಕಾರಿಯಾದ ನರೇಂದ್ರ ಬಾಬು – 9480685399
-ಬೊಮ್ಮನಹಳ್ಳಿ, ಆನೇಕಲ್ ವಿಧಾನಸಭಾ ಕ್ಷೇತ್ರಗಳಿಗೆ ಉಪ ವಲಯ ಅರಣ್ಯಾಧಿಕಾರಿಯಾದ ವಿನಯ್ - 7760933913
6. ಯಲಹಂಕ ವಲಯ:
-ಯಲಹಂಕ ವಿಧಾನಸಭಾ ಕ್ಷೇತ್ರಕ್ಕೆ ದೇವರಾಜ್ – 9964530649
-ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರಕ್ಕೆ ಉಪ ವಲಯ ಅರಣ್ಯಾಧಿಕಾರಿಯಾದ ಮುತ್ತುರಾಜ್.ಕೆ.ಪಿ - 9483139438
7. ಆರ್.ಆರ್. ನಗರ ವಲಯ:
-ಆರ್.ಆರ್. ನಗರ ವಿಧಾನಸಭಾ ಕ್ಷೇತ್ರಕ್ಕೆ ಪ್ರಭಾರ ವಲಯ ಅರಣ್ಯಾಧಿಕಾರಿಯಾದ ರವೀಂದ್ರನಾಥ್ – 6361903330
-ಯಶವಂತಪುರ ವಿಧಾನಸಭಾ ಕ್ಷೇತ್ರಕ್ಕೆ ಉಪ ವಲಯ ಅರಣ್ಯಾಧಿಕಾರಿಯಾದ ಜಗದೀಶ್ - 9880516322
8. ಮಹದೇವಪುರ ವಲಯ:
-ಮಹದೇವಪುರ, ಕೆ.ಆರ್ ಪುರಂ ವಿಧಾನಸಭಾ ಕ್ಷೇತ್ರಗಳಿಗೆ ಪ್ರಭಾರ ವಲಯ ಅರಣ್ಯಾಧಿಕಾರಿಯಾದ ಚಿದಾನಂದ್ - 9480685541
ನಾಗರಿಕರು ತಮ್ಮ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ಅಧಿಕಾರಿಗಳಿಗೆ ನೇರವಾಗಿ ಸಂಪರ್ಕಿಸಿ ದೂರು ದಾಖಲಿಸಬಹುದು. ಸಾರ್ವಜನಿಕ ಸುರಕ್ಷತೆಗಾಗಿ ತಕ್ಷಣ ಕ್ರಮ ಕೈಗೊಳ್ಳಲು ಬಿಬಿಎಂಪಿ ಬದ್ಧವಾಗಿದೆ ಎಂದು ಕಮಿಷನರ್ ತಿಳಿಸಿದ್ದಾರೆ.
