ಬೆಂಗಳೂರು(ಜು.14): ಬಿಬಿಎಂಪಿ ಶಾಲಾ- ಕಾಲೇಜು ವಿದ್ಯಾರ್ಥಿಗಳಿಗೆ ಆನ್‌ಲೈನ್‌ ಶಿಕ್ಷಣ ಪಡೆಯಲು ಅನುಕೂಲವಾಗುವಂತೆ ಲ್ಯಾಪ್‌ಟಾಪ್‌ ಅಥವಾ ಟ್ಯಾಬ್‌ ನೀಡಬೇಕೆಂದು ಬಿಬಿಎಂಪಿ ವಿರೋಧ ಪಕ್ಷದ ನಾಯಕ ಅಬ್ದುಲ್‌ ವಾಜೀದ್‌ ಆಗ್ರಹಿಸಿದ್ದಾರೆ.

ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳಲ್ಲಿ ಆನ್‌ಲೈನ್‌ ಶಿಕ್ಷಣ ಆರಂಭಿಸಲಾಗುತ್ತಿದೆ. ಬಿಬಿಎಂಪಿ ಶಾಲಾ -ಕಾಲೇಜುಗಳ ವಿದ್ಯಾರ್ಥಿಗಳು ಆರ್ಥಿಕವಾಗಿ ಹಿಂದುಳಿದ ವರ್ಗದವರಾಗಿದ್ದಾರೆ. 

17ರಂದು ರಾಜ್ಯದ ಹಿಂದಿನ ಏಳು ಶಿಕ್ಷಣ ಸಚಿವರೊಂದಿಗೆ ಸುರೇಶ್‌ ಕುಮಾರ್ ಮಹತ್ವದ ಸಭೆ

ಹೀಗಾಗಿ, ಪಾಲಿಕೆಯು ವಿದ್ಯಾರ್ಥಿಗಳಿಗೆ ಆನ್‌ಲೈನ್‌ ಶಿಕ್ಷಣಕ್ಕೆ ಅನುಕೂಲವಾಗುವಂತೆ ಐದನೇ ತರಗತಿಯಿಂದ ಪಿಯುಸಿವರೆಗಿನ ಎಲ್ಲ ವಿದ್ಯಾರ್ಥಿಗಳಿಗೆ ಲ್ಯಾಪ್‌ ಟಾಪ್‌ ಅಥವಾ ಟ್ಯಾಬ್‌ಗಳನ್ನು ಬಿಬಿಎಂಪಿ ಕಲ್ಯಾಣ ಕಾರ್ಯಕ್ರಮ ಹಾಗೂ ವಿಶೇಷ ಅನುದಾನದಡಿ ಒದಗಿಸಬೇಕೆಂದು ಬಿಬಿಎಂಪಿ ಮೇಯರ್‌, ಆಯುಕ್ತರು ಹಾಗೂ ಸಾಮಾಜಿಕ ಸ್ಥಾಯಿ ಸಮಿತಿ ಅಧ್ಯಕ್ಷರಿಗೆ ಅಬ್ದುಲ್‌ ವಾಜೀದ್‌ ಅವರು ಪತ್ರ ಬರೆದು ಕೋರಿದ್ದಾರೆ.