ಬೆಂಗಳೂರು ಪ್ರಾಧಿಕಾರದ ಅಧ್ಯಕ್ಷರಾದ ಬೆನ್ನಲ್ಲೇ ಎನ್.ಎ.ಹ್ಯಾರಿಸ್ ಶಾಸಕ ಸ್ಥಾನಕ್ಕೆ ಎದುರಾಯ್ತು ಕಂಟಕ

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದ ಬೆನ್ನಲ್ಲಿಯೇ ಅವರ ಶಾಸಕ ಸ್ಥಾನಕ್ಕೆ ಕಂಟಕ ಎದುರಾಗಿದೆ.

BDA chairman NA Haris is likely to be dismissed as MLA by the High Court sat

ಬೆಂಗಳೂರು (ಜ.29): ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಅಧ್ಯಕ್ಷರಾಗಿ ಶಾಂತಿನಗರ ವಿಧಾನಸಭಾ ಕ್ಷೇತ್ರದ ಶಾಸಕ ಎನ್.ಎ. ಹ್ಯಾರಿಸ್ ಅವರು ನಿನ್ನೆ ಬೆಳಗ್ಗೆಯಷ್ಟೇ ಅಧಿಕಾರ ಸ್ವೀಕರಿಸಿದ್ದಾರೆ. ಇದಾಗಿ ಕೇವಲ ಒಂದು ದಿನದ ಅಂತರದಲ್ಲಿ ಈಗ ಅವರ ಶಾಸಕ ಸ್ಥಾನವೇ ಅನರ್ಹಗೊಳ್ಳುವ ಭೀತಿ ಶುರುವಾಗಿದೆ.

ಬೆಂಗಳೂರಿನ ಶಾಂತಿನಗರ ವಿಧಾನಸಭಾ ಕ್ಷೇತ್ರದ 2023 ಚುನಾವಣೆಯ ವೇಳೆ ಎನ್.ಎ. ಹ್ಯಾರಿಸ್ ಅವರು ಚುನಾವಣಾ ಆಯೋಗಕ್ಕೆ ತಪ್ಪು ಮಾಹಿತಿ ಹಾಗೂ ಪ್ರಮಾಣ ಪತ್ರಗಳನ್ನು ಸಲ್ಲಿಕೆ ಮಾಡಿ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ. ಆದ್ದರಿಂದ ಪರಾಜಿತ ಅಭ್ಯರ್ಥಿ ಶಿವಕುಮಾರ್ ಅವರು ಸುಳ್ಳು ಪ್ರಮಾಣಪತ್ರ ಸಲ್ಲಿಸಿ ಗೆಲುವು ಸಾಧಿಸಿರುವ ಹ್ಯಾರೀಸ್ ಅವರ ಶಾಸಕ ಸ್ಥಾನವನ್ನು ರದ್ದುಗೊಳಿಸಬೇಕು ಎಂದು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ.

ಶಾಂತಿನಗರ ಅಭಿವೃದ್ಧಿ ಮಾಡಲಾಗದ ಶಾಸಕ ಹ್ಯಾರಿಸ್‌ ಬೆಂಗಳೂರನ್ನೇನು ಡೆವಲಪ್ ಮಾಡ್ತಾರೆ? ಎಎಪಿ ಕಿಡಿ

ಈ ಕುರಿತು ಚುನಾವಣಾ ತಕರಾರು ಅರ್ಜಿಯನ್ನು ಸೋಮವಾರ ಹೈಕೋರ್ಟ್ ನ್ಯಾಯಮೂರ್ತಿ ಸೂರಜ್ ಗೋವಿಂದ್ ಅವರ ಏಕಸದಸ್ಯ ಪೀಠದಲ್ಲಿ ಅರ್ಜಿ ವಿಚಾರಣೆ ಮಾಡಲಾಗಿದೆ. ಚುನಾವಣಾ ಪ್ರಮಾಣ ಪತ್ರದಲ್ಲಿ ತಪ್ಪು ಮಾಹಿತಿ ನೀಡಿದ ವಿಚಾರಣೆ ವೇಳೆ ಸುಳ್ಳು ಮಾಹಿತಿ ನೀಡಿದ್ದರಿಂದ ಚುನಾವಣೆ ಮೇಲೆ ಪರಿಣಾಮ ಬೀರಿದೆ. ಹೀಗಾಗಿ ಹ್ಯಾರಿಸ್ ಅನರ್ಹ ಮಾಡುವಂತೆ ಪರಾಜಿತ ಅಭ್ಯರ್ಥಿ ಮನವಿ ಮಾಡಿದ್ದಾರೆ. ವಾದ ಪ್ರತಿವಾದ ಆಲಿಸಿದ ನ್ಯಾಯಾಧೀಶರು ತೀರ್ಪು ಕಾಯ್ದಿರಿಸಿದ್ದಾರೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ಪ್ರಮುಖ ವಿಧಾನಸಭಾ ಕ್ಷೇತ್ರಗಳಲ್ಲಿ ಒಂದಾದ ಶಾಂತಿನಗರ ವಿಧಾನಸಭಾ ಕ್ಷೇತ್ರದ ಶಾಸಕ ಎನ್.ಎ. ಹ್ಯಾರಿಸ್ ಅವರು ಪ್ರಭಲ ನಾಯಕರಾಗಿದ್ದರೂ ಕಾಂಗ್ರೆಸ್‌ನಿಂದ ಅವರಿಗೆ ಸಚಿವ ಸ್ಥಾನ ಸಿಗಲಿಲ್ಲ. ಆದರೆ, ಅವರ ಪುತ್ರ ಕಾಂಗ್ರೆಸ್‌ ಯುವ ಘಟಕದ ರಾಜ್ಯಾಧ್ಯಕ್ಷನಾಗಿದ್ದು, ತಮ್ಮ ತಂದೆಗೆ ಸೂಕ್ತ ಸ್ಥಾನಮಾನ ನೀಡುವಂತೆ ತಮ್ಮ ರಾಜಕೀಯ ಗುರು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಬಳಿ ಕೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಅವರಿಗೆ ಸಚಿವ ಸ್ಥಾನ ನೀಡಲಾಗದಿದ್ದರೇನು? ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವನ್ನೇ ನೀಡುವುದಾಗಿ ತಿಳಿಸಿದ್ದಾರೆ.

ಡಿ.ಕೆ.ಶಿವಕುಮಾರ್ ಸಿಎಂ ಆಗುವ ಮೊದಲೇ ಹ್ಯಾರಿಸ್‌ ಅವರನ್ನು ಸಿಎಂ, ಅವರ ಮಗನನ್ನು ಡಿಸಿಎಂ ಮಾಡಿ!

ಇನ್ನು ರಾಜ್ಯದಲ್ಲಿ ಸಚಿವ ಸ್ಥಾನ ಸಿಗದ ಎಲ್ಲ ಹಿರಿಯ ನಾಯಕರಿಗೆ ನಿಗಮ ಮಂಡಳಿಗಳನ್ನು ಹಂಚುವ ಮೂಲಕ ಅಧ್ಯಕ್ಷರನ್ನಾಗಿ ಮಾಡಲಾಗಿದೆ. ಈ ವೇಳೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವನ್ನು ಬೆಂಗಳೂರಿನ ಶಾಂತಿನಗರ ಕ್ಷೇತ್ರದ ಶಾಸಕ ಎನ್.ಎ. ಹ್ಯಾರಿಸ್ ಅವರಿಗೆ ನೀಡಲಾಗಿದೆ. ಆದರೆ, ಈಗ ಸುಳ್ಳು ಪ್ರಮಾಣ ಪತ್ರಗಳನ್ನು ಸಲ್ಲಿಕೆ ಮಾಡಿರುವುದು ಸಾಬೀತಾದಲ್ಲಿ ತಕ್ಷಣವೇ ಹ್ಯಾರಿಸ್‌ ಅವರ ಶಾಸಕ ಸ್ಥಾನವನ್ನು ಅನರ್ಹಗೊಳಿಸುವ ಸಾಧ್ಯತೆಯೂ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಶಾಸಕರಲ್ಲದ ವ್ಯಕ್ತಿಯನ್ನು ಬಿಡಿಎ ಅಧ್ಯಕ್ಷರಾಗಿ ನೇಮಕ ಮಾಡುವುದಕ್ಕೆ ಅವಕಾಶವಿಲ್ಲ. ಆದ್ದರಿಂದ ಹ್ಯಾರಿಸ್ ಅವರು ಬಿಡಿಎ ಅಧ್ಯಕ್ಷ ಅಧಿಕಾರ ಸ್ವೀಕರಿಸಿದ ಕೆಲವೇ ದಿನಗಳಲ್ಲಿ ಪದತ್ಯಾಗ ಮಾಡಬೇಕಾಗಬಹುದು ಎಂದು ಹೇಳಲಾಗುತ್ತಿದೆ.

Latest Videos
Follow Us:
Download App:
  • android
  • ios