Asianet Suvarna News Asianet Suvarna News

'ನನ್ನ ಸಾವಿಗೆ ಸಚಿವ ಈಶ್ವರಪ್ಪ ಕಾರಣ', 40% ಆರೋಪ ಮಾಡಿದ್ದ ಗುತ್ತಿಗೆದಾರ ಆತ್ಮಹತ್ಯೆ!

ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಶೇಕಡಾ 40 ಪರ್ಸೆಂಟೇಜ್ ಆರೋಪ ಮಾಡಿದ್ದ ಬೆಳಗಾವಿ ಬಿಜೆಪಿ ಕಾರ್ಯಕರ್ತ ಹಾಗೂ ಗುತ್ತಿಗೆದಾರ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಮಾಧ್ಯಮದ ಪ್ರತಿನಿಧಿಗಳಿಗೆ ವಾಟ್ಸಪ್ ಸಂದೇಶ ರವಾನಿಸಿ ಉಡುಪಿಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

Belagavi Contractor Santosh Patil Commits Suicide Minister KS Eshwarappa Name in Death Note pod
Author
Bangalore, First Published Apr 12, 2022, 1:31 PM IST | Last Updated Apr 12, 2022, 1:42 PM IST

ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಶೇಕಡಾ 40 ಆರೋಪ ಮಾಡಿದ್ದ ಬೆಳಗಾವಿ ಬಿಜೆಪಿ ಕಾರ್ಯಕರ್ತ ಹಾಗೂ ಗುತ್ತಿಗೆದಾರ ಸಂತೋಷ್ ಪಾಟೀಲ್ ತಾನು ಆತ್ಮಹತ್ಯೆಗೆ ಶರಣಾಗಿದ್ದಾರೆ. ತಡರಾತ್ರಿ ಮಾಧ್ಯಮ ಪ್ರತಿನಿಧಿಗಳಿಗೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವಾಟ್ಸಪ್ ಸಂದೇಶ ರವಾನಿಸಿ ಉಡುಪಿಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಹೌದು ಸಂತೋಷ್ ಪಾಟೀಲ್ ಕಳುಹಿಸಿರುವ ವಾಟ್ಸಪ್ ಸಂದೇಶದ ಬಗ್ಗೆ ಮಾಧ್ಯಮಪ್ರತಿನಿಧಿಗಳು ಬೆಳಗಾವಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಕೂಡಲೇ, ಅವರಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದರು. ಹೀಗಿರುವಾಗ ಉಡುಪಿಯ ಲಾಡ್ಜ್‌ವೊಂದರಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಸಂತೋಷ್ ಪಾಟೀಲ್  ಪತ್ತೆಯಾಗಿದ್ದಾರೆ. 

Provocative Statement: ಸಚಿವ ಈಶ್ವರಪ್ಪ ವಿರುದ್ಧ ಎಫ್‌ಐಆರ್‌

ಮೊಬೈಲ್‌ನಲ್ಲಿ ವಾಟ್ಸಾಪ್  ಸಂದೇಶ ಕಳುಹಿಸಿದ್ದ ಸಂತೋಷ್ ಪಾಟೀಲ್ ನನ್ನ ಸಾವಿಗೆ ಕೆ.ಎಸ್.ಈಶ್ವರಪ್ಪ ಕಾರಣ ಎಂದು ಉಲ್ಲೇಖಿಸಿದ್ದರು. ಈಶ್ವರಪ್ಪ ಅವರಿಗೆ ಶಿಕ್ಷೆಯಾಗಬೇಕು. ನನ್ನೆಲ್ಲಾ ಆಸೆ ಬದಿಗೊತ್ತಿ ಆತ್ಮಹತ್ಯೆ ನಿರ್ಧಾರ ಮಾಡಿದ್ದೇನೆ. ನನ್ನ ಹೆಂಡತಿ ಮಕ್ಕಳಿಗೆ ಪ್ರಧಾನಿಗಳು, ಮುಖ್ಯಮಂತ್ರಿಗಳು, ಬಿ.ಎಸ್.ಯಡಿಯೂರಪ್ಪ ಸಹಾಯ ಮಾಡಬೇಕೆಂದು ಪತ್ರದಲ್ಲಿ ತಿಳಿಸಿದ್ದರು. ಇನ್ನು ಈಗಾಗಲೇ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡ ಕೋಣೆಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು ಬೀಡುಬಿಟ್ಟಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ನೇತೃತ್ವದಲ್ಲಿ ಸಂತೋಷ್ ಸ್ನೇಹಿತರ ವಿಚಾರಣೆ ಆರಂಭವಾಗಿದೆ.

ಆತ್ಮಹತ್ಯೆ ಪತ್ರದಲ್ಲೇನಿದೆ?

ನನ್ನ ಸಾವಿಗೆ ನೇರ ಕಾರಣ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಕೆ.ಎಸ್. ಈಶ್ವರಪ್ಪ. ಕರ್ನಾಟಕ ಸರ್ಕಾರದಿಂದ ಇವರಿಗೆ ತಕ್ಕ ಶಿಕ್ಷೆ ಆಗಬೇಕು. ನನ್ನೆಲ್ಲಾ ಆಸೆಗಳನ್ನು ಬದಿಗೊತ್ತಿ ಈ ನಿರ್ಧಾರ ಮಾಡಿರುತ್ತೇನೆ. ನನ್ನ ಹೆಂಡತಿ ಮಗುವಿಗೆ ಸರ್ಕಾರ ಅಂದರೆ ಮಾನ್ಯ ಪ್ರಧಾನ ಮಂತ್ರಿಗಳು ಹಾಗೂ ಮಾನ್ಯ ಮುಖ್ಯ ಮಂತ್ರಿಗಳು ಹಾಗೂ ನಮ್ಮ ಹಿರಿಯ ಲಿಂಗಾಯತ ನಾಯಕರಾದ ಬಿ.ಎಸ್.ಯಡಿಯೂರಪ್ಪನವರು ಹಾಗೆ ಅವರಿವರೆನ್ನದೇ ಎಲ್ಲರು ಸಹಾಯಹಸ್ತ ನೀಡಬೇಕೆಂದು ಕೈ ಮುಗಿದು ಕೇಳಿಕೊಳ್ಳುತ್ತೇನೆ. ಮಾಧ್ಯಮ ಮಿತ್ರರಿಗೆ ಕೋಟಿ ಕೋಟಿ ಧನ್ಯವಾದಗಳು. ನನ್ನ ಜೊತೆ ಬಂದ ನನ್ನ ಗೆಳಯರಾದ ಸಂತೋಷ್ ಮತ್ತು ಪ್ರಶಾಂತ್‍ಗೆ ನಾನು ಪ್ರವಾಸ ಹೋಗೋಣ ಎಂದು ನನ್ನ ಜೊತೆಗೆ ಕರೆದುಕೊಂಡ ಬಂದಿರುತ್ತೇನೆ ಅಷ್ಟೇ. ಅವರಿಗೂ ನನ್ನ ಸಾವಿಗೂ ಯಾವುದೇ ಸಂಬಂಧ ಇರುವುದಿಲ್ಲ ಎಂದಿದ್ದಾರೆ.

Provocative Statement: ಸಚಿವ ಈಶ್ವರಪ್ಪ ವಿರುದ್ಧ ಎಫ್‌ಐಆರ್‌

ಆಪ್‌ ಕಾರ್ಯಕರ್ತರಿಂದ ಪ್ರತಿಭಟನೆ, ಪೊಲೀಸರ ವಶಕ್ಕೆ

ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ಸಚಿವ ಈಶ್ವರಪ್ಪ ಅವರಿಗೆ ಹೊಸ ಉರುಳಾಗಿ ಪರಿಣಮಿಸುವ ಸಾಧ್ಯತೆಗಳಿವೆ. ಬಿಜೆಪಿ ಜಿಲ್ಲಾ ಮಟ್ಟದ ಪದಾಧಿಕಾರಿಗಳ ಸಭೆ ಹಿನ್ನೆಲೆಯಲ್ಲಿ ಬೆಳಗಾವಿಯ ಖಾಸಗಿ ಹೋಟೆಲ್‌ನಲ್ಲಿ ಅರುಣ್ ಸಿಂಗ್, ಬಿಎಸ್‌ವೈ ತಂಗಿದ್ದಾರೆ. ಈ ನಡುವೆ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ಬೆಳಕಿಗೆ ಬಂದಿದ್ದು, ನಾಯಕರು ತಂಗಿರುವ ಹೋಟೆಲ್‌ಗೆ ಆಪ್ ಕಾರ್ಯಕರ್ತರು ಮತ್ತಿಗೆ ಹಾಕಿ, ಸಚಿವ ಈಶ್ವರಪ್ಪ, ಬಿಎಸ್‌ವೈ, ಅರುಣ್ ಸಿಂಗ್ ವಿರುದ್ಧ ಆಪ್ ಕಾರ್ಯಕರ್ತರ ಘೋಷಣೆ ಕೂಗಿದ್ದಾರೆ. ಈ ಹಿನ್ನೆಲೆ ತಿಭಟನೆ ನಡೆಸುತ್ತಿರುವ ಆಪ್ ಕಾರ್ಯಕರ್ತರನ್ನು ಪೊಲೀಸರು ವಶಕಕ್ಕೆ ಪಡೆದಿದ್ದಾರೆ. 

ಸಂತೋಷ ಪಾಟೀಲ್‌ಗೂ ಬಿಜೆಪಿಗೂ ಸಂಬಂಧ ಇಲ್ಲ,ಆತ ಫ್ರಾಡ್ ವ್ಯಕ್ತಿ

ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಗುತ್ತಿಗೆದಾರನಿಂದ 40 ಪರ್ಸೆಂಟ್ ಕಮಿಷನ್ ಬೇಡಿಕೆ ಆರೋಪ ವಿಚಾರ ಪ್ರತಿಕ್ರಿಯಿಸಿರುವ ಬಿಜೆಪಿ ಮುಖಂಡ ಧನಂಜಯ ಜಾಧವ್ ಐದು ವರ್ಷಗಳ ಹಿಂದೆ ರಾಹುಲ್ ಗಾಂಧಿ ಬೋಗಸ್ ಸಹಿ ಮಾಡಿ ಹಿರೇಬಾಗೇವಾಡಿ ಜಿ.ಪಂ. ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಕೇಳಿದ್ದ. ಅಷ್ಟೇ ಅಲ್ಲದೇ ವರ್ಕ್ ಆರ್ಡರ್ ಇಲ್ಲದೇ ಬೇರೆ ಗುತ್ತಿಗೆದಾರರಿಂದ ಕೆಲಸ ಮಾಡಿಸಿದ್ದಾನೆ. ಬೇರೆ 12 ಗುತ್ತಿಗೆದಾರರಿಂದ ಕೆಲಸ ಮಾಡಿಸಿದ್ದು ಅವರ ಬಳಿ 92 ಲಕ್ಷ ಹಣ ಪಡೆದಿದ್ದಾನೆ. ಹಿಂಡಲಗಾ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕೆಲಸ ಮಾಡಿಸಿದ್ದು ನಿಜ, ನಿಮಗೆ ಬಿಲ್ ಮಂಜೂರು ಮಾಡಿಸಿ ಕೊಡ್ತೀನಿ ಅಂತಾ 92 ಲಕ್ಷ ಹಣ ಪಡೆದಿದ್ದಾನೆ. ಆ ಎಲ್ಲ ಗುತ್ತಿಗೆದಾರರು ನನ್ನ ಬಳಿ ಬಂದಿದ್ರು, ದೂರು ನೀಡಲು ಹೇಳಿದ್ದೆ ಎಂದಿದ್ದಾರೆ.

Karnataka Politics: ರಾಹುಲ್ ಕರ್ನಾಟಕ ಪ್ರವಾಸ ಬಂದ್ರೆ ಖರ್ಚೆಲ್ಲ ನಂದೇ ಎಂದ ಈಶ್ವರಪ್ಪ

ಅಲ್ಲದೇ ಆತ ಮೂಲತಃ ಬಡಸ ಕೆ.ಹೆಚ್. ಗ್ರಾಮದವ ವಿಜಯನಗರದಲ್ಲಿ ಎರಡು ಮನೆಗಳಿವೆ, ಸಚಿವ ಕೆ.ಎಸ್‌.ಈಶ್ವರಪ್ಪ ಗಮನಕ್ಕೆ ಇದನ್ನ ತಂದಿದ್ದು ಅವರು ವಿಚಾರಿಸುತ್ತಿದ್ದಾರೆ. ಈಗ ಏನು ಘಟನೆಗಳು ನಡೆಯುತ್ತಿವೆ ಅದರ ಹಿಂದೆ ಯಾರೋ ದೊಡ್ಡ ವ್ಯಕ್ತಿ ಇದ್ದಾರೆ ಎಂದು ಬೆಳಗಾವಿ ಗ್ರಾಮೀಣ ಬಿಜೆಪಿ ಮಂಡಲ ಅಧ್ಯಕ್ಷ ಧನಂಜಯ ಜಾಧವ್.

Latest Videos
Follow Us:
Download App:
  • android
  • ios