ಸಾಮಾಜಿಕ ಜಾಲತಾಣದಲ್ಲಿ ಮುಸ್ಲಿಂ ಧರ್ಮಗ್ರಂಥ ಕುರಾನ್ ವಿರುದ್ಧ ಅವಹೇಳನಕಾರಿ ಕಾಮೆಂಟ್ ಮಾಡಿದ ಘಟನೆಯ ಹಿನ್ನೆಲೆಯಲ್ಲಿ ಬೆಳಗಾವಿಯ ಶಹಾಪುರ ಪೊಲೀಸ್ ಠಾಣೆಯ ಮುಂದೆ ಸಾವಿರಾರು ಮುಸ್ಲಿಂ ಯುವಕರು ಜಮಾಯಿಸಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ

ಬೆಳಗಾವಿ (ಮೇ.18): ಸಾಮಾಜಿಕ ಜಾಲತಾಣದಲ್ಲಿ ಮುಸ್ಲಿಂ ಧರ್ಮಗ್ರಂಥ ಕುರಾನ್ ವಿರುದ್ಧ ಅವಹೇಳನಕಾರಿ ಕಾಮೆಂಟ್ ಮಾಡಿದ ಘಟನೆಯ ಹಿನ್ನೆಲೆಯಲ್ಲಿ ಬೆಳಗಾವಿಯ ಶಹಾಪುರ ಪೊಲೀಸ್ ಠಾಣೆಯ ಮುಂದೆ ಸಾವಿರಾರು ಮುಸ್ಲಿಂ ಯುವಕರು ಜಮಾಯಿಸಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಫೇಕ್ ಖಾತೆ ಸೃಷ್ಟಿಸಿ ಈ ಕೃತ್ಯವೆಸಗಿದ ಆರೋಪಿಯನ್ನು ತಕ್ಷಣ ಬಂಧಿಸುವಂತೆ ಒತ್ತಾಯಿಸಿ, ಆರೋಪಿ ವಶಕ್ಕೆ ಪಡೆಯುವವರಿಗೆ ಸ್ಥಳ ಬಿಟ್ಟು ಕದಲುವುದಿಲ್ಲ ಎಂದು ಪ್ರತಿಭಟನಾಕಾರರು ಪಟ್ಟು ಹಿಡಿದರು.

ಪೊಲೀಸ್ ಠಾಣೆಗೆ ಮುತ್ತಿಗೆ:
ಶಹಾಪುರ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ ಸಮುದಾಯ ತೀವ್ರ ಪ್ರತಿಭಟನೆಯಿಂದಾಗಿ ವಾತಾವರಣ ಉದ್ವಿಗ್ನಗೊಂಡಿತ್ತು. ಸ್ಥಳಕ್ಕೆ ತಕ್ಷಣ ಭೇಟಿ ನೀಡಿದ ಡಿಸಿಪಿ ರೋಹನ್ ಜಗದೀಶ್, ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿ, ಆರೋಪಿಯನ್ನು ಶೀಘ್ರ ಬಂಧಿಸುವುದಾಗಿ ಭರವಸೆ ನೀಡಿದರು. ಡಿಸಿಪಿಯವರ ಭರವಸೆಯ ಬಳಿಕ ಮುಸ್ಲಿಂ ಯುವಕರು ತಮ್ಮ ಪ್ರತಿಭಟನೆಯನ್ನು ಕೈಬಿಟ್ಟಿದ್ದಾರೆ.
ಈ ಘಟನೆ ಶಹಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಆರೋಪಿಯನ್ನು ಪತ್ತೆಹಚ್ಚುವ ಕಾರ್ಯದಲ್ಲಿ ತೊಡಗಿದ್ದಾರೆ. 

ಇದನ್ನೂ ಓದಿ: ಸಂತಿಬಸ್ತವಾಡ ಮಸೀದಿ ಕುರಾನ್‌ ಸುಟ್ಟ ಪ್ರಕರಣ:ಮುಸ್ಲಿಮರ ಬೃಹತ್‌ ಪ್ರತಿಭಟನೆ

ಸಾಮಾಜಿಕ ಜಾಲತಾಣದಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಕೃತ್ಯಗಳು ಗಂಭೀರ ಸಮಸ್ಯೆಯಾಗಿದ್ದು, ಈ ಘಟನೆಯಿಂದ ಸ್ಥಳೀಯವಾಗಿ ಉದ್ವಿಗ್ನ ವಾತಾವರಣ ಸೃಷ್ಟಿಯಾಗಿದೆ. ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದು, ಶಾಂತಿ ಕಾಪಾಡಲು ಎಲ್ಲ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.