Asianet Suvarna News Asianet Suvarna News

ಬಿಜೆಪಿ ಅಧಿಕಾರದಲ್ಲಿದ್ದ 4 ವರ್ಷ ಬೆಂಗ್ಳೂರಿನ ಗುಂಡಿ ಮುಚ್ಚಲಾಗಲಿಲ್ಲ: ಸಿಎಂ ತಿರುಗೇಟು!

ಬಿಜೆಪಿ ನಾಲ್ಕು ವರ್ಷ ಅಧಿಕಾರದಲ್ಲಿದ್ದು ಗುಂಡಿ ಮುಚ್ಚಲಾಗಲಿಲ್ಲ. ನಾವು ಅಧಿಕಾರಕ್ಕೆ ಬಂದು 6 ತಿಂಗಳಾಯಿತು. ಬಿಜೆಪಿ ಬ್ರಾಂಡ್ ಬೆಂಗಳೂರು ಮಾಡಿದ್ದಾರೆಯೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.

Belagavi winte session why didnt closed bengaluru road patholes when bjp pawer in 4 years CM Siddaramaiah rav
Author
First Published Dec 7, 2023, 6:12 AM IST

ಬೆಳಗಾವಿ (ಡಿ.7) :  ಬಿಜೆಪಿ ನಾಲ್ಕು ವರ್ಷ ಅಧಿಕಾರದಲ್ಲಿದ್ದು ಗುಂಡಿ ಮುಚ್ಚಲಾಗಲಿಲ್ಲ. ನಾವು ಅಧಿಕಾರಕ್ಕೆ ಬಂದು 6 ತಿಂಗಳಾಯಿತು. ಬಿಜೆಪಿ ಬ್ರಾಂಡ್ ಬೆಂಗಳೂರು ಮಾಡಿದ್ದಾರೆಯೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.

ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬ್ರಾಂಡ್ ಬೆಂಗಳೂರು ಕುರಿತಂತೆ ಸರಿಯಾಗಿ ಕೆಲಸ ಆಗುತ್ತಿಲ್ಲ ಎಂದು ಬಿಜೆಪಿ ಆರೋಪಿಸಿದೆ. ಉಚ್ಚ ನ್ಯಾಯಾಲಯ ಬಿಜೆಪಿಯವರಿಗೆ ಗುಂಡಿ ಮುಚ್ಚಿಲ್ಲ ಎಂದು ಛೀಮಾರಿ ಹಾಕಿದೆ. ಅವರಿಗೆ ಬೆಂಗಳೂರಿನ ಬಗ್ಗೆ ಮಾತನಾಡಲು ಯಾವ ನೈತಿಕ ಹಕ್ಕಿದೆ ಎಂದು ಕಿಡಿಕಾರಿದರು.

ಇಂದು ತೆಲಂಗಾಣ ಸಿಎಂ ಪದಗ್ರಹಣಕ್ಕೆ ಸಿದ್ದರಾಮಯ್ಯ, ಡಿಕೆಶಿ ಸೇರಿ ತೆರಳಲಿದೆ ಸಚಿವರ ದಂಡು!

ರಾಜಕೀಯನೂ ಬೇಕಲ್ಲ?: ಉತ್ತರ ಕರ್ನಾಟಕದಲ್ಲಿ ಸದನ ನಡೆಯುತ್ತಿದ್ದು, ಸಚಿವರು ತೆಲಂಗಾಣದಲ್ಲಿದ್ದಾರೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಮಂತ್ರಿಗಳು ಎಲ್ಲರೂ ಅಲ್ಲಿಲ್ಲ, ಒಂದಿಬ್ಬರು ಹೋಗಿದ್ದಾರೆ. ರಾಜಕೀಯವನ್ನೂ ಮಾಡಬೇಕಲ್ಲ. ಜಮೀರ್ ಅಹ್ಮದ್ ಹಾಗೂ ಡಿ.ಕೆ.ಶಿವಕುಮಾರ್ ಇಬ್ಬರು ಬರಬೇಕಷ್ಟೆ. ಬಹುತೇಕ ಜನ ವಾಪಸ್‌ ಬಂದಿದ್ದಾರೆ ಎಂದು ತಿಳಿಸಿದರು.

ಎಚ್‌ಡಿಕೆಗೆ ತಿರುಗೇಟು: ಅಭಿವೃದ್ಧಿ ಭಾಷಣವಿಲ್ಲ, ಸಿದ್ದರಾಮಯ್ಯ ಕೇವಲ ಓಲೈಕೆ ಭಾಷಣ ಮಾಡುತ್ತಾರೆಂಬ ಎಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಅದೆಲ್ಲ ನಿಮ್ಮಿಂದಲೇ ಆಗಿದೆ. ಎಲ್ಲ ಸಮುದಾಯಗಳು ಒಳಗೊಂಡಂತೆ ಮುಸ್ಲಿಮರನ್ನು ರಕ್ಷಣೆ ಮಾಡಲಾಗುವುದು ಎಂದರು.

ಪರೀಕ್ಷಾ ಅಕ್ರಮಕ್ಕೆ 10 ಕೋಟಿ ದಂಡ, 12 ವರ್ಷ ಜೈಲು, ಮಸೂದೆ ಮಂಡನೆ!

Follow Us:
Download App:
  • android
  • ios