ಬೆಳಗಾವಿ ಅಧಿವೇಶನ ವೇಳೆ ಪ್ರತಿಭಟನೆಗೆ ಬ್ರೇಕ್ ಹಾಕುವಂತೆ ಸಿಎಂಗೆ ಸಭಾಪತಿ ಪತ್ರ!
ಬೆಳಗಾವಿಯಲ್ಲಿ ನಡೆಯಲಿರುವ ಅಧಿವೇಶನ ಸಂದರ್ಭದಲ್ಲಿ ಯಾವುದೇ ಪ್ರತಿಭಟನೆಗಳಿಗೆ ಅವಕಾಶ ನೀಡದೆ, ಪ್ರತಿಭಟನೆಗಳಿಗೆ ಸಂಪೂರ್ಣ ಬ್ರೇಕ್ ಹಾಕುವಂತೆ ಸಭಾಪತಿ ಬಸವರಾಜ್ ಹೊರಟ್ಟಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ಬರೆದು ಸಲಹೆ ನೀಡಿದ್ದಾರೆ.

ಬೆಂಗಳೂರು (ನ.21): ಬೆಳಗಾವಿಯಲ್ಲಿ ನಡೆಯಲಿರುವ ಅಧಿವೇಶನ ಸಂದರ್ಭದಲ್ಲಿ ಯಾವುದೇ ಪ್ರತಿಭಟನೆಗಳಿಗೆ ಅವಕಾಶ ನೀಡದೆ, ಪ್ರತಿಭಟನೆಗಳಿಗೆ ಸಂಪೂರ್ಣ ಬ್ರೇಕ್ ಹಾಕುವಂತೆ ಸಭಾಪತಿ ಬಸವರಾಜ್ ಹೊರಟ್ಟಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ಬರೆದು ಸಲಹೆ ನೀಡಿದ್ದಾರೆ.
ಪ್ರತಿವರ್ಷ ಬೆಳಗಾವಿಯಲ್ಲಿ ಹತ್ತು ದಿನಗಳ ಕಾಲ ಚಳಿಗಾಲದ ಅಧಿವೇಶನ ನಡೆಯುತ್ತದೆ. ಆದರೆ ಅಧಿವೇಶನದ ಸಂದರ್ಭದಲ್ಲಿ ಪ್ರತಿಭಟನೆ ಸರ್ವೇಸಾಮಾನ್ಯ ಎಂಬಂತಾಗಿದೆ. ಇದರಿಂದಾಗಿ ಇದರಿಂದಾಗಿ ಅಧಿವೇಶನ ಅರ್ಥ ಕಳೆದುಕೊಳ್ಳುತ್ತಿದೆ. ಈ ಬಾರಿಯಾದರೂ ಪ್ರತಿಭಟನೆಗಳು ನಡೆಯದಂತೆ ನೋಡಿಕೊಳ್ಳಿ. ಅಧಿವೇಶನ ಆರಂಭಕ್ಕೂ ಮುನ್ನ ವಿವಿಧ ಸಂಘಟನೆಗಳ ಜೊತೆ ಸಭೆ ಮಾಡಿ. ಅವರ ಬೇಡಿಕೆಗಳ ಬಗ್ಗೆ ಚರ್ಚೆ ಮಾಡಿ ಪರಿಹಾರಕ್ಕೆ ಕ್ರಮ ತೆಗೆದುಕೊಳ್ಳಿ. ಆ ಮೂಲಕ ಪ್ರತಿಭಟನೆ ಗಳು ನಡೆಯದಂತೆ ನೋಡಿಕೊಳ್ಳಿ ಎಂದು ಸರ್ಕಾರಕ್ಕೆ ಸಲಹೆ ನೀಡಿರುವ ಸಭಾಪತಿ ಬಸವರಾಜ್ ಹೊರಟ್ಟಿ.
'ನಿಮ್ಮಿಂದಾಗಿ ನಾನು ಸುರಕ್ಷಿತವಾಗಿ ಊರಿಗೆ ಬಂದೆ'; ಸುವರ್ಣನ್ಯೂಸ್‌ಗೆ ಧನ್ಯವಾದ ತಿಳಿಸಿದ ಚಂದ್ರಶೇಖರ್
ಈಗಾಗಲೇ ಬೆಳಗಾವಿ ಅಧಿವೇಶನದಲ್ಲಿ ಸರ್ಕಾರವನ್ನು ಕಟ್ಟಿಹಾಕಲು ಮುಂದಾಗಿರುವ ಪ್ರತಿಪಕ್ಷಗಳು ಹಾಗೂ ವಿವಿಧ ಸಂಘಟನೆಗಳು. ಬರ ಪರಿಹಾರ, ಕಾವೇರಿ ನೀರು ವಿವಾದ, ಗ್ಯಾರಂಟಿ ಯೋಜನೆ ಫಲಾನುಭವಿಗಳಿಗೆ ತಲುಪದಿರುವುದು ಸೇರಿದಂತೆ ಹಲವು ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಪ್ರತಿಭಟನೆಗೆ ಮುಂದಾಗಿರುವ ಸಂಘಟನೆಗಳು. ಅಧಿವೇಶನಕ್ಕೆ ಮೊದಲೇ ಪರಿಹಾರ ಕಂಡುಕೊಳ್ಳದಿದ್ದರೆ ಪ್ರತಿಭಟನೆಗಳು ನಡೆಯುವುದು ನಿಶ್ಚಿತವಾಗಿದೆ.
ಕಠಿಣ ಕ್ರಮಕ್ಕೆ ಮುಂದಾದ ರಾಜ್ಯ ಸರ್ಕಾರ; ಪರೀಕ್ಷಾ ಅಕ್ರಮಕ್ಕೆ 10 ಕೋಟಿ ದಂಡ, 12 ವರ್ಷ ಜೈಲು!