Asianet Suvarna News Asianet Suvarna News

ಬೆಳಗಾವಿ ಮಹಿಳೆ ವಿವಸ್ತ್ರಗೊಳಿಸಿದ ಪ್ರಕರಣ, 5 ಲಕ್ಷ ಪರಿಹಾರದ ಬೆನ್ನಲ್ಲೇ 2 ಎಕರೆ ಜಮೀನು ಮಂಜೂರು

ಬೆಳಗಾವಿ ಜಿಲ್ಲೆಯ ಹೊಸ ವಂಟಮುರಿ ಗ್ರಾಮದಲ್ಲಿ ಇತ್ತೀಚೆಗೆ ಬೆತ್ತಲೆ ಮೆರವಣಿಗೆಗೆ ಒಳಗಾದ ಸಂತ್ರಸ್ತ ಮಹಿಳೆಗೆ ₹5 ಲಕ್ಷ ರು. ಪರಿಹಾರ ಘೋಷಿಸಿದ್ದ ರಾಜ್ಯ ಸರ್ಕಾರ ಇದೀಗ 2.03 ಎಕರೆ ಜಮೀನು ಮಂಜೂರು ಮಾಡಿ ಆದೇಶಿಸಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

Belgavi woman disrobed case 2 acre land allotted by karnataka govt after compensation of 5 lakhs rav
Author
First Published Dec 17, 2023, 7:45 AM IST

ಬೆಳಗಾವಿ (ಡಿ.17): ಬೆಳಗಾವಿ ಜಿಲ್ಲೆಯ ಹೊಸ ವಂಟಮುರಿ ಗ್ರಾಮದಲ್ಲಿ ಇತ್ತೀಚೆಗೆ ಬೆತ್ತಲೆ ಮೆರವಣಿಗೆಗೆ ಒಳಗಾದ ಸಂತ್ರಸ್ತ ಮಹಿಳೆಗೆ ₹5 ಲಕ್ಷ ರು. ಪರಿಹಾರ ಘೋಷಿಸಿದ್ದ ರಾಜ್ಯ ಸರ್ಕಾರ ಇದೀಗ 2.03 ಎಕರೆ ಜಮೀನು ಮಂಜೂರು ಮಾಡಿ ಆದೇಶಿಸಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ದೌರ್ಜನ್ಯಕ್ಕೆ ಒಳಗಾಗಿರುವ ಕಾಕತಿ ಪೊಲೀಸ್ ಠಾಣೆ ವ್ಯಾಪ್ತಿಯ ಹೊಸ ವಂಟಮುರಿ ಗ್ರಾಮದ ಸಂತ್ರಸ್ತೆಗೆ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ ಭೂ ಒಡೆತನ ಯೋಜನೆಯಡಿ ಜಮೀನು ಮಂಜೂರು ಆದೇಶಿಸಲಾಗಿದೆ ಎಂದಿದ್ದಾರೆ.

ಬೆಳಗಾವಿ: ಮಹಿಳೆ ವಿವಸ್ತ್ರಗೊಳಿಸಿದ ಪ್ರಕರಣ, ಪೊಲೀಸ್‌ ಇನ್ಸಪೆಕ್ಟರ್‌ ಸಸ್ಪೆಂಡ್‌

ವಿಶೇಷ ಪ್ರಕರಣದಡಿ ಒತ್ತು: ಪರಿಶಿಷ್ಟ ವರ್ಗಗಳ ಕಲ್ಯಾಣ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಚಿವರಾದ ಬಿ. ನಾಗೇಂದ್ರ ಅವರು ಇದನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ತಕ್ಷಣವೇ ಜಮೀನು ಮಂಜೂರಾತಿಗೆ ನಿರ್ದೇಶನ ನೀಡಿದ್ದರು.  ನೊಂದ ಮಹಿಳೆಗೆ ಆರ್ಥಿಕ ಸ್ಥಿರತೆ ನೀಡುವ ದೃಷ್ಟಿಯಿಂದ ಜಮೀನು ಮಂಜೂರು ಮಾಡಿ ಅನುಮೋದನೆ ನೀಡಲಾಗಿದೆ ಎಂದು ಸಚಿವರು ಹೇಳಿದ್ದಾರೆ. 

ಇನ್ನು, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದಲೂ ಸಹ ₹50 ಸಾವಿರ ಪರಿಹಾರ ಘೋಷಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.

Follow Us:
Download App:
  • android
  • ios