Asianet Suvarna News Asianet Suvarna News

ಒಂದು ರೂ. ಭ್ರಷ್ಟಾಚಾರ ಮಾಡಿಲ್ಲ: ಮಾರಿಗುಡಿಯಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಪ್ರಮಾಣ!

ಭ್ರಷ್ಟಾಚಾರ ಆರೋಪಗಳನ್ನು ಎದುರಿಸುತ್ತಿರುವ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ, ಇಂದು ಬೆಳಿಗ್ಗೆ ಬೆಳ್ತಂಗಡಿ ಮಾರಿಗುಡಿಯಲ್ಲಿ ಭ್ರಷ್ಟಾಚಾರ ನಡೆಸಿಲ್ಲ ಎಂಬುದಾಗಿ ದೇವರ ಮುಂದೆ ಪ್ರಮಾಣ ಮಾಡಿದ್ದಾರೆ.

Belthangadi mla harish poonja swears no corruption in marigudi temple rav
Author
First Published Aug 14, 2024, 11:18 AM IST | Last Updated Aug 14, 2024, 11:18 AM IST

ಭರತ್ ರಾಜ್ ಏಷ್ಯಾನೆಟ್ ಸುವರ್ಣ ನ್ಯೂಸ್ ಮಂಗಳೂರು

ಬೆಳ್ತಂಗಡಿ (ಆ.14): ಭ್ರಷ್ಟಾಚಾರ ಆರೋಪಗಳನ್ನು ಎದುರಿಸುತ್ತಿರುವ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ, ಇಂದು ಬೆಳಿಗ್ಗೆ ಬೆಳ್ತಂಗಡಿ ಮಾರಿಗುಡಿಯಲ್ಲಿ ಭ್ರಷ್ಟಾಚಾರ ನಡೆಸಿಲ್ಲ ಎಂಬುದಾಗಿ ದೇವರ ಮುಂದೆ ಪ್ರಮಾಣ ಮಾಡಿದ್ದಾರೆ.

'ಒಂದು ರೂಪಾಯಿಯನ್ನೂ ಮುಟ್ಟಿಲ್ಲ, ಭ್ರಷ್ಟಾಚಾರ ಮಾಡಿಲ್ಲ, ಒಂದು ವೇಳೆ ತಪ್ಪುಮಾಡಿದ್ದರೆ, ತಕ್ಕ ಶಿಕ್ಷೆಯನ್ನು ಮಾರಿಗುಡಿಯ ಮಹಾದೇವಿ ನೀಡಲಿ' ಎಂದು ಪ್ರಮಾಣ ಮಾಡಿದ್ದಾರೆ. ಕಾಂಗ್ರೆಸ್ ಮುಖಂಡ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಶಾಸಕ ಪೂಂಜಾ ವಿರುದ್ಧ ಭ್ರಷ್ಟಾಚಾರ ಆರೋಪಗಳನ್ನು ಮಾಡಿದ್ದರು. ಬೆಳ್ತಂಗಡಿ ಪ್ರವಾಸಿ ಬಂಗಲೆ ಹಾಗೂ ಹೆದ್ದಾರಿ ಕಾಮಗಾರಿಯಲ್ಲಿ ಪೂಂಜಾ ಭ್ರಷ್ಟಾಚಾರ ಎಸಗಿದ್ದಾರೆಂದು ಹಾಗೂ 3 ಕೋಟಿ ರೂ. ಕಮಿಷನ್ ಪಡೆದು ಅಕ್ರಮಗಳನ್ನು ಎಸಗಿದ್ದಾರೆ ಎಂಬ ಗಂಭೀರ ಆರೋಪಗಳನ್ನು ಶಿವರಾಂ ಮಾಡಿದ್ದರು. ಆರೋಪಗಳಿಗೆ ಪ್ರತಿಯಾಗಿ, ಹರೀಶ್ ಪೂಂಜಾ ಮಾರಿಗುಡಿಯ ಮಹಾದೇವಿ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿ, ತೆಂಗಿನಕಾಯಿ ಒಡೆಯುವ ಮೂಲಕ ಭ್ರಷ್ಟಾಚಾರ ನಡೆಸಿಲ್ಲ ಎಂಬುದಾಗಿ ಪ್ರಮಾಣ ಮಾಡಿದ್ದಾರೆ. 'ನಾನು ಯಾವುದೇ ಅಕ್ರಮ ಎಸಗಿಲ್ಲ' ಎಂದು ಪೂಂಜಾ ಹೇಳಿದ್ದರು. ಆರೋಪಗಳನ್ನು ಮಾಡುತ್ತಿರುವ ರಕ್ಷಿತ್ ಶಿವರಾಂ ಸೇರಿದಂತೆ ಎಲ್ಲರಿಗೂ ತಕ್ಕ ಶಿಕ್ಷೆ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸಿದರು. ಈ ಸಂದರ್ಭ, ಬೆಳ್ತಂಗಡಿ ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ ರಾವ್ ಹಾಗೂ ಧರ್ಮಸ್ಥಳದ ಕೆಲವು ಪ್ರಮುಖ ನಾಯಕರು ಉಪಸ್ಥಿತರಿದ್ದರು.

Love Failure: ಆಳ್ವಾಸ್ ಕಾಲೇಜಿನ ಕ್ಲಾಸ್‌ ರೂಮ್‌ಗೆ ನುಗ್ಗಿ ಯುವತಿಗೆ ಕತ್ತರಿಯಲ್ಲಿ ಇರಿದ ಪಾಗಲ್ ಪ್ರೇಮಿ!

ಪ್ರಕರಣದ ಹಿನ್ನೆಲೆ ಏನು?

ಹರೀಶ್ ಪೂಂಜಾ ವಿರುದ್ಧದ ಭ್ರಷ್ಟಾಚಾರ ಆರೋಪಗಳು ಬೆಳ್ತಂಗಡಿ ಪ್ರವಾಸಿ ಮಂದಿರ ನಿರ್ಮಾಣ ಹಾಗೂ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಕಾಮಗಾರಿಗೆ ಸಂಬಂಧಿಸಿದ್ದಾಗಿದೆ. ಶಿವರಾಂ ಅವರ ಪ್ರಕಾರ, 7 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿದ್ದ ಪ್ರವಾಸಿ ಮಂದಿರದ ಕಾಮಗಾರಿ ಪೂರ್ಣಗೊಂಡ ನಂತರ ವರ್ಕ್ ಆರ್ಡರ್ ನೀಡಲಾಗಿದೆ ಮತ್ತು ಅನುದಾನವನ್ನು ಚುನಾವಣೆ ಪ್ರಚಾರಕ್ಕೆ ದುರುಪಯೋಗ ಮಾಡಲಾಗಿದೆ ಎಂದು ಶಿವರಾಂ ಆರೋಪಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ತನಿಖೆಗೆ ಮನವಿ ಮಾಡಿರುವುದಾಗಿ ಹಾಗೂ ಎಸ್‌ಐಟಿ ತನಿಖೆಗೂ ಸಹ ರಕ್ಷಿತ್ ಆಗ್ರಹಿಸಿದ್ದಾರೆ.

Latest Videos
Follow Us:
Download App:
  • android
  • ios