ಮೇಜರ್ ಸ್ವಾತಿ ಶಾಂತಕುಮಾರ್ ಅವರು ದಕ್ಷಿಣ ಸುಡಾನ್‌ನಲ್ಲಿನ ವಿಶ್ವಸಂಸ್ಥೆ ಶಾಂತಿಪಾಲನಾ ಪಡೆಯಲ್ಲಿನ ಸೇವೆಗಾಗಿ ವಿಶ್ವಸಂಸ್ಥೆ ಸೆಕ್ರೆಟರಿ ಜನರಲ್ ಪ್ರಶಸ್ತಿಯನ್ನು ಪಡೆದಿದ್ದಾರೆ. ಶಾಂತಿ ಸ್ಥಾಪನೆ ಮತ್ತು 5,000ಕ್ಕೂ ಹೆಚ್ಚು ಮಹಿಳೆಯರಿಗೆ ಸುರಕ್ಷತೆ ಒದಗಿಸಿದ ಅವರ ತಂಡದ ಸಾಧನೆ

ವಿಶ್ವಸಂಸ್ಥೆ: ಆಂತರಿಕ ಸಂಘರ್ಷ ಪೀಡಿತ ಆಫ್ರಿಕಾ ದೇಶವಾದ ದಕ್ಷಿಣ ಸುಡಾನ್‌ನಲ್ಲಿ ನಿಯೋಜಿಸಲಾಗಿರುವ ವಿಶ್ವಸಂಸ್ಥೆ ಶಾಂತಿಪಾಲನಾ ಪಡೆಗಳಲ್ಲಿ ಸಲ್ಲಿಸಿದ ಉತ್ತಮ ಸೇವೆ ಪರಿಗಣಿಸಿ ಬೆಂಗಳೂರು ಮೂಲದ ಮೇಜರ್ ಸ್ವಾತಿ ಶಾಂತಕುಮಾರ್‌ ಅವರಿಗೆ ವಿಶ್ವಸಂಸ್ಥೆ ಸೆಕ್ರೆಟರಿ ಜನರಲ್ ಪ್ರಶಸ್ತಿ ಲಭಿಸಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸದ್ಯ ದಕ್ಷಿಣ ಸುಡಾನ್‌ನಲ್ಲಿ ಸ್ವಾತಿ ಶಾಂತಕುಮಾರ್ ಸೇವೆ ಸಲ್ಲಿಸುತ್ತಿದ್ದು, ಅವರಿಗೆ ವಿಶ್ವಸಂಸ್ಥೆ ಮಹಾಪ್ರಧಾನ ಕಾರ್ಯದರ್ಶಿ ಆ್ಯಂಟೋನಿಯೊ ಗುಟೆರೆಸ್ ಅವರು ಈ ಪ್ರಶಸ್ತಿ ಘೋಷಿಸಿದ್ದಾರೆ.

‘ಸಮಾನ ಪಾಲುದಾರರು, ಶಾಶ್ವತ ಶಾಂತಿ’ ಎಂಬ ವಿಭಾಗದಲ್ಲಿ ಸ್ವಾತಿ ಈ ಗೌರವ ಪಡೆದಿದ್ದಾರೆ. ವಿಶ್ವದ ಎಲ್ಲ ವಿಶ್ವಸಂಸ್ಥೆ ಶಾಂತಿಪಾಲನಾ ಮಿಷನ್‌ಗಳು ಮತ್ತು ಏಜೆನ್ಸಿಗಳಿಂದ ಬಂದ ನಾಮನಿರ್ದೇಶನಗಳ ಪೈಕಿ ಅಂತಿಮವಾಗಿ 4

ತಂಡಗಳು ಆಯ್ಕೆಯಾಗಿದ್ದವು. ಈ ತಂಡಗಳ ಪೈಕಿ ಸ್ವಾತಿ ನೇತೃತ್ವದ ಭಾರತೀಯ ತಂಡ ಅತಿ ಹೆಚ್ಚು ಮತಗಳನ್ನು ಪಡೆದು ವಿಜೇತವಾಗಿದೆ.

ಸ್ವಾತಿ ಸಾಧನೆ ಏನು?:

ಮೇಜರ್ ಸ್ವಾತಿ ಅವರ ನೇತೃತ್ವದಲ್ಲಿ ಭಾರತೀಯ ತಂಡವು ಗ್ರಾಮೀಣ ಮಟ್ಟದಲ್ಲಿ ಶಾಂತಿ ಸ್ಥಾಪನೆಗೆ ಅಪಾರ ಕೊಡುಗೆ ನೀಡಿದೆ. ಅತ್ಯಂತ ದುರ್ಗಮ ಪ್ರದೇಶ ಹಾಗೂ ಕುಗ್ರಾಮಗಳಲ್ಲೂ ವಿವಿಧ ಗಸ್ತುಗಳನ್ನು ಯಶಸ್ವಿಯಾಗಿ ನಿಭಾಯಿಸಿದೆ. ಸಂಘರ್ಷ ಪೀಡಿತ ದೇಶದಲ್ಲಿ 5,000ಕ್ಕೂ ಹೆಚ್ಚು ಮಹಿಳೆಯರಿಗೆ ಸುರಕ್ಷಿತೆ ಒದಗಿಸಿದೆ. ಇದರಿಂದ ಮಹಿಳೆಯರ ಸಮುದಾಯದಲ್ಲಿ ಭಾಗವಹಿಸುವಿಕೆ ಹೆಚ್ಚಾಗಿದೆ ನಂಬಿಕೆ ಮತ್ತು ಸಂವಹನ ಬಲಗೊಂಡಿದೆ ಎಂದು ವಿಶ್ವಸಂಸ್ಥೆ ಪ್ರಕಟಣೆ ತಿಳಿಸಿದೆ.