Asianet Suvarna News Asianet Suvarna News

ತಿರುಪತಿ ತಿರುಮಲ ಟ್ರಸ್ಟ್​ ಸದಸ್ಯರಾಗಿ ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ನೇಮಕ

* ತಿರುಪತಿ ತಿರುಮಲ ಟ್ರಸ್ಟ್​ ಸದಸ್ಯರಾಗಿ ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ನೇಮಕ
* ಎಸ್.ಆರ್. ವಿಶ್ವನಾಥ್ ಅವರನ್ನು  TTD ಟ್ರಸ್ಟ್  ಸದಸ್ಯರನ್ನಾಗಿ ನೇಮಕ ಮಾಡಿ ಆಂಧ್ರ ಸಿಎಂ ಆದೇಶ
* ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿಗೆ ಧನ್ಯವಾದ ತಿಳಿಸಿದ ವಿಶ್ವನಾಥ್

Bengaluru BJP MLA sr vishwanath appointed as Tirumala Tirupati Trust  member rbj
Author
Bengaluru, First Published Sep 15, 2021, 10:39 PM IST
  • Facebook
  • Twitter
  • Whatsapp

ಬೆಂಗಳೂರು, (ಸೆ.15): ತಿರುಪತಿ ತಿರುಮಲ ಟ್ರಸ್ಟ್​ ಸದಸ್ಯರಾಗಿ ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ಆಯ್ಕೆಯಾಗಿದ್ದಾರೆ.

ಯಲಹಂಕ ಕ್ಷೇತ್ರದ ಶಾಸಕರು ಮತ್ತು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿರುವ ಎಸ್.ಆರ್. ವಿಶ್ವನಾಥ್ ಅವರನ್ನು  ತಿರುಮಲ ತಿರುಪತಿ ಟ್ರಸ್ಟ್  ಸದಸ್ಯರನ್ನಾಗಿ ನೇಮಕ ಮಾಡಿ ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್. ಜಗನ್ ಆದೇಶ ಹೊರಡಿಸಿದ್ದಾರೆ. 

ಈ ಹಿಂದೆ ಬೆಂಗಳೂರಿನ ತಿರುಮಲ ತಿರುಪತಿ ಟ್ರಸ್ಟ್‌ ನ ಸ್ಥಳೀಯ ಸಲಹಾ ಮಂಡಳಿಯ ಉಪಾಧ್ಯಕ್ಷರಾಗಿ ವಿಶ್ವನಾಥ್ ಅವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು.

ತಮ್ಮನ್ನು ಈ ಹುದ್ದೆಗೆ ನೇಮಕ ಮಾಡಿರುವುದಕ್ಕೆ ವಿಶ್ವನಾಥ್ ಅವರು ಆಂಧ್ರ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಟಿಟಿಡಿ ಅಧ್ಯಕ್ಷ ಸುಬ್ಬಾರೆಡ್ಡಿ ಮತ್ತು ಆಂಧ್ರಪ್ರದೇಶ ಸರ್ಕಾರದ ಪಂಚಾಯತ್ ರಾಜ್ ಮತ್ತು ಗಣಿ ಸಚಿವ ರಾಮಚಂದ್ರರೆಡ್ಡಿ ಅವರಿಗೆ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.

Follow Us:
Download App:
  • android
  • ios