ರಾಮೇಶ್ವರಂ ಕೆಫೆ  ಘಟನೆಯ ಸಂಪೂರ್ಣ ಸತ್ಯ ಹೊರಗೆ ಬರಲಿ. ತಂತ್ರಜ್ಞಾನದ ಸಾಧ್ಯತೆಗಳನ್ನು ತನಿಖೆಯಲ್ಲಿ ಪರಿಣಾಮಕಾರಿಯಾಗಿ ಬಳಸಿ. ಜನಸಂದಣಿ ಪ್ರದೇಶದಲ್ಲಿ ಭಧ್ರತೆ ಹೆಚ್ಚಿಸುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಬೆಂಗಳೂರು (ಮಾ.2): ರಾಮೇಶ್ವರಂ ಕೆಫೆ ಘಟನೆಯ ಸಂಪೂರ್ಣ ಸತ್ಯ ಹೊರಗೆ ಬರಲಿ. ತಂತ್ರಜ್ಞಾನದ ಸಾಧ್ಯತೆಗಳನ್ನು ತನಿಖೆಯಲ್ಲಿ ಪರಿಣಾಮಕಾರಿಯಾಗಿ ಬಳಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಗೃಹ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ಶನಿವಾರ ಸಭೆ ನಡೆಸಿದ ಅವರು, ಜನನಿಬಿಡ ಸ್ಥಳಗಳನ್ನು ಗುರುತಿಸಿ ಅಂಥ ಪ್ರದೇಶಗಳಲ್ಲಿ ಪೊಲೀಸ ಗಸ್ತು ಹೆಚ್ಚಿಸಿ. ಜನರಿಗೆ ರಕ್ಷಣೆ ಒದಗಿಸಬೇಕು. ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಬೇಕು. ಜೊತೆಗೆ, ಇಂಥ ಪ್ರಕರಣಗಳು ಮರುಕಳಿಸದಂತೆ ಎಚ್ಚರ ವಹಿಸಬೇಕು. ಪೊಲೀಸರು ಇಂಥ ಘಟನೆ ನಡೆದಾಗ ಎಚ್ಚರಿಕೆ ವಹಿಸಿ ನಂತರ ಮರೆಯುವುದಾಗಬಾರದು. ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹಬ್ಬಿಸಿ ಜನರ ದಾರಿ ತಪ್ಪಿಸುವ ಕೆಲಸವನ್ನು ಮಟ್ಟ ಹಾಕುವಂತೆ ಸೂಚನೆ ನೀಡಿದರು. 

ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ವೇಳೆ ಡಮ್ಮಿ ಫೋನ್ ಬಳಕೆ? ನೆಟ್ವರ್ಕ್ ಟ್ರೇಸ್‌ನಲ್ಲಿ ಪೊಲೀಸರ ದಿಕ್ಕು ತಪ್ಪಿಸಲು ಸಂಚು!

ಸಮಾಜ ದ್ರೋಹಿಗಳ ಬಗ್ಗೆ ಯಾವುದೇ ಸಹಾನುಭೂತಿ ಬೇಡ: ರಾಜ್ಯದಲ್ಲಿ ಇಂಟೆಲಿಜೆನ್ಸ್ ಹೆಚ್ಚು ಜಾಗೃತವಾಗಿರಬೇಕು. ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡುವ ಸಮಾಜ ದ್ರೋಹಿಗಳ ಬಗ್ಗೆ ಯಾವುದೇ ಸಹಾನುಭೂತಿ ಇಲ್ಲದೇ ಕ್ರಮ ಜರುಗಿಸಬೇಕು. ಈ ಬಗ್ಗೆಯೇ ಪೊಲೀಸ್ ಇಲಾಖೆ ಜೊತೆಗೆ ಪ್ರತ್ಯೇಕ ಸಭೆ ಕರೆಯುತ್ತೇನೆ. ಇನ್ನು ಸಮಯ ಸಂದರ್ಭಕ್ಕೆ ತಕ್ಕಂತೆ ನಾವೂ ಬದಲಾಗಬೇಕು. ತ್ವರಿತ ಗತಿಯಲ್ಲಿ ಕೆಲಸ ಮಾಡಬೇಕು. ನಮ್ಮಲ್ಲಿರುವ ತಂತ್ರಜ್ಞಾನದ ಸಾಧ್ಯತೆಗಳನ್ನು ತನಿಖೆಗೆ ಪರಿಣಾಮಕಾರಿಯಾಗಿ ಬಳಸಿಕೊಳ್ಳುವಂತೆ ಸಲಹೆ ನೀಡಿದರು.

ಈ ಸಭೆಯಲ್ಲಿ ಸಚಿವ ಪ್ರಿಯಾಂಕ ಖರ್ಗೆ, ಸಭೆಯಲ್ಲಿ ಗೃಹ ಸಚಿವ ಜಿ.ಪರಮೇಶ್ವರ್ ,ಮುಖ್ಯ ಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಎಲ್. ಕೆ. ಅತೀಕ್ , ಕಾರ್ಯದರ್ಶಿ ಡಾ.ಕೆ.ವಿ. ತ್ರಿಲೋಕ್ ಚಂದ್ರ, ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಸ್.ಆರ್.ಉಮಾಶಂಕರ್, ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್, ಪೊಲೀಸ್ ಆಯುಕ್ತ ಬಿ.ದಯಾನಂದ್ ಮತ್ತಿತರರು ಉಪಸ್ಥಿತರಿದ್ದರು.

Rameshwaram Cafe Blast ಹಿನ್ನೆಲೆ ರಾಜಧಾನಿಯಲ್ಲಿ 20 ವರ್ಷದಲ್ಲಿ ನಡೆದ ಸ್ಫೋಟಗಳಿವು, ಸಂಘಟನೆಗಳದ್ದೇ ಕುತಂತ್ರ!