ಬೆಂಗಳೂರು(ಜೂ.28): ಮನುಕುಲವನ್ನೇ ತಲ್ಲಣಗೊಳಿಸಿರುವ ಕೋವಿಡ್‌ ಸೋಂಕಿನಿಂದಾಗಿ ಸಾವಿನ ಸಂಖ್ಯೆ ವಿಪರೀತವಾಗುತ್ತಿರುವಂತೆ ಬೆಂಗಳೂರಿನಲ್ಲಿ ಮತ್ತಷ್ಟುಸ್ಮಶಾನ ನಿರ್ಮಾಣಕ್ಕಾಗಿ ಸೂಕ್ತ ಸ್ಥಳ ಹುಡುಕಾಟಕ್ಕೆ ಅಧಿಕಾರಿಗಳು ಮುಂದಾಗಿದ್ದಾರೆ.

"

ಕೊರೋನಾದಿಂದ ಮೃತಪಟ್ಟವರ ಅಂತ್ಯಕ್ರಿಯೆ ಮಾಡೋದು ಹೀಗೆ!

ಕೋವಿಡ್‌ನಿಂದಾಗಿ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಳವಾಗುತ್ತಿದೆ. ಮುಂದಿನ ದಿನದಲ್ಲಿ ಮೃತ ದೇಹಗಳ ಅಂತ್ಯಕ್ರಿಯೆ ನಡೆಸಲು ಸಮಸ್ಯೆಯಾಗಬಾರದು ಎಂಬ ಕಾರಣಕ್ಕಾಗಿ ಅಧಿಕಾರಿಗಳು ಸ್ಥಳ ಪತ್ತೆ ಮಾಡಲು ಮುಂದಾಗಿದ್ದಾರೆ.

ತಾನೇ ತೋಡಿದ ಗುಂಡಿಗೆ ಬಿದ್ದ ಚೀನಾ: ಡ್ರ್ಯಾಗನ್‌ ಬಣ್ಣ ಬಯಲು ಮಾಡಿದ ಲೈವ್ ವಿಡಿಯೋ!

ಸೋಂಕಿನಿಂದ ಮೃತರಾದ ದೇಹಗಳ ಅಂತ್ಯಕ್ರಿಯೆ ನಡೆಸಲು ಪ್ರತ್ಯೇಕ ತಂಡ ರಚನೆ ಮಾಡಲು ಮತ್ತು ದೇಹಗಳ ಅಂತ್ಯಕ್ರಿಯೆಯ ಸಲುವಾಗಿ ಮತ್ತಷ್ಟುಹೆಚ್ಚಿನ ಸ್ಥಳಗಳನ್ನು ಗುರುತಿಸಲು ಸಂಬಂಧಪಟ್ಟಅಧಿಕಾರಿಗಳು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.

ರಾಜ್ಯದಲ್ಲಿ ಹೆಚ್ಚುತ್ತಿದೆ ಕರೋನಾ

ರಾಜ್ಯದಲ್ಲಿ ಮಹಾಮಾರಿ ಕೊರೋನಾ ಸೋಂಕು ರುದ್ರನರ್ತನ ತೀವ್ರವಾಗಿದ್ದು, ಇದುವರೆಗಿನ ಎಲ್ಲಾ ದಾಖಲೆಗಳು ನಾಮಾವಶೇಷವಾಗುವಂತೆ ಶನಿವಾರ ಒಂದೇ ದಿನ 916 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಪೈಕಿ ಬೆಂಗಳೂರಿನಲ್ಲೇ 596 ಪ್ರಕರಣಗಳಿವೆ. ಇದು ಇಡೀ ರಾಜ್ಯವನ್ನು ಮತ್ತಷ್ಟುಆತಂಕಕ್ಕೆ ದೂಡಿದೆ.

‘ಕೊರೋನಾ ಔಷಧ’ ಕಂಡುಹಿಡಿದ ಬಾಬಾ ರಾಮ್‌ದೇವ್ ಸೇರಿ ಐವರ ಮೇಲೆ ಕ್ರಿಮಿನಲ್‌ ಕೇಸ್‌!

ಜೂ.5ರಂದು 515 ಮಂದಿಗೆ ಸೋಂಕು ದೃಢಪಟ್ಟಿದ್ದು ರಾಜ್ಯದಲ್ಲಿ ಈವರೆಗಿನ ಏಕದಿನದ ದಾಖಲೆಯಾಗಿತ್ತು. ಆದರೆ, ಶನಿವಾರದ ಸಂಖ್ಯಾಸ್ಫೋಟದ ಮೂಲಕ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 12 ಸಾವಿರದ ಗಡಿಗೆ ಅಂದರೆ 11,923ಕ್ಕೇರಿದೆ.