ರಾಜಧಾನಿ ಬೆಂಗಳೂರಿನಲ್ಲಿ ಎಬೋಲಾ ವೈರಸ್ ರೋಗ (EVD) ಶಂಕಿತ ಪ್ರಕರಣ ಪತ್ತೆಯಾಗಿರುವ ಮಾಹಿತಿ ಆತಂಕ ಮೂಡಿಸಿದೆ. ಉಗಾಂಡಾ ದೇಶದಿಂದ ಭಾರತಕ್ಕೆ ಆಗಮಿಸಿದ್ದ 28 ವರ್ಷದ ವಿದೇಶಿ ಮಹಿಳೆಯಲ್ಲಿ..

ಬೆಂಗಳೂರು (ಮೇ.26): ರಾಜಧಾನಿ ಬೆಂಗಳೂರಿನಲ್ಲಿ ಎಬೋಲಾ ವೈರಸ್ ರೋಗ (EVD) ಶಂಕಿತ ಪ್ರಕರಣ ಪತ್ತೆಯಾಗಿರುವ ಮಾಹಿತಿ ಆತಂಕ ಮೂಡಿಸಿದೆ. ಉಗಾಂಡಾ ದೇಶದಿಂದ ಭಾರತಕ್ಕೆ ಆಗಮಿಸಿದ್ದ 28 ವರ್ಷದ ವಿದೇಶಿ ಮಹಿಳೆಯಲ್ಲಿ ಎಬೋಲಾ ಸೋಂಕಿನ ಲಕ್ಷಣಗಳು ಕಂಡುಬಂದಿರುವ ಹಿನ್ನೆಲೆ, ಆರೋಗ್ಯ ಇಲಾಖೆ ಅಧಿಕಾರಿಗಳು ತಕ್ಷಣ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮೂಲಗಳ ಪ್ರಕಾರ, ಉಗಾಂಡಾದ ಕ್ಯಾಂಪಾಲಾ ಮೂಲದ ನಾಗಿರೆ ಲತಿಫಾ (28) ಎಂಬ ಮಹಿಳೆ ಉಗಾಂಡಾದಿಂದ ಅಹಮದಾಬಾದ್‌ಗೆ ಬಂದು, ಅಲ್ಲಿಂದ ಬೆಂಗಳೂರಿಗೆ ಪ್ರಯಾಣಿಸಿದ್ದರು. ಮೇ.23ರಂದು ಬೆಂಗಳೂರಿನ ರಾಯಲ್ ಏಸ್ ಬೋಟಿಕ್ ಹೋಟೆಲ್‌ನಲ್ಲಿ ತಂಗಿದ್ದ ಮಹಿಳೆ, ಹೋಟೆಲ್‌ನ ರೂಮ್ ನಂಬರ್ 303ರಲ್ಲಿ ವಾಸವಾಗಿದ್ದರು ಎನ್ನಲಾಗಿದೆ.

ಆಸ್ಪತ್ರೆಗೆ ಸ್ಥಳಾಂತರ

ಆದರೆ ಮಹಿಳೆಯಲ್ಲಿ ಎಬೋಲಾ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ, ಆರೋಗ್ಯ ಇಲಾಖೆ ಅಧಿಕಾರಿಗಳು ಅವರನ್ನು ತಕ್ಷಣವೇ ನಿಗಾದಲ್ಲಿಟ್ಟು ಇಂದು ಆಂಬುಲೆನ್ಸ್ ಮೂಲಕ ವಿಶೇಷ ಐಸೋಲೇಷನ್ ಆಸ್ಪತ್ರೆಗೆ ಸ್ಥಳಾಂತರಿಸಿದ್ದಾರೆ. ಮಹಿಳೆಯ ಸ್ವಾಬ್ ಮಾದರಿಯನ್ನು ಮೇ 25ರಂದು ಸಂಗ್ರಹಿಸಿ, ಹೆಚ್ಚಿನ ಪರೀಕ್ಷೆಗಾಗಿ ಪುಣೆಯ ವಿಶೇಷ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

ವರದಿ ಬರುವವರೆಗೆ ಮಹಿಳೆಯನ್ನು ವೈದ್ಯಕೀಯ ಮೇಲ್ವಿಚಾರಣೆಯಲ್ಲಿ ಇರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಬೆಳವಣಿಗೆಯ ಬೆನ್ನಲ್ಲೇ ಆರೋಗ್ಯ ಇಲಾಖೆ ಹೆಚ್ಚಿನ ಎಚ್ಚರಿಕೆ ವಹಿಸಿದ್ದು, ಸೋಂಕಿನ ಬಗ್ಗೆ ಅಧಿಕೃತ ವರದಿ ಬಂದ ನಂತರವೇ ಅಂತಿಮ ಮಾಹಿತಿ ಸ್ಪಷ್ಟವಾಗಲಿದೆ ಎಂದು ತಿಳಿಸಿದೆ.